Categories
ಬೆಂಗಳೂರು

ಕೆಂಪೇಗೌಡ ಪ್ರತಿಮೆ ಲೋಕಾರ್ಪಣೆ ಮಾಡಿದ ಮೋದಿ!

  • ರಾಜಧಾನಿಯಲ್ಲಿ ಎಲ್ಲೆಡೆ ಮೋದಿ ಮೋದಿ ಜಯಘೋಷ
  • ನಾಡಪ್ರಭು ಕೆಂಪೇಗೌಡರ 108 ಅಡಿಯ ಕಂಚಿನ ಪ್ರತಿಮೆ ಲೋಕಾರ್ಪಣೆ

ನಮ್ಮೂರ್ ಎಕ್ಸ್ ಪ್ರೆಸ್ ನ್ಯೂಸ್: ರಿಪೋರ್ಟರ್: ಅಶ್ವಿನ್
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಬೆಂಗಳೂರಿನಲ್ಲಿ ಮ್ಯಾಜಿಕ್ ಮಾಡಿದ್ದಾರೆ. ನಾಡಪ್ರಭು ಕೆಂಪೇಗೌಡರ 108 ಅಡಿಯ ಕಂಚಿನ ಪ್ರತಿಮೆ ಲೋಕಾರ್ಪಣೆ ಮಾಡಿದ್ದಾರೆ. ಇಡೀ ಬೆಂಗಳೂರು ಮೋದಿ ಆಗಮನಕ್ಕೆ ಹಬ್ಬದಂತೆ ಸಿದ್ದಗೊಂಡಿದ್ದು ಎಲ್ಲೆಡೆ ಭಾವುಟಗಳು ರಾರಾಜಿಸಿದವು.
ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಸಮೀಪ ಅನಾವರಣಗೊಂಡಿರುವ 108 ಅಡಿ ಎತ್ತರದ ಪ್ರತಿಮೆ ಕನ್ನಡಿಗರ ಸ್ವಾಭಿಮಾನದ ಸಂಕೇತವಾಗಿದ್ದು ಇದಕ್ಕೆ ಪ್ರಗತಿಯ ಪ್ರತಿಮೆ ಎಂದು ಕರ್ನಾಟಕ ಸರ್ಕಾರ ನಾಮಕರಣ ಮಾಡಿದೆ. ಪ್ರಧಾನಿ ಮೋದಿ ಅವರು ಲೋಕಾರ್ಪಣೆ ಮಾಡಿದ್ದಾರೆ.
ಬೆಂಗಳೂರಲ್ಲಿ ಮೋದಿಯಿಂದ ಏಷ್ಯಾದ ಮೊದಲ ಗಾರ್ಡನ್‌ ಟರ್ಮಿನಲ್‌ ಕೂಡ ಉದ್ಘಾಟನೆಗೊಂಡಿತು. ಇನ್ನು ವಂದೇ ಮಾತರಂ ಎಕ್ಸ್ ಪ್ರೆಸ್ ಸೇರಿ ಕಾಶಿ ವಿಶೇಷ ರೈಲಿಗೆ ಮೋದಿ ಚಾಲನೆ ನೀಡಿದರು. ಸಿಎಂಬೊಮ್ಮಾಯಿ, ರಾಜ್ಯಪಾಲರು, ಸಚಿವರು ಸಾಥ್ ನೀಡಿದರು.

ವಿಶ್ವದ ಎತ್ತರದ ಪ್ರತಿಮೆಗಳಲ್ಲಿ ಒಂದು!

ನಾಡಪ್ರಭು ಕೆಂಪೇಗೌಡರ ಪ್ರತಿಮೆ ನಗರ ನಿರ್ಮಾತೃ ಒಬ್ಬರ ವಿಶ್ವದ ಅತಿ ಎತ್ತರದ ಪ್ರತಿಮೆ ಎಂಬ ಖ್ಯಾತಿಗೆ ಪಾತ್ರವಾಗಲಿದೆ.
ಗುಜರಾತ್‌ನಲ್ಲಿ ಏಕತಾ ಪ್ರತಿಮೆ ನಿರ್ಮಾಣ ಮಾಡಿದ ರಾಮ್ ಸುತಾರ್ ಕ್ರಿಯೇಷನ್ಸ್ ಅವರೇ ಈ ಕೆಂಪೇಗೌಡ ಪ್ರತಿಮೆಯ ವಿನ್ಯಾಸ ಹಾಗೂ ನಿರ್ಮಾಣ ಮಾಡಿದ್ದಾರೆ.
ಪ್ರತಿಮೆ ನಿರ್ಮಾಣಕ್ಕೆ 84 ಕೋಟಿ ರೂ. ಖರ್ಚು ಮಾಡಲಾಗಿದ್ದು, ಪ್ರತಿಮೆಯ ಖಡ್ಗವೇ 4 ಸಾವಿರ ಕೆಜಿ ತೂಕ ಹೊಂದಿದೆ. 120 ಟನ್ ಉಕ್ಕನ್ನು ಪ್ರತಿಮೆ ನಿರ್ಮಾಣಕ್ಕೆ ಬಳಕೆ ಮಾಡಲಾಗಿದೆ. 98 ಟನ್‌ ಕಂಚನ್ನು ಬಳಕೆ ಮಾಡಲಾಗಿದೆ. ಬೆಂಗಳೂರು ನಗರದಲ್ಲಿಯೇ ಅತಿ ಎತ್ತರದ ಪ್ರತಿಮೆಯಾಗಿದ್ದು, ಪ್ರತಿಮೆ ಜಾಗದಲ್ಲಿಯೇ 23 ಎಕರೆ ಪ್ರದೇಶದಲ್ಲಿ ಕೆಂಪೇಗೌಡ ಥೀಮ್ ಪಾರ್ಕ್ ನಿರ್ಮಾಣವಾಗಲಿದೆ. ಒಟ್ಟಿನಲ್ಲಿ ಈ ಪ್ರತಿಮೆ ಕನ್ನಡದ ಮತ್ತು ಕೆಂಪೇಗೌಡರ ಸೇವೆಯನ್ನು ದೇಶಕ್ಕೆ ತಲುಪಿಸುವ ಪ್ರಯತ್ನ ಮಾಡಲಾಗಿದೆ.

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.