- ಆಧಾರ್ ಆಧಾರಿತ ಬಯೋಮೆಟ್ರಿಕ್ ಪದ್ಧತಿ
- ಆರೋಗ್ಯ ಇಲಾಖೆಯಲ್ಲಿ ನ.1ರಿಂದ ಕಡ್ಡಾಯ
ಬೆಂಗಳೂರು: ಸರ್ಕಾರದ ನೌಕರರು ಕೆಲಸ ಮಾಡುವುದೇ ಕಡಿಮೆ ಎಂಬ ಆರೋಪ ಎಲ್ಲಾ ಕಡೆ ಕೇಳಿ ಬರುತ್ತಿದೆ. ಈ ನಡುವೆ ನ.1ರಿಂದ ಆರೋಗ್ಯ ಇಲಾಖೆಯ ನೌಕರರಿಗೆ ಬಯೋಮೆಟ್ರಿಕ್ ಹಾಜರಾತಿ ಕಡ್ಡಾಯಗೊಳಿಸಿ ರಾಜ್ಯ ಆರೋಗ್ಯ ಇಲಾಖೆ ಆದೇಶ ಹೊರಡಿಸಿದೆ.
ಕರೋನಾ ವೈರಸ್ ಹಿನ್ನೆಲೆಯಲ್ಲಿ ಆಧಾರ್ ಆಧಾರಿತ ಬಯೋಮೆಟ್ರಿಕ್ ಹಾಜರಾತಿ ವ್ಯವಸ್ಥೆಯನ್ನು ಇಲ್ಲಿಯವರೆಗೆ ಸ್ಥಗಿತಗೊಳಿಸಲಾಗಿತ್ತು. ಸಮಯ ಪಾಲನೆಯ ದೃಷ್ಟಿಯಿಂದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಎನ್ಹೆಚ್ಎಂ, ನಿರ್ದೇಶನಾಲಯ ಸೇರಿದಂತೆ ಎಲ್ಲಾ ಕಚೇರಿ, ಆಸ್ಪತ್ರೆಗಳು, ಆರೋಗ್ಯ ಕೇಂದ್ರಗಳು, ತರಬೇತಿ ಕೇಂದ್ರಗಳಲ್ಲಿ ನ.1ರಿಂದ ಕಡ್ಡಾಯವಾಗಿ ಆಧಾರ್ ಆಧಾರಿತ ಬಯೋಮೆಟ್ರಿಕ್ ಹಾಜರಾತಿ ನಮೂದಿಸಲು ಆರೋಗ್ಯ ಇಲಾಖೆಯ ನೌಕರರಿಗೆ ತಿಳಿಸಿದೆ.