- ಕರ್ನಾಟಕದಲ್ಲಿ 20,000 ಉದ್ಯೋಗ ಸೃಷ್ಟಿ..?
- 10,255 ಕೋಟಿ ಬಂಡವಾಳ ಹೂಡಿಕೆ: ಸಿಎಂ ಟ್ವೀಟ್
ಬೆಂಗಳೂರು: ಕರೋನಾದಿಂದ ಲಕ್ಷಾಂತರ ಮಂದಿ ಉದ್ಯೋಗ ಕಳೆದುಕೊಂಡಿದ್ದಾರೆ. ಇನ್ನೂ ಕಳೆದುಕೊಳ್ಳುತ್ತಾರೆ. ಹಳ್ಳಿ ಹಳ್ಳಿಗಳಲ್ಲೂ ಉದ್ಯೋಗ ಕಡಿತ ಭೀತಿ ಶುರುವಾಗಿದೆ. ಈ ನಡುವೆ ರಾಜ್ಯ ಸರ್ಕಾರ ಶುಭ ಸುದ್ದಿ ನೀಡಿದೆ.
3 ತಿಂಗಳಲ್ಲಿ ಕರ್ನಾಟಕದಲ್ಲಿ 10,255 ಕೋಟಿ ಬಂಡವಾಳ ಹೂಡಿಕೆಯಾಗಿದ್ದು ಇದರಿಂದ ಸುಮಾರು 20 ಸಾವಿರ ಉದ್ಯೋಗ ಸೃಷ್ಟಿಯಾಗಲಿದೆ ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಮಾಹಿತಿ ನೀಡಿದ್ದಾರೆ.
ಟ್ವೀಟ್ ಮಾಡುವ ಮೂಲಕ ಮಾಹಿತಿ ನೀಡಿದ ಸಿಎಂ ಯಡಿಯೂರಪ್ಪ, ಕರ್ನಾಟಕ ಹೂಡಿಕೆದಾರರಿಗೆ ನೆಚ್ಚಿನ ಮತ್ತು ಆದ್ಯತೆಯ ತಾಣವಾಗಿ ಮುಂದುವರೆದಿದ್ದು 2020ರ ಏಪ್ರಿಲ್-ಜೂನ್ ತ್ರೈಮಾಸಿಕದಲ್ಲಿ ದೇಶದಲ್ಲೇ ಅತಿ ಹೆಚ್ಚು ವಿದೇಶಿ ನೇರ ಬಂಡವಾಳ (ಎಫ್ಡಿಐ) ಆಕರ್ಷಿಸಿದೆ. ಕೊರೋನಾ ಸಾಂಕ್ರಾಮಿಕದ ಸವಾಲುಗಳ ನಡುವೆಯೂ, ಈ 3 ತಿಂಗಳಲ್ಲಿ ರಾಜ್ಯದಲ್ಲಿ 10,255 ಕೋಟಿ ರೂ. ಹೂಡಿಕೆಯಾಗಿದೆ ಎಂದು ಮಾಹಿತಿ ನೀಡಿದ್ದಾರೆ.