Categories
ಬೆಂಗಳೂರು

ಕೈ ಹಿಡೀತಾರಾ ಶರತ್ ಬಚ್ಚೇಗೌಡ!

ಕೈ ಹಿಡೀತಾರಾ ಶರತ್ ಬಚ್ಚೇಗೌಡ! ಹೊಸಕೋಟೆಯಲ್ಲಿ ಎಂಟಿಬಿಗೆ ಟಾಂಗ್?ಬಿಜೆಪಿ ದಾಳ ಗ್ರಾಮೀಣದಲ್ಲಿ ಉರುಳುತ್ತಾ..?

ನ್ಯೂಸ್ ಡೆಸ್ಕ್: ನಮ್ಮೂರ್ ಎಕ್ಸ್‍ಪ್ರೆಸ್


ಬೆಂಗಳೂರು: ಹೊಸಕೋಟೆ ತಾಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ ಚುನಾವಣೆಯಲ್ಲಿ ಪಕ್ಷೇತರ ಶಾಸಕ ಶರತ್ ಬಚ್ಚೇಗೌಡ ಹಾಗೂ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಎಲ್ಲಾ ಸ್ಥಾನಗಳಲ್ಲಿಯೂ ಗೆಲುವು ಸಾಧಿಸಿದ್ದಾರೆ. ಈ ಮೂಲಕ ಬಿಜೆಪಿ ಪಾಳಯಕ್ಕೆ ಟಾಂಗ್ ಕೊಟ್ಟಿದ್ದು, ಶರತ್ ಬಚ್ಚೇಗೌಡ ಕಾಂಗ್ರೆಸ್ ಸೇರುವ ಸೂಚನೆ ಕಂಡು ಬಂದಿದೆ.


ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಅಕ್ರಮವಾಗಿ ಚುನಾವಣೆ ನಡೆಯುತ್ತಿದೆ ಎಂದು ಬಹಿಷ್ಕಾರ ಮಾಡಿದ್ದರು. ಇದರಿಂದಾಗಿ ವಿಧಾನ ಪರಿಷತ್ ಸದಸ್ಯ ಎಂಟಿಬಿ ನಾಗರಾಜ್‍ಗೆ ಹಿನ್ನಡೆಯಾಗಿದೆ. ಶರತ್ ಬಚ್ಚೇಗೌಡ ಕಾಂಗ್ರೆಸ್ ಸೇರಲು ಈ ಚುನಾವಣೆ ಸಹಕಾರಿಯಾಗಿದೆ.
ಚುನಾವಣೆ ಫಲಿತಾಂಶದ ಬಗ್ಗೆ ಪ್ರತಿಕ್ರಿಯೆ ನೀಡಿರುವ ಪಕ್ಷೇತರ ಶಾಸಕ ಶರತ್ ಬಚ್ಚೇಗೌಡ, “ಈ ಚುನಾವಣೆ ಫಲಿತಾಂಶ ತಾಲೂಕಿನ ಮುಂದಿನ ಚುನಾವಣೆ ದಿಕ್ಸೂಚಿಯಾಗಿದೆ” ಎಂದು ಹೇಳಿದ್ದಾರೆ. ಈ ಮೂಲಕ ಬಿಜೆಪಿಗೆ ಶರತ್ ಸಡ್ಡು ಹೊಡೆದಿದ್ದಾರೆ. ಗ್ರಾಮೀಣ ಸಂಸದ ಬಿ.ಎನ್.ಬಚ್ಚೇಗೌಡ ಪುತ್ರ ಶರತ್ ಈ ಹಿಂದೆ ಹೊಸಕೋಟೆಯಿಂದ ಶರತ್ ಪಕ್ಷೇತರನಾಗಿ ಗೆದ್ದಿದ್ದರು. ಈ ಮೂಲಕ ಯುವ ನಾಯಕ ಡಿಕೆಶಿ ನೇತೃತ್ವದಲ್ಲಿ ಕಾಂಗ್ರೆಸ್ ಸೇರಲಿದ್ದಾರೆ ಎನ್ನಲಾಗಿದೆ.

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.