ಟಾಪ್ 3 ನ್ಯೂಸ್
ಬೆಳಗಾವಿ ಗಣಪತಿ ವಿಸರ್ಜನೆ ಗಲಾಟೆ ಮೂವರಿಗೆ ಚಾಕು ಇರಿತ!
– ಬಿಯರ್ ಬೆಲೆ ಹೆಚ್ಚಳಕ್ಕೆ ಚಿಂತನೆ : ಮದ್ಯಪ್ರಿಯರಿಗೆ ಮತ್ತೆ ಶಾಕ್
– ಬಿಜೆಪಿ ಶಾಸಕ ಮುನಿರತ್ನಗೆ ನ್ಯಾಯಾಂಗ ಬಂಧನ: ಏನಾಗುತ್ತೆ?
NAMMUR EXPRESS NEWS
ಬೆಳಗಾವಿ: ಗಣಪತಿ ವಿಸರ್ಜನಾ ಮೆರವಣಿಗೆ ವೇಳೆ ಹಿಂಸಾಚಾರ ನಡೆದಿದ್ದು, ಮೂವರು ಹಾಸ್ಟೆಲ್ ವಿದ್ಯಾರ್ಥಿಗಳಿಗೆ ದುಷ್ಕರ್ಮಿಗಳು ಚಾಕುವಿನಿಂದ ಇರಿದಿದ್ದಾರೆ.
ಬೆಳಗಾವಿ ನಗರದ ಚೆನ್ನಮ್ಮ ವೃತ್ತದ ಬಳಿ ಘಟನೆ ನಡೆದಿದೆ. ಮೆರವಣಿಗೆಯಲ್ಲಿ ಡ್ಯಾನ್ಸ್ ಮಾಡುವಾಗ ಕಾಲು ತಾಗಿದ್ದಕ್ಕೆ ಕಿರಿಕ್ ಮಾಡಿ ವಿದ್ಯಾರ್ಥಿಗಳ ಹೊಟ್ಟೆ, ಕತ್ತು, ಬೆನ್ನಿನ ಭಾಗಕ್ಕೆ ದುಷ್ಕರ್ಮಿಗಳು ಚಾಕುವಿನಿಂದ ಇರಿದಿದ್ದಾರೆ. ಬೆಳಗಾವಿಯ ಚರ್ಚ್ ಗಲ್ಲಿಯ ಯುವಕರ ಗ್ಯಾಂಗ್ ನಿಂದ ಕೃತ್ಯ ನಡೆದಿದೆ ಎನ್ನಲಾಗಿದೆ.
ಸಮಾಜ ಕಲ್ಯಾಣ ವಸತಿ ನಿಲಯದ ಮೂವರು ವಿದ್ಯಾರ್ಥಿಗಳಿಗೆ ಗಾಯಗಳಾಗಿವೆ. ಪ್ರವೀಣ್ ಗುಂಡ್ಯಾಗೋಳ್ ಎಂಬಾತನಿಗೆ ಗಂಭೀರ ಗಾಯವಾಗಿದ್ದು, ಬೆಳಗಾವಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ದರ್ಶನ್ ಪೀ್, ತೀಶ್ ಪೂಜಾರಿಗೆ ಬಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.ಆರೋಪಿಗಳನ್ನು ಚೇಸ್ ಮಾಡಿ ಬಂಧಿಸಿದ ಪೊಲೀಸರು: ಚಾಕು ಇರಿದು ಪರಾರಿಯಾಗುತ್ತಿದ್ದ ಮೂವರು ಆರೋಪಿಗಳನ್ನು ಎಪಿಎಂಸಿ ಠಾಣೆಯ ಪೊಲೀಸರು ಬೆನ್ನು ಹತ್ತಿ ಚೇಸ್ ಮಾಡಿ ಹಿಡಿದಿದ್ದಾರೆ. ಆರೋಪಿಗಳು ಗಾಂಜಾ ಮತ್ತಿನಲ್ಲಿ ಚಾಕು ಇರಿದಿರುವ ಶಂಕೆ ವ್ಯಕ್ತವಾಗಿದೆ. ಸದ್ಯ ವಶಕ್ಕೆ ಪಡೆದ ಆರೋಪಿಗಳ ವಿಚಾರಣೆ ನಡೆಯುತ್ತಿದೆ. ಉಳಿದ ಆರೋಪಿಗಳಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ. ಈ ಘಟನೆ ಬೆಳಗಾವಿ ಎಪಿಎಂಸಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಬಿಯರ್ ಬೆಲೆ ಹೆಚ್ಚಳಕ್ಕೆ ಚಿಂತನೆ : ಮದ್ಯಪ್ರಿಯರಿಗೆ ಮತ್ತೆ ಶಾಕ್!
ಬೆಂಗಳೂರು: ರಾಜ್ಯದಲ್ಲಿ ಮತ್ತೊಮ್ಮೆ ಬಿಯರ್ ಬೆಲೆ ಏರಿಸಲು ಸರ್ಕಾರ ಮುಂದಾಗಿದೆ. ಬಿಯರ್ ಬೆಲೆ ಏರಿಕೆಗೆ ಅಬಕಾರಿ ಇಲಾಖೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದು, ಇದಕ್ಕೆ ಸರ್ಕಾರ ಅಸ್ತು ಅಂದಿದೆ. ಹೀಗಾಗಿ ಅಕ್ಟೋಬರ್ 1ರಿಂದಲೇ ಬಿಯರ್ ಇನ್ನಷ್ಟು ದುಬಾರಿಯಾಗುವ ಸಾಧ್ಯತೆ ಇದೆ. ಬಾಟಲಿ ಮೇಲೆ 15-20 ರೂ. ತನಕ ಹೆಚ್ಚಿಸುವ ಸಾಧ್ಯತೆಯಿದೆ. ಕಳೆದ ಆ.29ರಿಂದ ಪ್ರೀಮಿಯಂ, ಸೆಮಿಪ್ರೀಮಿಯಂ ಮದ್ಯದ ದರ ಇಳಿಸಿದ ಬೆನ್ನಲ್ಲೇ ಬಿಯರ್ ದರ ಹೆಚ್ಚಳಕ್ಕೆ ಸರ್ಕಾರ ಮುಂದಾಗಿದ್ದು, ಅ.1ರಿಂದ ದರ ಪರಿಷ್ಕರಣೆಗೊಳ್ಳುವ ಸಾಧ್ಯತೆ ಇದೆ. ಒಂದೇ ವರ್ಷದ ಅವಧಿಯಲ್ಲಿ ಎರಡು ಬಾರಿ ಮದ್ಯಪ್ರಿಯರಿಗೆ ಶಾಕ್ ನೀಡಿದ್ದ ಸರ್ಕಾರ ಈಗ ಮತ್ತೊಮ್ಮೆ ಶಾಕ್ ಕೊಡಲು ಮುಂದಾಗಿದೆ. ಈಗಾಗಲೇ ಒಂದು ವರ್ಷದ ಅವಧಿಯಲ್ಲಿ ಎರಡು ಬಾರಿ ಮದ್ಯ ದರ ಏರಿಕೆ ಮಾಡಿ ಸರ್ಕಾರ ಶಾಕ್ ನೀಡಿತ್ತು.2023ರ ಜುಲೈನಲ್ಲಿ ಮಂಡಿಸಿದ್ದ ಬಜೆಟ್ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಐಎಂಎಲ್ ಮೇಲೆ ಶೇ.20 ಮತ್ತು ಬಿಯರ್ ಮೇಲೆ ಶೇ.10 ಅಬಕಾರಿ ಸುಂಕ ಹೆಚ್ಚಿಸಿದ್ದರು. ಇದಕ್ಕೂ ಮುನ್ನ ರಾಜ್ಯದಲ್ಲಿ ತಯಾರಿಸಲಾದ ಅಥವಾ ಆಮದು ಮಾಡಿಕೊಳ್ಳುವ ಬಿಯರ್ ಬಾಟಲ್ ಮೇಲೆ ಹೆಚ್ಚವರಿ ಅಬಕಾರಿ ಸುಂಕವನ್ನು ಶೇ.10ರಷ್ಟು ಹೆಚ್ಚಿಸಲಾಗಿತ್ತು. ಬಿಯರ್ ಬೆಲೆ ಹೆಚ್ಚಿಸುವ ಸರ್ಕಾರದ ನಿರ್ಧಾರಕ್ಕೆ ಬಾರ್ ಮಾಲೀಕರು ಬೇಸರ ವ್ಯಕ್ತಪಡಿಿದ್ದಾರೆ. ಒಂದೂವರೆ ವರ್ಷದಲ್ಲಿ ಮೂರನೇ ಬರಿಗೆ ದರ ಪರಿಷ್ಕರಣೆಯಾಗುತ್ತಿದೆ. ರಾಜ್ಯದಲ್ಲಿ ಬಿಯರ್ ಮಾರಾಟ ಹೆಚ್ಚಾಗಿದೆ. ಈ ಮಧ್ಯೆ ಸರ್ಕಾರ ಸುಂಕ ಹೆಚ್ಚಳ ಮಾಡಿದರೆ ಗ್ರಾಹಕರ ಜೊತೆಗೆ ಮಾರಾಟಗಾರರಿಗೂ ಹೊಡೆತ ಬೀಳಲಿದೆ. ಸರ್ಕಾರ ಏರಿಕೆ ಬದಲು ದರ ಇಳಿಕೆ ಬಗ್ಗೆ ಯೋಚನೆ ಮಾಡಿದರೆ ಹೆಚ್ಚು ಮಾರಾಟವಾಗಲಿದೆ. ಈ ಮೂಲಕ ಸರ್ಕಾರ ಮತ್ತು ಮಾಲೀಕರಿಗೆ ಅನೂಕೂಲವಾಗಲಿದೆ ಎನ್ನುತ್ತಿದ್ದಾರೆ.
ಬಿಜೆಪಿ ಶಾಸಕ ಮುನಿರತ್ನಗೆ ನ್ಯಾಯಾಂಗ ಬಂಧನ
ಬೆಂಗಳೂರು: ಜಾತಿ ನಿಂದನೆ ಹಾಗೂ ಜೀವ ಬೆದರಿಕೆ ಹಾಕಿರುವ ಆರೋಪದ ಮೇರೆಗೆ ಬಂಧನಕ್ಕೊಳಗಾಗಿರುವ ಬಿಜೆಪಿ ಶಾಸಕ ಮುನಿರತ್ನ ಅವರಿಗೆ ನ್ಯಾಯಾಂಗ ಬಂಧನ ವಿಧಿಸಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶ ಹೊರಡಿಸಿದೆ.
ಮುನಿರತ್ನ ಅವರ ಪರ ಹಿರಿಯ ವಕೀಲ ಅಶೋಕ್ ಹಾರ್ನಳ್ಳಿ ಅವರು ವಾದ ಮಂಡಿಸಿದರು. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯ, ಮುನಿರತ್ನಗೆ ನ್ಯಾಯಾಂಗ ಬಂಧನ ವಿಧಿಸಿ ತೀರ್ಪು ನೀಡಿದೆ. ಜೊತೆಗೆ ವಿಚಾರಣೆಯನ್ನು ಮುಂದೂಡಿದೆ.
ಲಂಚ ಹಾಗೂ ಜಾತಿ ನಿಂದನೆ ಆರೋಪದ ಮೇರೆಗೆ ದಾಖಲಾಗಿದ್ದ ಪ್ರಕರಣ ಸಂಬಂಧ ಮುನಿರತ್ನ ಅವರನ್ನು ಪೊಲೀಸರು ಶನಿವಾರ ವಶಕ್ಕೆ ಪಡೆದು, ಬಂಧಿಸಿದ್ದರು. ಬಂಧನಕ್ಕೊಳಗಾಗಿದ್ದ ಮುನಿರತ್ನ ಅವರನ್ನು ಎರಡು ದಿನ ಪೊಲೀಸರ ವಶಕ್ಕೆ ನೀಡಿ ಶಾಸಕರು-ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆಯ ವಿಶೇಷ ನ್ಯಾಯಾಲಯ ಭಾನುವಾರ ಆದೇಶಿಸಿತ್ತು.