ಟಾಪ್ ನ್ಯೂಸ್ ಕರಾವಳಿ – ದೇವರ ಚಿನ್ನಾಭರಣ ಕದ್ದ ದೇವಸ್ಥಾನದ ಅರ್ಚಕ ಸಿಕ್ಕಿ ಬಿದ್ದ! – ನೀರು ತುಂಬಿದ ಬಕೆಟಿಗೆ ಬಿದ್ದು ಮೃತಪಟ್ಟ ಮಗು – ದೈವ ನರ್ತಕ ಸಮುದಾಯದ ವಿರುದ್ಧ ಸುಳ್ಳು ಸುದ್ದಿ: ಕೇಸ್? – ಮರ್ಮಾಂಗ ಹಿಡಿದೆಳೆದ ಹುಡುಗರು: ಬಾಲಕ ಆಸ್ಪತ್ರೆಗೆ ದಾಖಲು – ಪಿಜಿ ವೈದ್ಯನೊಬ್ಬ ಕಂಠಪೂರ್ತಿ ಮದ್ಯ ಸೇವಿಸಿ ಆಸ್ಪತ್ರೆಗೆ ಬಂದ! NAMMUR EXPRESS NEWS ಕುಂದಾಪುರ: ಗಂಗೊಳ್ಳಿ ಖಾರ್ವಿಕೇರಿಯ ಶ್ರೀ ಮಹಾಂಕಾಳಿ ಅಮ್ಮನವರ ದೇವಸ್ಥಾನ ದೇವಿಗೆ ಅರ್ಪಿಸಿದ 21 ಲಕ್ಷ ಮೌಲ್ಯದ ಚಿನ್ನದ ಅಭರಣಗಳನ್ನು ಕಳವುಗೈದು ಮತ್ತು ಕೆಲವು ಚಿನ್ನಾಭರಣಗಳನ್ನು ನಕಲಿಯಾಗಿ ದೇವರ ಮೂರ್ತಿ ಮೇಲೆ ಹಾಕಿ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಶಿರಸಿ ತಾಲೂಕಿನ ಸಾಲಕಣಿ ಗ್ರಾಮದ ಮೂರೆಗಾರ ಎಂಬಲ್ಲಿನ ನರಸಿಂಹ ಭಟ್ (43) ಬಂಧಿತ ಆರೋಪಿಯಾಗಿದ್ದು, ಈತ ಗಂಗೊಳ್ಳಿ ಖಾರ್ವಿಕೇರಿ ಶ್ರೀ ಮಹಾಂಕಾಳಿ ದೇವಸ್ಥಾನದ ಅಚರ್ಕನಾಗಿದ್ದ.ಮಹಾಂಕಾಳಿ ದೇವಸ್ಥಾನದಲ್ಲಿ ದೇವಿಯ ಮೂರ್ತಿಗೆ ಆಡಳಿತ ಮಂಡಳಿ ಹಾಗೂ ಭಕ್ತಾದಿಗಳು ಸೇವೆ,…
Author: Nammur Express Admin
ದಿನೇ ದಿನೇ ಒತ್ತುವರಿ ತೆರವು ಕಿರಿಕ್! – ಮೂರು ಎಕರೆ ಒಳಗಿನ ಒತ್ತುವರಿ ತೆರವಿಲ್ಲ ನಿಜಾನಾ? – ಮಲೆನಾಡಲ್ಲಿ ಜಮೀನು ತೆರವಿನ ವಿರುದ್ಧ ವಿಶೇಷ ಗ್ರಾಮ ಸಭೆ NAMMUR EXPRESS NEWS ಚಿಕ್ಕಮಗಳೂರು: ಒತ್ತುವರಿ ತೆರವು ವಿರುದ್ಧ ಮಲೆನಾಡು, ಕರಾವಳಿ ಭಾಗದಲ್ಲಿ ಭಾರೀ ಜನಾಂದೋಲನಕ್ಕೆ ವೇದಿಕೆ ಸಿದ್ಧವಾಗಿದೆ. ಮಲೆನಾಡಿಗರನ್ನು ಒಕ್ಕಲೆಬ್ಬಿಸುವ ಸಲುವಾಗಿ ಜನವಿರೋಧಿ ಅರಣ್ಯ ಕಾಯ್ದೆಗಳನ್ನು ಜಾರಿ ಮಾಡಲಾಗುತ್ತಿದೆ. ಸೆಕ್ಷನ್ 4 ಮುಂದೆ ಮೀಸಲು ಅರಣ್ಯವಾಗಲಿದ್ದು, ಮೀಸಲು ಅರಣ್ಯವಾದರೆ ಆ ಜಾಗಕ್ಕೆ ಕಾಲಿಡದಂತೆ ಅರಣ್ಯ ಇಲಾಖೆ ನಿರ್ಬಂಧ ಮಾಡಲಿದೆ ಎಂದು ಚಿಕ್ಕಮಗಳೂರು ಜಿಲ್ಲೆ ಜಯಪುರ ಮೇಗುಂದಾ ಹೋಬಳಿ ರೈತ ಮತ್ತು ಕಾರ್ಮಿಕ ಹಿತರಕ್ಷಣಾ ಸಮಿತಿ ಸಭೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದೆ. ಕಸ್ತೂರಿ ರಂಗನ್ ವರದಿ, ಸೆಕ್ಷನ್ 4, ಸೆಕ್ಷನ್ 17 ಅರಣ್ಯ ಕಾಯ್ದೆಗಳು ಜಮೀನು ಉಳ್ಳವರ ಸಮಸ್ಯೆಯಲ್ಲ, ಪ್ರತಿಯೊಬ್ಬ ಜನಸಾಮಾನ್ಯನ ಸಮಸ್ಯೆಯಾಗಿದೆ. ಇವುಗಳು ಜಾರಿಯಾದರೆ ಜನರು ಸ್ವತಂತ್ರವಾಗಿ ಈ ನೆಲದಲ್ಲಿ ವಾಸಿಸುವ ಹಕ್ಕು ಕಳೆದುಕೊಳ್ಳುವ ಜೊತೆಗೆ ವಸತಿ ರಹಿತ ಬಡವರು ನಿವೇಶನ…
ಮಲೆನಾಡು, ಕರಾವಳಿ ಮತ್ತೆ ಮಳೆ ಆರ್ಭಟ! – ಒಂದು ವಾರ ಮಳೆ ಸಾಧ್ಯತೆ: ರೈತರಿಗೆ ಸಂಕಷ್ಟ – ಮಲೆನಾಡು ಭಾಗದಲ್ಲಿ ಅಡಿಕೆ ಬೆಳೆಗೆ ಎಫೆಕ್ಟ್ NAMMUR EXPRESS NEWS ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಮೂರ್ನಾಲ್ಕು ದಿನ ಬಿರುಸಾಗಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮೂನ್ಸೂಚನೆ ಕೊಟ್ಟಿದೆ. ಇನ್ನು ಭಾನುವಾರ ಮಲೆನಾಡು, ಕರಾವಳಿ ಹಲವು ತಾಲೂಕುಗಳಲ್ಲಿ ಭಾರೀ ಮಳೆಯಾಗಿದೆ. ಶಿವಮೊಗ್ಗ, ತೀರ್ಥಹಳ್ಳಿ, ಕೊಪ್ಪಳದ ಗಂಗಾವತಿ, ಬೆಂ.ಗ್ರಾಮಾಂತರ ದೊಡ್ಡಬಳ್ಳಾಪುರ, ಹೆಸರುಟ್ಟ. ದಕ್ಷಿಣ ಕನ್ನಡದ ಮಂಗಳೂರು, ದಾವಣಗೆರೆ, ಗದಗ ಸೇರಿ ಇತರೆ ಭಾಗಗಳಲ್ಲಿ ಭಾನುವಾರ ವರ್ಷಧಾರೆಯಾಗಿದೆ. ಬೆಳಗಾವಿ, ವಿಜಯಪುರದಲ್ಲಿ ಸೆ.23 ರಿಂದ ಮುಂದಿನ ಎರಡು ದಿನ ಹಾಗೂ ಧಾರವಾಡ, ಹಾವೇರಿ, ಬೆಂ.ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ, ಶಿವಮೊಗ್ಗದಲ್ಲಿ ಸೆ.23ರಂದು ಭಾರಿ ಮಳೆ ಬೀಳುವ ಸಂಭವ ಇರುವುದರಿಂದ ಹವಾಮಾನ ಇಲಾಖೆ ಯೆಲ್ಲೋ ಅರ್ಲಟ್ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಕಲಬುರಗಿ, ರಾಯಚೂರು, ಕೊಪ್ಪಳ ಮತ್ತು ಯಾದಗಿರಿಯಲ್ಲಿ ಸೆ.24ರಿಂದ ಸೆ.25ರವರೆಗೆ…
ಆಯುರ್ವೇದ ಆಸ್ಪತ್ರೆಯಲ್ಲಿ ಅಗ್ನಿ ಅವಘಡ! – ಉಡುಪಿ ದೊಡ್ಡಣಗುಡ್ಡೆಯಲ್ಲಿ ನಡೆದ ಘಟನೆ: ಅಗ್ನಿಶಾಮಕ ದಳದವರಿಂದ ಕಾರ್ಯಾಚರಣೆ – ಅದೃಷ್ಟವಶಾತ್ ರೋಗಿಗಳು ಯಾರೂ ಇರಲಿಲ್ಲ! ಉಡುಪಿ: ದೊಡ್ಡಣಗುಡ್ಡೆ ಬಬ್ಬುಸ್ವಾಮಿ ಗುಡಿಯ ಬಳಿ ಇರುವ ಧನ್ವಂತರಿ ಆಯುರ್ವೇದ ಆಸ್ಪತ್ರೆಯಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಅಗ್ನಿಶಾಮಕ ದಳದವರು ಕಾರ್ಯಾಚರಣೆ ನಡೆಸಿದ್ದಾರೆ. ಕಟ್ಟಡ ನವೀಕರಣ ಕೆಲಸ ನಡೆಯುತ್ತಿತ್ತು ಎಂಬುದು ತಿಳಿದು ಬಂದಿದ್ದು, ಇಲ್ಲಿ ಅದೃಷ್ಟವಶಾತ್ ರೋಗಿಗಳು ಯಾರೂ ಇರಲಿಲ್ಲ. ಬೆಳಗ್ಗೆ ದೈನಂದಿನ ಕೆಲಸಕ್ಕೆ ಬರುವರು ಅಡುಗೆ ಕೋಣೆಯಲ್ಲಿ ಕೆಲಸ ಪ್ರಾರಂಭಿಸುವಾಗ ಹಾಲ್ ನೊಳಗೆ ಶಬ್ದ ಕೇಳಿ ಬಂದಿದ್ದು ಹೊರಗೆ ಬಂದು ನೋಡುವಾಗ ಬೆಂಕಿ ಹತ್ತಿಕೊಂಡಿತ್ತು. ಕೂಡಲೇ ವೈದ್ಯರಿಗೆ ಫೋನ್ ಮಾಡಿ ತಿಳಿಸಿದ್ದು, ಅಗ್ನಿಶಾಮಕ ದಳದವರಿಗೆ ತಿಳಿಸಲಾಗಿದೆ. ಮೊದಲ ಫ್ಲೋರ್ ನಲ್ಲಿ ಇಬ್ಬರು ಕೆಲಸದವರು ಉಳಿದುಕೊಂಡಿದ್ದು ಅವರು ಹೊರಗೆ ಬಂದಿರುವರು. ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಅಂತ ಹೇಳಲಾಗಿದ್ದು, ಎರಡು ಫೈರ್ ಎಂಜಿನ್ ಗಳನ್ನು ಬಳಸಿ ಕಾರ್ಯಾಚರಣೆ ಮಾಡುತ್ತಿದ್ದಾರೆ. ಅಗ್ನಿಶಾಮಕ ದಳದ ತ್ವರಿತ ಕಾರ್ಯಾಚರಣೆಯಿಂದ ಬೆಂಕಿ ತಹಬದಿಗೆ ಬಂದಿದೆ.
ಈ ದಿನದ ರಾಶಿ ಭವಿಷ್ಯ ಹೇಗಿದೆ? – ಯಾವ ರಾಶಿಯವರಿಗೆ ಲಾಭ? ಯಾವ ರಾಶಿಯವರಿಗೆ ನಷ್ಟ? NAMMUR EXPRESS NEWS ಗ್ರಹಗಳ ಸ್ಥಾನ ಬದಲಾವಣೆಯಿಂದ ಮೇಷದಿಂದ ಮೀನ ರಾಶಿವರೆಗಿನ ಎಲ್ಲಾ ರಾಶಿಯವರಿಗೆ ಇಂದಿನ ರಾಶಿ ಭವಿಷ್ಯ ಹೇಗಿರಲಿದೆ? ಯಾವ ರಾಶಿಯವರಿಗೆ ಅದೃಷ್ಟ? ಯಾವ ರಾಶಿಯವರು ಎಚ್ಚರದಿಂದಿರಬೇಕು? ** ಮೇಷ ರಾಶಿ : ಇಂದು ನಿಮ್ಮ ಮಾತಿನ ಮೇಲೆ ಹಿಡಿತವಿರಲಿ. ಅತಿಯಾದ ಕೋಪವನ್ನು ತಪ್ಪಿಸಿ ಮತ್ತು ಶಾಂತ ಮನಸ್ಸಿನಿಂದ ನಿರ್ಧಾರಗಳನ್ನು ತೆಗೆದುಕೊಳ್ಳಿ. ಪಾಲುದಾರಿಕೆ ವ್ಯವಹಾರದಲ್ಲಿ ಯಾರನ್ನೂ ಕುರುಡಾಗಿ ನಂಬಬೇಡಿ. ನೀವು ಕೆಲಸದ ಹೆಚ್ಚುವರಿ ಜವಾಬ್ದಾರಿಗಳನ್ನು ಪಡೆಯುತ್ತೀರಿ. ಕೆಲಸದ ಸ್ಥಳದಲ್ಲಿ ಅನಗತ್ಯ ವಾದಗಳನ್ನು ತಪ್ಪಿಸಿ. ಆಸ್ತಿ ವಿಚಾರದಲ್ಲಿ ಕುಟುಂಬದಲ್ಲಿ ಕಲಹ ಉಂಟಾಗಬಹುದು. ಸಂಪತ್ತಿನ ಒಳಹರಿವಿಗೆ ಹೊಸ ಮಾರ್ಗಗಳು ಸೃಷ್ಟಿಯಾಗಲಿವೆ. ** ವೃಷಭ ರಾಶಿ : ಇಂದು ಸ್ವಯಂ ನಿಯಂತ್ರಣದಲ್ಲಿರಿ. ಕೋಪವನ್ನು ತಪ್ಪಿಸಿ. ಮಾತಿನಲ್ಲಿ ತಾಳ್ಮೆ ಇರಲಿ. ನೀವು ಹಳೆಯ ಸ್ನೇಹಿತರನ್ನು ಭೇಟಿ ಮಾಡಬಹುದು. ರುಚಿಕರವಾದ ಆಹಾರದಲ್ಲಿ ಆಸಕ್ತಿ ಹೆಚ್ಚಾಗಬಹುದು. ತಂದೆಯ ಆರೋಗ್ಯದ ಬಗ್ಗೆ ಕಾಳಜಿ…
ಮಲೆನಾಡಿನಲ್ಲಿ ಶಾಂತಿಯುತ ಗಣೇಶೋತ್ಸವ! – ಎಲ್ಲಿಯೂ ಗಲಾಟೆ ಇಲ್ಲ, ಅತ್ಯಂತ ಸಂಭ್ರಮದಿಂದ ಗಣೇಶೋತ್ಸವ – ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಯಲ್ಲಿ ಶಾಂತಿ ಮೆರೆದ ಮಲೆನಾಡಿಗರು – ಸಾವಿರಾರು ಗಣಪತಿ ಇಟ್ಟು ಧಾರ್ಮಿಕ ಸೇವೆ NAMMUR EXPRESS NEWS ಶಿವಮೊಗ್ಗ / ಚಿಕ್ಕಮಗಳೂರು : ಮಲೆನಾಡಿನಲ್ಲಿ ಈ ಬಾರಿ ಗಣೇಶೋತ್ಸವ ಅಚ್ಚುಕಟ್ಟಾಗಿ ಹಾಗೂ ಶಾಂತಿಯುತವಾಗಿ ನಡೆದಿದೆ. ಗಣೇಶೋತ್ಸವವನ್ನು ಸಂಭ್ರಮದಿಂದ ಜನರು ಆಚರಣೆ ಮಾಡಿದ್ದಾರೆ, ಸುಮಾರು 15 ದಿನಗಳ ಕಾಲ ಗಣೇಶೋತ್ಸವವನ್ನು ಆಚರಣೆ ಮಾಡಿರುವ ಭಕ್ತರು ಎಲ್ಲಿಯೂ ಕೂಡ ಚಿಕ್ಕ ಗಲಾಟೆಗಳು ನಡೆಯುದಂತೆ ಶಾಂತಿಯುತವಾಗಿ ಗಣೇಶೋತ್ಸವವನ್ನು ಆಚರಣೆ ಮಾಡಿದ್ದಾರೆ. ಭದ್ರಾವತಿಯಲ್ಲಿ ಸಣ್ಣ ಗಲಾಟೆಯನ್ನು ಹೊರತುಪಡಿಸಿ ಶಿವಮೊಗ್ಗ ಹಾಗೂ ಚಿಕ್ಕಮಗಳೂರಿನ ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ಎಲ್ಲಾ ಗಣೇಶೋತ್ಸವ ಸಮಿತಿಗಳು ಶಾಂತಿಯುತವಾಗಿ ಗಣೇಶೋತ್ಸವವನ್ನು ಆಚರಿಸಿ, ಈ ಬಾರಿ ಅದ್ದೂರಿ ಮೆರವಣಿಗೆ ಗಣೇಶೋತ್ಸವ, ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜನೆ ಮಾಡಿದ್ದಾರೆ. ಜೊತೆಗೆ ಗಣೇಶೋತ್ಸವದ ವೇಳೆ ಅನೇಕ ಕಡೆ ಸಾಮಾಜಿಕ ಸೇವೆಯನ್ನು ಕೂಡ ಮಾಡಿದ್ದಾರೆ. ಈ ಮೂಲಕ ಮಲೆನಾಡಿನ ಜನ ಶಾಂತಿಯುತ ಗಣೇಶ…
ತೀರ್ಥಹಳ್ಳಿ ಪಟ್ಟಣದಲ್ಲಿ ಬೈಕ್ ಕಳ್ಳರ ಆಗಮನ?! – ಬೈಕ್ ಕದಿಯಲು ಯತ್ನಿಸಿ ವಿಫಲ ಯತ್ನ: ಎಲ್ಲೂ ಸಿಸಿಟಿವಿ ಇಲ್ಲ – ಅಡಿಕೆ ಕಳ್ಳರು, ಬೈಕ್ ಕಳ್ಳರು ಹೆಚ್ಚಾಗುತ್ತಾರೆ ಹುಷಾರ್..! NAMMUR EXPRESS NEWS ತೀರ್ಥಹಳ್ಳಿ: ತೀರ್ಥಹಳ್ಳಿ ಭಾಗದಲ್ಲಿ ಇತ್ತೀಚಿಗೆ ಬೈಕ್ ಕಳ್ಳತನ ಹಾಗೂ ಅಡಿಕೆ ಕಳ್ಳತನ ಹೆಚ್ಚಾಗುತ್ತಿದ್ದು ಪೊಲೀಸ್ ಇಲಾಖೆ ಅಂಥವರ ವಿರುದ್ಧ ಕ್ರಮವನ್ನು ಕೈಗೊಂಡಿದೆ. ಡಿ ವೈ ಎಸ್ ಪಿ ಗಜಾನನ ವಾಮನ ಸುತಾರ ಅವರ ನೇತೃತ್ವದಲ್ಲಿ ಎಲ್ಲಾ ವಿಭಾಗದ ಪೋಲಿಸ್ ಇನ್ಸ್ಪೆಕ್ಟರ್ ಹಾಗೂ ಪೋಲಿಸ್ ಸಿಬ್ಬಂದಿಗಳು ಅತ್ಯುತ್ತಮ ಕೆಲಸವನ್ನು ಮಾಡುತ್ತಿದ್ದಾರೆ. ಈ ನಡುವೆ ಇತ್ತೀಚಿಗೆ ತೀರ್ಥಹಳ್ಳಿ ಮಾರಿಕಾಂಬ ದೇವಸ್ಥಾನದ ಸಮೀಪದಲ್ಲಿ ಬೈಕ್ ಒಂದನ್ನು ಕಳವು ಮಾಡಲು ಕಳ್ಳರು ಯತ್ನಿಸಿದ ಘಟನೆ ಈಗ ಬೆಳಕಿಗೆ ಬಂದಿದೆ. ಸಿಸಿ ಕ್ಯಾಮೆರಾದಲ್ಲಿ ಈ ದೃಶ್ಯ ಸೆರೆಯಾಗಿದ್ದು, ತೀರ್ಥಹಳ್ಳಿ ಅನೇಕ ಕಡೆ ಕಳ್ಳತನ ಪ್ರಕರಣವು ಕಂಡು ಬರುತ್ತಿದ್ದು ಅದರಲ್ಲಿ ಚಿಕ್ಕ ಪುಟ್ಟ ಕಳ್ಳತನ ಹೆಚ್ಚುತ್ತಿದೆ., ಅಡಿಕೆ ಸೀಜನ್ ಆರಂಭವಾಗಿರುವುದರಿಂದ ಜನರು ಎಚ್ಚರವನ್ನು ವಹಿಸಲೇಬೇಕು. ಅಡಿಕೆ…
ಶಿಕ್ಷಕರ ಸೌಹಾರ್ದ ಭವನ’ಕ್ಕೆ ಎಂಪಿ ಭೇಟಿ – ನಾಳೆ ನಡೆಯಲಿರುವ ಕಾರ್ಯಕ್ರಮ: ಸಂಘದ ವತಿಯಿಂದ ಗೌರವ ಅಭಿನಂದನೆ NAMMUR EXPRESS NEWS ತೀರ್ಥಹಳ್ಳಿ: ತೀರ್ಥಹಳ್ಳಿಯ ಕುವೆಂಪು ನಗರದಲ್ಲಿ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸೌಹಾರ್ದ ಸಹಕಾರಿ ಸಂಘ ನಿರ್ಮಾಣ ಮಾಡಿರುವ ನೂತನ “ಶಿಕ್ಷಕರ ಸೌಹಾರ್ದ ಭವನ” ಇದರ ಉದ್ಘಾಟನಾ ಪೂರ್ವದಲ್ಲಿ ಶನಿವಾರ ಸಂಘಕ್ಕೆ ಭೇಟಿ ನೀಡಿ ಪದಾಧಿಕಾರಿಗಳಿಗೆ ಶುಭಾಶಯ ಕೋರಿ ಸಂಘದ ವತಿಯಿಂದ ಗೌರವ ಅಭಿನಂದನೆ ಸ್ವೀಕರಿಸಲಾಯಿತು. ಈ ಸಮಯದಲ್ಲಿ ಶಾಸಕರಾದ ಆರಗ ಜ್ಞಾನೇಂದ್ರ ಅವರು, ಸಂಘದ ಅಧ್ಯಕ್ಷರಾದ ಮಹಾಬಲೇಶ್ವರ ಹೆಗಡೆ ಅವರು ಹಾಗೂ ಪದಾಧಿಕಾರಿಗಳು ಮತ್ತು ಅನೇಕ ಮುಖಂಡರು ಉಪಸ್ಥಿತರಿದ್ದರು. 10ನೇ ಮಹಾಸಭೆ, ಪ್ರತಿಭಾ ಪುರಸ್ಕಾರ ಹಾಗೂ ನಿವೃತ್ತ ಶಿಕ್ಷಕರಿಗೆ ಸನ್ಮಾನ ಕಾರ್ಯಕ್ರಮ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸೌಹಾರ್ದ ಸಹಕಾರಿ ಸಂಘ ಇದರ ನೂತನ ಕಟ್ಟಡದ ಉದ್ಘಾಟನೆ ಮತ್ತು 10ನೇ ಮಹಾಸಭೆ, ಪ್ರತಿಭಾ ಪುರಸ್ಕಾರ ಹಾಗೂ ನಿವೃತ್ತ ಶಿಕ್ಷಕರಿಗೆ ಸನ್ಮಾನ ಕಾರ್ಯಕ್ರಮ ಸೆ.22 ಭಾನುವಾರ…
ತೀರ್ಥಹಳ್ಳಿಯಲ್ಲಿ ಬಿಜೆಪಿ ಸದಸ್ಯತ್ವ ಅಭಿಯಾನ – ಸಂಸದ ರಾಘವೇಂದ್ರ ಅವರಿಂದ ಸದಸ್ಯತ್ವ ನೊಂದಣಿ – ಆರಗ ಜ್ಞಾನೇಂದ್ರ ನೇತೃತ್ವದಲ್ಲಿ ಹಳ್ಳಿ ಹಳ್ಳಿಯಲ್ಲಿ ಚಾಲನೆ NAMMUR EXPRESS NEWS ತೀರ್ಥಹಳ್ಳಿ: ತೀರ್ಥಹಳ್ಳಿ ಬಿಜೆಪಿ ವತಿಯಿಂದ ಬಸ್ ಸ್ಟಾಂಡ್ ಆವರಣದಲ್ಲಿ ಸದಸ್ಯತ್ವ ನೊಂದಾವಣಿಗೆ , ಲೋಕಸಭಾ ಸದಸ್ಯ ಬಿ.ವೈ ರಾಘವೇಂದ್ರ ಹಾಗೂ ತೀರ್ಥಹಳ್ಳಿ ಶಾಸಕರು ಆರಗ ಜ್ಞಾನೇಂದ್ರ ಚಾಲನೆ ನೀಡಿದರು. ಈಗಾಗಲೇ ಹಳ್ಳಿ ಹಳ್ಳಿಯಲ್ಲಿ ಬಿಜೆಪಿ ಸದಸ್ಯತ್ವ ಅಭಿಯಾನ ನಡೆಯುತ್ತಿದೆ. ಇದೀಗ ತೀರ್ಥಹಳ್ಳಿಯಲ್ಲಿ ವೇಗ ಸಿಕ್ಕಿದೆ. ಕಾರ್ಯಕ್ರಮದಲ್ಲಿ ಮಾತನಾಡಿದ ರಾಘವೇಂದ್ರ ಅವರು, ಹತ್ತು ವರ್ಷಗಳ ಹಿಂದೆ ಪ್ರಧಾನಿ ನರೇಂದ್ರ ಮೋದಿಯವರು ಸ್ವಚ್ಛತಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ದೇಶದ ಅಭಿವೃದ್ಧಿಗಾಗಿ ಶ್ರಮವಹಿಸಿದ್ದಾರೆ.ಇದೀಗ 10 ವರ್ಷದ ನಂತರ ನಾವು ಕೂಡ ದೇಶಕ್ಕಾಗಿ ಶ್ರಮ ಪಡ ಬೇಕಾಗಿದೆ. ಪ್ರಪಂಚದಲ್ಲಿ ಹೆಚ್ಚಿನ ಸದಸ್ಯತ್ವವನ್ನು ಹೊಂದಿರುವ ಪಕ್ಷ, ಸದಾ ದೇಶದ ಚಿಂತನೆಯನ್ನು ಹೊಂದಿರುವ ಏಕೈಕಪಕ್ಷ ಎಂದು ಬಿಂಬಿಸಿಕೊಳ್ಳುತ್ತದೆ. ಪರಿಸರದ ಬಗ್ಗೆ ಕಾಳಜಿ ವಹಿಸಿ ಹಲವಾರು ಕಾರ್ಯಕ್ರಮದೊಂದಿಗೆ ಪಾಲ್ಗೊಳ್ಳುವ ಮೂಲಕ ಕರ್ತವ್ಯ ಮೆರೆಯುವುದು…
ತೀರ್ಥಹಳ್ಳಿ ಟಾಪ್ ನ್ಯೂಸ್ ಬ್ಯಾಂಕಿನ ಕೋಟಿ ಕೋಟಿ ನುಂಗಿದ್ದ ಆರಗದ ಬ್ಯಾಂಕ್ ಉದ್ಯೋಗಿ ಆತ್ಮಹತ್ಯೆ! – ಆನ್ಸೆನ್ ವ್ಯವಹಾರದಲ್ಲಿ ಹಣ ಕಳೆದುಕೊಂಡಿದ್ದ: ಆತ್ಮಹತ್ಯೆಗೆ ಮುಂದಾಗಿದ್ದ – ತೂದೂರು ಕಾಡಿನಲ್ಲಿ ಸಿಕ್ಕ ಶವದ ಗುರುತು ಪತ್ತೆ! – ತೀರ್ಥಹಳ್ಳಿಯ ಮೇಳಿಗೆಯಲ್ಲಿ ಹೆಬ್ಬಾವು ಹಿಡಿದ ಯುವಕರು! – ತೀರ್ಥಹಳ್ಳಿಯಿಂದ ಅಕ್ರಮ ಗೋ ಸಾಗಣೆ? NAMMUR EXPRESS NEWS ತೀರ್ಥಹಳ್ಳಿ: ಹಣ ಮಾಡುವ ದುರಾಸೆಗೆ ಬಿದ್ದು ಬ್ಯಾಂಕಿನಲ್ಲಿ ಠೇವಣಿ ಇಟ್ಟಿದ್ದ ಗ್ರಾಹಕರ ಕೋಟಿ ಕೋಟಿ ಹಣ ವಂಚನೆ ಮಾಡಿದ್ದ ಬ್ಯಾಂಕ್ ಉದ್ಯೋಗಿಯೊಬ್ಬ ಆತ್ಮಹತ್ಯೆಗೆ ಶರಣಾಗಿದ್ದಾನೆ. ಈ ಹಿಂದೆ ಸಾಗರದಲ್ಲಿ ಕೂಡ ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ್ದ. ಇದೀಗ ದುರಂತ ಅಂತ್ಯ ಕಂಡಿದ್ದಾನೆ. ತೀರ್ಥಹಳ್ಳಿ ತಾಲೂಕಿನ ಆರಗದ ಸುನಿಲ್ (35 ವರ್ಷ) ಯಡೂರಿನ ಕೆನರಾ ಬ್ಯಾಂಕ್ ನಲ್ಲಿ ಅಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಸಂದರ್ಭದಲ್ಲಿ 8 ಅಕೌಂಟ್ ಗಳಿಂದ ಠೇವಣಿ ಇಟ್ಟಿದ್ದ ಸುಮಾರು 1 ಕೋಟಿಗೂ ಅಧಿಕ ಹಣವನ್ನು ವಂಚಿಸಿದ್ದ. ಈ ಬಗ್ಗೆ 2023 ಡಿಸೆಂಬರ್ ನಲ್ಲಿ ನಗರ ಪೊಲೀಸ್…