- ಬಳ್ಳಾರಿಯಿಂದ ವಿಜಯ ನಗರ ಉದಯ
ಬೆಂಗಳೂರು: ರಾಜ್ಯ ಸರ್ಕಾರ ತನ್ನ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಹೊಸ ಹೊಸ ಮಾರ್ಗ ಅನುಸರಿಸುತ್ತಿದೆ. ಜಾತಿಗೊಂದು ನಿಗಮ ಮಂಡಳಿ ರಚನೆ ಬಳಿಕ ಈಗ ಹೊಸ ಜಿಲ್ಲೆ ಸ್ಥಾಪನೆಗೆ ಕೈ ಹಾಕಿದೆ.
ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಗಣಿ ಜಿಲ್ಲೆ ಬಳ್ಳಾರಿಯನ್ನು ವಿಭಜಿಸಿ ಹೊಸದಾಗಿ ವಿಜಯನಗರ ಜಿಲ್ಲೆ ಅಧಿಕೃತವಾಗಿ ಘೋಷಣೆ ಮಾಡಲಾಗುವುದು ಎಂದು ಸಚಿವ ಮಾಧುಸ್ವಾಮಿ ತಿಳಿಸಿದ್ದಾರೆ.
ವಿಜಯನಗರ ಜಿಲ್ಲೆ ಸ್ಥಾಪನೆಗೆ ಸಂಪುಟ ಸಭೆಯಲ್ಲಿ ಅನೌಪಚಾರಿಕ ಒಪ್ಪಿಗೆ ನೀಡಲಾಗಿದೆ. ಮುಂದಿನ ಸಂಪುಟ ಸಭೆಯಲ್ಲಿ ಅಧಿಕೃತ ಅನುಮೋದನೆ ನೀಡಲಾಗುವುದು. ವಿಜಯ ನಗರವನ್ನು ಜಿಲ್ಲಾ ಕೇಂದ್ರವನ್ನಾಗಿ ಮಾಡಬೇಕೆಂಬ ಈ ಭಾಗದ ಬಹುದಿನಗಳ ಬೇಡಿಕೆಗೆ ಸರ್ಕಾರ ಮುಂದಿನ ಸಚಿವ ಸಂಪುಟ ಸಭೆಯಲ್ಲಿ ವಿದ್ಯುಕ್ತವಾಗಿ ಘೋಷಣೆ ಮಾಡಲಿದೆ ಎನ್ನಲಾಗಿದೆ. ಇತ್ತ ಸಚಿವ ವಿಜಯ ನಗರ ಜಿಲ್ಲಾ ವ್ಯಾಪ್ತಿಯ ಶಾಸಕರು ಸರ್ಕಾರದ ನಡೆಯನ್ನು ಸ್ವಾಗತಿಸಿದ್ದಾರೆ.