Categories
ಬೆಂಗಳೂರು

ದಾರಿಹೋಕರಿಗೆ ಮನಬಂದಂತೆ ಚಾಕು ಇರಿತ!

  • ಓರ್ವ ಸಾವು: ಐವರು ಗಂಭೀರ ಗಾಯ
  • ರಾಜಧಾನಿಯಲ್ಲೊಂದು ವಿಚಿತ್ರ ಘಟನೆ

ನ್ಯೂಸ್ ಡೆಸ್ಕ್: ನಮ್ಮೂರ್ ಎಕ್ಸ್‍ಪ್ರೆಸ್

ಬೆಂಗಳೂರು: ವ್ಯಕ್ತಿಯೊಬ್ಬ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದವರಿಗೆ ಮನಬಂದಂತೆ ಚಾಕುವಿನಿಂದ ಇರಿದ ಪರಿಣಾಮ ಓರ್ವ ಮೃತಪಟ್ಟು, ಐವರು ಗಾಯಗೊಂಡಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ ಭಾನುವಾರ ಬೆಳಗ್ಗೆ ನಡೆದಿದೆ. ಕಾಟನ್‍ಪೇಟೆ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಗಂಭೀರವಾಗಿ ಗಾಯಗೊಂಡಿದ್ದ ಮಾರಿ (30) ಎಂಬ ವ್ಯಕ್ತಿ ಮೃತಪಟ್ಟಿದ್ದಾನೆ. ಆರೋಪಿ ಅಂಜನಪ್ಪ ಗಾರ್ಡನ್ ನಿವಾಸಿ ಎಂ.ಗಣೇಶ್ (30) ಎಂಬಾತನನ್ನು ಬಂಧಿಸಲಾಗಿದೆ. ವೇಲಾಯಿದನ್ ಎಂಬುವರ ಸ್ಥಿತಿ ಗಂಭೀರವಾಗಿದ್ದು, ಕೆಂಪೇಗೌಡ ಆಸ್ಪತ್ರೆಯ ತೀವ್ರ ನಿಗಾಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸುರೇಶ್, ರಾಜೇಶ್, ಆನಂದ್ ಮತ್ತು ಪ್ರಕಾಶ್ ಎಂಬುವವರು ಇರಿತಕ್ಕೊಳಗಾಗಿದ್ದು, ಚಿಕಿತ್ಸೆ ಪಡೆದಿದ್ದಾರೆ.ಕುಟುಂಬಸ್ಥರು ಆರೋಪಿಯನ್ನು ಮಾನಸಿಕ ಅಸ್ವಸ್ಥ ಎಂದು ಹೇಳುತ್ತಿದ್ದಾರೆ. ಆದರೆ ತನಿಖೆ ವೇಳೆ ಆರೋಪಿ ಮಾನಸಿಕ ಅಸ್ವಸ್ಥ ಎಂಬುದು ಗೊತ್ತಾಗಿಲ್ಲ. ವೈದ್ಯಕೀಯ ಪರೀಕ್ಷೆ ಬಳಿಕ ತಿಳಿಯಲಿದೆ ಎಂದು ಪಶ್ಚಿಮ ವಿಭಾಗದ ಡಿಸಿಪಿ ಸಂಜೀವ್ ಎಂ.ಪಾಟೀಲ್ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.