- ಬೆಳಕಿನ ಹಬ್ಬಕ್ಕಿಲ್ಲ “ಪಟಾಕಿ ರಂಗು”
ಬೆಂಗಳೂರು: ಬೆಳಕಿನ ಹಬ್ಬ ದೀಪಾವಳಿಗೆ ಈ ಬಾರಿ ಪಟಾಕಿ ರಂಗು ಇಲ್ಲ. ಕರೋನಾ ರಾಜ್ಯದಲ್ಲಿ ದಿನೇ ದಿನೇ ಹೆಚ್ಚಾಗುತ್ತಿದೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಪಟಾಕಿ ನಿಷೇಧಕ್ಕೆ ಸರ್ಕಾರ ಚಿಂತಿಸಿದೆ.
ಬೆಂಗಳೂರಿನ ಗೃಹ ಕಚೇರಿ ಕೃಷ್ಣಾದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಯಡಿಯೂರಪ್ಪ ಅವರು, ದೀಪಾವಳಿಗೆ ಯಾವುದೇ ರೀತಿಯ ಪಟಾಕಿಗೆ ಅವಕಾಶ ಇಲ್ಲ. ಕರೋನಾ ಹೆಚ್ಚಾಗುತ್ತಿರುವುದರಿಂದ ಪಟಾಕಿ ನಿಷೇಧಕ್ಕೆ ನಿರ್ಧಾರ ಮಾಡಲಾಗಿದೆ. ಅಲ್ಲದೆ ಪಟಾಕಿ ನಿಷೇಧಿಸಿ ಸರ್ಕಾರದಿಂದ ಶೀಘ್ರದಲ್ಲೇ ಅಧಿಕೃತ ಆದೇಶ ಹೊರಡಿಸುವುದಾಗಿ ಮುಖ್ಯಮಂತ್ರಿ ಯಡಿಯೂರಪ್ಪ ತಿಳಿಸಿದ್ದಾರೆ. ಈ ಮೂಲಕ ಈ ಬಾರಿ ಪಟಾಕಿ ರಂಗು ಮರೆಯಾಗಲಿದೆ. ಜನರ ಹಣ ಉಳಿಯಲಿದೆ.