- ಜನರ ಆಕ್ರೋಶಕ್ಕೆ ಮಣಿದ ಸರ್ಕಾರ
- ಆದೇಶ ವಾಪಾಸ್: ಜನ ನಿರಾಳ
ಬೆಂಗಳೂರು: ರಾಜ್ಯದಲ್ಲಿ ಹೇರಲಾಗಿರುವ ರಾತ್ರಿ ಕರ್ಫ್ಯೂ ಆದೇಶ ಸರ್ಕಾರ ವಾಪಾಸ್ ಪಡೆದಿದೆ.
ಬ್ರಿಟನ್ ಹಾಗೂ ಇತರ ದೇಶಗಳಲ್ಲಿ ಪತ್ತೆಯಾದ ರೂಪಾಂತರ ಹೊಂದಿದ ಕೋವಿಡ್ ವೈರಸ್ ಹರಡುವಿಕೆ ತಡೆಯಲು ಈ ಆದೇಶ ಮಾಡಲಾಗಿತ್ತು. ಆದರೆ ಜನರಿಂದ ಈ ಆದೇಶದ ವಿರುದ್ಧ ಆಕ್ರೋಶ ವ್ಯಕ್ತವಾದ ಹಿನ್ನೆಲೆ ಇದೀಗ ಸರ್ಕಾರ ಆದೇಶ ವಾಪಾಸ್ ಪಡೆದಿದೆ.
ಸರ್ಕಾರ ಆದೇಶ ಮರು ಪರಿಶೀಲಸಿ, ಸಂಪುಟ ಸಹೋದ್ಯೋಗಿಗಳ ಹಾಗೂ ಹಿರಿಯ ಅಧಿಕಾರಿಗಳ ಅಭಿಪ್ರಾಯದ ಮೇರೆಗೆ ರಾತ್ರಿ ಕರ್ಫ್ಯೂವನ್ನು ಹಿಂಪಡೆಯಲು ತೀರ್ಮಾನಿಸಲಾಗಿದೆ ಎಂದು ಸಿಎಂ ಹೇಳಿಕೆಯಲ್ಲಿ ತಿಳಿಸಿದ್ದಾರೆ.ಸಾರ್ವಜನಿಕರು ಸ್ವಯಂ ನಿರ್ಭಂಧ ವಿಧಿಸಿಕೊಂಡು, ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿಕೊಂಡು, ಅನಗತ್ಯವಾಗಿ ಸಂಚರಿಸದಂತೆ ಹಾಗೂ ಸರ್ಕಾರ ವಿಧಿಸಿದ ಕೋವಿಡ್ ನಿಯಂತ್ರಣ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವುದರ ಮೂಲಕ ಈ ವೈರಾಣುವಿನ ಹರಡುವಿಕೆ ತಡೆಯಲು ಸರ್ಕಾರ ಕೋರಿದೆ.