NAMMUR EXPRESS NEWS
ಬೆಂಗಳೂರು : ಗ್ರಾಮ ಒನ್ ಸೇವೆಯನ್ನು ಇನ್ನಷ್ಟು ವಿಸ್ತರಿಸಲು ಸರ್ಕಾರ ಬಯಸಿದ್ದು ಮೈಕ್ರೋ ಬ್ಯಾಂಕಿಂಗ್ ಎಲ್ ಪಿ ಜಿ ಬುಕ್ಕಿಂಗ್ ನಂತಹ ಸೇವೆಗಳನ್ನು ಸೇರ್ಪಡೆಗೊಳಿಸಲು ಉದ್ದೇಶಸಿದೆ.
ಬುಧವಾರ ಸಿಎಂ ಗೃಹ ಕಚೇರಿ ಕೃಷ್ಣದಲ್ಲಿ ಇ- ಆಡಳಿತ ಇಲಾಖೆ ಪ್ರಗತಿ ಪರಿಶೀಲನೆ ನಡೆಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಗ್ರಾಮ ಒನ್ ಕೇಂದ್ರಗಳ ಮೂಲಕ ಒದಗಿಸಬಹುದಾದ ಸೇವೆಗಳನ್ನು ಗುರುತಿಸಿ ಸಂಬಂಧಿಸಿದ ಇಲಾಖೆಗಳೊಂದಿಗೆ ಚರ್ಚಿಸಿ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಈವರೆಗೆ ಒಟ್ಟು 7,274 ಕೇಂದ್ರಗಳು ಕಾರ್ಯನಿರ್ವಹಿಸುತ್ತಿದ್ದು 2022ರ ಜನವರಿಯಲ್ಲಿ 65,520 ವ್ಯವಹಾರ ನಡೆದಿದ್ದು, ಜೂನ್ ನಲ್ಲಿ 10,36,542 ಕ್ಕೆ ಏರಿಕೆಯಾಗಿದೆ ಎಂದು ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು, ಹೋಬಳಿ ಮಟ್ಟದಲ್ಲಿ ಕಾರ್ಯನಿರ್ವಹಿಸುತ್ತಿರುವ ಅಟಲ್ ಜನಸ್ನೇಹಿ ಕೇಂದ್ರಗಳ ಸೇವೆಯನ್ನು ಗ್ರಾಮ ಒನ್ ಮೂಲಕ ಒದಗಿಸುವ ಬಗ್ಗೆ ಪ್ರಾಯೋಗಿಕವಾಗಿ ಕೆಲವು ಕೇಂದ್ರಗಳಲ್ಲಿ ಪ್ರಾರಂಭಿಸಲು ಮುಖ್ಯಮಂತ್ರಿಯವರು ಸೂಚಿಸಿದರು.
ರಾಜ್ಯದಲ್ಲಿ ಹೊಸ ಡಾಟಾ ಸೆಂಟರ್ ಪ್ರಾರಂಭಿಸುವ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು, ಹೊಸ ಡಾಟಾ ಸೆಂಟರ್ ಸ್ಥಾಪನೆಗೆ ಸೂಕ್ತ ಸ್ಥಳ ನಿಗದಿಪಡಿಸುವಂತೆ ಸಿಎಂ ನಿರ್ದೇಶನ ನೀಡಿದ್ದು ಖಾಸಗಿ ಕಂಪನಿಗಳು ಡಾಟಾ ಸೆಂಟರ್ ಪ್ರಾರಂಭಿಸಲು ಮುಂದೆ ಬರುತ್ತಿದ್ದು, ಸರ್ಕಾರವು ಇವುಗಳ ಸೇವೆ ಪಡೆದುಕೊಳ್ಳುವ ಬಗ್ಗೆ ಸೂಕ್ತ ನೀತಿಯನ್ನು ರೂಪಿಸುವಂತೆ ತಿಳಿಸಿದರಲ್ಲದೆ ಪಿಎಂ ಗತಿಶಕ್ತಿ ಯೋಜನೆ ಯಡಿ ರಾಜ್ಯದಲ್ಲಿ 25 ಕೋಟಿ ರೂ ವೆಚ್ಚದಲ್ಲಿ ಡ್ರೋನ್ ಸ್ಕೂಲ್ ಪ್ರಾರಂಭಿಸಲು ಸಿದ್ಧತೆ ನಡೆಸುವಂತೆ ನಿರ್ದೇಶನನೀಡಿದರು,ಕೆ – ಜಿಐಎಸ್ ಅಡಿ ಲಭ್ಯವಿರುವ ಮಾಹಿತಿಗಳನ್ನು ತ್ವರಿತವಾಗಿ ಹಾಗೂ ನಿಖರವಾಗಿ ನಿರ್ಧಾರ ತೆಗೆದುಕೊಳ್ಳಲು ಆಧಾರವಾಗಿ ಬಳಸಿಕೊಳ್ಳಲು ಅವಕಾಶವಿದೆ, ವಿವಿಧ ಇಲಾಖೆಗಳು ಇವುಗಳ ಅನುಕೂಲ ಪಡೆಯಬೇಕೆಂದು ಅಧಿಕಾರಿಗಳಿಗೆ ಸಲಹೆ ನೀಡಿದರು.
ಇ – ಆಡಳಿತ ಉತ್ತಮ ಆಡಳಿತದ ಪ್ರಮುಖ ಸಾಧನ ಇದನ್ನು ಹೆಚ್ಚಾಗಿ ಬಳಸಿ ಸರ್ಕಾರದ ಸವಲತ್ತುಗಳನ್ನು ಜನರಿಗೆ ಪಾರದರ್ಶಕವಾಗಿ ತಲುಪಿಸಬೇಕು, ಸಮಗ್ರ ಕುಂದು ಕೊರತೆ ನಿವಾರಣ ವ್ಯವಸ್ಥೆ ಅಡಿ ದೂರದಾರರಿಗೆ ತೃಪ್ತಿಕರ ಸೇವೆಯನ್ನು ಒದಗಿಸಲು ಒತ್ತು ನೀಡಬೇಕೆಂದು ಅಧಿಕಾರಿಗಳಿಗೆ ಸಿಎಂ ಸೂಚನೆ ನೀಡಿದರು.
ಸಭೆಯಲ್ಲಿ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತರಾದ ಐಎಸ್ಎನ್ ಪ್ರಸಾದ್ ಮುಖ್ಯಮಂತ್ರಿ ಅವರ ಪ್ರಧಾನ ಕಾರ್ಯದರ್ಶಿ ಎನ್ ಮಂಜುನಾಥ್ ಪ್ರಸಾದ್ ಹಣಕಾಸು ಇಲಾಖೆ ಕಾರ್ಯದರ್ಶಿ ಪಿ ಸಿ ಜಾಫರ್ ಹಾಗೂ ಇ- ಆಡಳಿತ ಇಲಾಖೆ ಕಾರ್ಯದರ್ಶಿ ವಿ ಪೊನ್ನುರಾಜ್ ಮತ್ತು ಇತರ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.
Related Posts
Add A Comment