- ಗದಗದ ಮುಂಡರಗಿ ತಾಲೂಕಿನಲ್ಲಿ ನಡೆದ ಘಟನೆ
- ರಾತ್ರಿಯೆಲ್ಲಾ ಮೊಬೈಲ್ ನೋಡಬೇಡ ಎಂದಿದ್ದಕ್ಕೆ ಆತ್ಮಹತ್ಯೆ
- ಫ್ಯಾಟ್ ಸರ್ಜರಿ ವೇಳೆ ಯುವ ನಟಿ ಸಾವು
NAMMUR EXPRESS NEWS
ಬೆಂಗಳೂರು: ರಾಜ್ಯದಲ್ಲಿ ನೀರಿನ ಅನಾಹುತಗಳು ಹೆಚ್ಚಾಗುತ್ತಿವೆ. ಮೋಜು ಮಸ್ತಿ, ಅಜಾಗೂರೂಕತೆಯಿಂದ ನೀರಿಗೆ ಬಿದ್ದು ಹಲವರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಈ ನಡುವೆ ರಾಜ್ಯದಲ್ಲಿ ಮೂವರು ಮಕ್ಕಳು ಬಲಿಯಾಗಿದ್ದಾರೆ.
ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಅತ್ತಿಕಟ್ಟಿ ತಾಂಡಾದ ಹೊರವಲಯದಲ್ಲಿರುವ ಕೃಷಿ ಹೊಂಡದಲ್ಲಿ ಕಾಲು ಜಾರಿ ಬಿದ್ದು ಮೂವರ ಬಾಲಕಿಯರ ಮೃತಪಟ್ಟಿದ್ದಾರೆ. ಅತ್ತಿಕಟ್ಟಿ ತಾಂಡಾದ ಸುನಿತಾ ಲಮಾಣಿ (13) ಅಂಕಿತಾ ಲಮಾಣಿ (10) ಹಾಗೂ ಡೋಣಿ ತಾಂಡಾದ ಸುನಿತಾ (11) ಮೃತ ಬಾಲಕಿಯರು ಎಂದು ತಿಳಿದು ಬಂದಿದೆ. ಕುರಿ ಮರಿ ಮೇಯಿಸಲು ಜಮೀನಿಗೆ ತೆರಳಿದ ಮೂವರು ಬಾಲಕಿಯರು,ಆಟವಾಡುತ್ತ ಕೃಷಿ ಹೊಂಡಕ್ಕೆ ಬಾಯಾರಿಕೆಯಾಗಿ ನೀರುಕುಡಿದು ಕೈಕಾಲು ಮುಖ ತೊಳೆದುಕೊಳ್ಳಲು ಮುಂದಾಗಿದ್ದರು.ಆಯತಪ್ಪಿ ಹೊಂಡದಲ್ಲಿ ಬಿದ್ದ ಮೃತ ಪಟ್ಟ ಬಗ್ಗೆ ಸಂಶಯ ವ್ಯಕ್ತವಾಗಿದೆ. ಅತ್ತಿಕಟ್ಟಿ ತಾಂಡಾದ ಲಕ್ಷ್ಮಣ ಲಮಾಣಿ ಗೋವಾದಲ್ಲಿ ಕೆಲಸ ಮಾಡುತ್ತಿದ್ದರು. ತಮ್ಮ ಗೋವಿಂದನ ಮದುವೆ ಹಿನ್ನೆಲೆ ಕುಟುಂಬ ಸಮೇತ ತಾಂಡಾಕ್ಕೆ ಬಂದಿದ್ದರು. ಮದುವೆ ಮನೆಯಲ್ಲಿ 15ರಿಂದ 20 ಮಕ್ಕಳ ತಂಡವೇ ಸೇರಿತ್ತು.
ರಾತ್ರಿಯಾದರೂ ಮೊಬೈಲ್ ನೋಡಬೇಡ ಎಂದಿದ್ದಕ್ಕೆ ಆತ್ಮಹತ್ಯೆ!: ಜಾಸ್ತಿ ಮೊಬೈಲ್ ನೋಡಬೇಡ. ರಾತ್ರಿ 11 ಗಂಟೆಯಾದರೂ ಮೊಬೈಲ್ ನೋಡಿಕೊಂಡೇ ಇರುತ್ತೀಯಾ, ಬೆಳಗ್ಗೆ 11 ಗಂಟೆಯಾದರೂ ಎದ್ದೇಳಲ್ಲ. ಹಾಗಾಗಿ ಮೊಬೈಲ್ ಮುಟ್ಟಬೇಡ ಅಂತ ತಂದೆ, ತಾಯಿ ಬುದ್ದಿವಾದ ಹೇಳಿದ್ದಕ್ಕೆ ಯುವತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ನಗರ ಹೊರವಲಯದ ತಳಗವಾರ ಗ್ರಾಮದಲ್ಲಿ ನಡೆದಿದೆ.
ಮೃತ ದುರ್ದೈವಿಯನ್ನು ಜಯಶ್ರೀ(19) ಎಂದು ಗುರುತಿಸಲಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ನಗರದ ಬಸವೇಶ್ವರ ನಗರದ ನರಸಪ್ಪ ಹಾಗೂ ಜಯಲಕ್ಷ್ಮಮ್ಮನವರಿಗೆ ಇಬ್ಬರು ಹೆಣ್ಣು ಮಕ್ಕಳು ಹಾಗೂ ಓರ್ವ ಗಂಡು ಮಗನಿದ್ದ. ಆಟೋ ಚಾಲಕರಾಗಿ ಕಾರ್ಯನಿರ್ವಹಿಸುತ್ತಿದ್ದ ನರಸಪ್ಪ ಮತ್ತು ಕೂಲಿ ಕೆಲಸ ಮಾಡುತ್ತಿದ್ದ ಜಯಲಕ್ಷ್ಮಮ್ಮ ಮಕ್ಕಳನ್ನು ಕಷ್ಟಪಟ್ಟು ಬೆಳೆಸುತ್ತಿದ್ದರು. ಆದರೆ ಭಾನುವಾರ ಬೆಳಗ್ಗೆ ಮನೆಗೆ ಬಂದ ನರಸಪ್ಪ, ಮೊಬೈಲ್ ನೋಡಬೇಡ, ಇಷ್ಟು ಹೊತ್ತಾದರೂ ಎದ್ದಿಲ್ಲ ಅಂತ ಮಗಳಿಗೆ ಬೈದಿದ್ದಾರೆ. ಅದೇ ಕೋಪದಲ್ಲಿ ಮೊಬೈಲ್ ಹೊಡೆದು ಹಾಕಿ ಮನೆಗೆ ಚಿಲಕ ಹಾಕಿಕೊಂಡು ಮನೆಯಿಂದ ಹೊರಟು ಹೋಗಿದ್ದ.
ಚಿಕಿತ್ಸೆ ವೇಳೆ ಕನ್ನಡ ಕಿರುತೆರೆ ನಟಿ ಸಾವು: ಕನ್ನಡ ಕಿರುತೆರೆ ಹಾಗೂ ಸಿನಿಮಾಗಳಲ್ಲಿ ನಟಿಸಿದ್ದ ಯುವ ನಟಿ ಚೇತನಾ ರಾಜ್ ಎಂಬುವರು ನಿಧನರಾಗಿದ್ದಾರೆ. ಫ್ಯಾಟ್ ಸರ್ಜರಿ (Fat Surgery) ವೇಳೆ ಆಸ್ಪತ್ರೆಯಲ್ಲೇ ಚೇತನಾ ಸಾವನ್ನಪ್ಪಿದ್ದು, ವೈದ್ಯರ ವಿರುದ್ಧ ಮೃತಳ ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.