- ಮಧ್ಯವರ್ತಿಗಳ ಆಟಕ್ಕೆ ಬ್ರೇಕ್: ಜನತೆಗೆ ಸಲೀಸು
ಬೆಂಗಳೂರು: ಇನ್ಮುಂದೆ ಆಸ್ತಿ ನೋಂದಣಿ ಪ್ರಕ್ರಿಯೆ ಸಲೀಸಾಗಲಿದೆ. ಜತೆಗೆ ಮಧ್ಯವರ್ತಿಗಳ ಆಟಕ್ಕೂ ಬ್ರೇಕ್ ಬೀಳಲಿದೆ. ಹೌದು. ಆಸ್ತಿ ನೋಂದಣಿಗೆ ಸಬ್ ರಿಜಿಸ್ಟ್ರಾರ್ ಕಚೇರಿ ಬಳಿ ಸರದಿ ಸಾಲಿನಲ್ಲಿ ನಿಲ್ಲುವುದನ್ನು ತಪ್ಪಿಸಲು ಮತ್ತು ನೋಂದಣಿ ಪ್ರಕ್ರಿಯೆ ಸರಳಗೊಳಿಸುವ ಉದ್ದೇಶದಿಂದ ಸರ್ಕಾರ ಆಸ್ತಿ ನೊಂದಣಿಯನ್ನು ಸಂಪೂರ್ಣವಾಗಿ ಆನ್ಲೈನ್ ಮಾಡಲು ಯೋಜನೆ ರೂಪಿಸಿದೆ.
ಕೆಲವು ಉಪನೋಂದಣಾಧಿಕಾರಿ ಕಚೇರಿಗಳಲ್ಲಿ ಆನ್ಲೈನ್ ನೋಂದಣಿ ಕಾರ್ಯ ನವೆಂಬರ್ 2ರಿಂದ ಆರಂಭವಾಗಲಿದೆ. ಈಗಾಗಲೇ ಪ್ರಾಯೋಗಿಕವಾಗಿ 3 ಕಚೇರಿಗಳಲ್ಲಿ ಯೋಜನೆ ಜಾರಿಗೆ ಕ್ರಮ ಕೈಗೊಂಡಿದ್ದು ನಂತರದಲ್ಲಿ ರಾಜ್ಯಾದ್ಯಂತ ವಿಸ್ತರಿಸಲು ಯೋಜಿಸಲಾಗಿದೆ ಎಂದು ನೋಂದಣಿ ಮತ್ತು ಮುದ್ರಾಂಕ ಇಲಾಖೆ ತಿಳಿಸಿದೆ. ಆಸ್ತಿ ನೋಂದಣಿಗೆ ಬೇಕಾದ ದಾಖಲೆಗಳನ್ನು ಅಪೆÇ್ಲೀಡ್ ಮಾಡಿ ನೋಂದಣಿ, ಮುದ್ರಾಂಕ ಶುಲ್ಕ ಆನ್ಲೈನ್ನಲ್ಲಿ ಪಾವತಿಸಬೇಕು. ನಂತರದಲ್ಲಿ ನೀಡುವ ಸಮಯದಲ್ಲಿ ಆಸ್ತಿ ನೋಂದಣಿ ಮಾಡಿಸಬೇಕು ಎಂದು ಹೇಳಲಾಗಿದೆ. ಇದು ಎಷ್ಟು ಅನುಷ್ಠಾನವಾಗಲಿದೆ ಎಂಬುದು ಮಾತ್ರ ಕಾದು ನೋಡಬೇಕಿದೆ.