- ಕರೋನಾ ನಿಯಮ ಪಾಲನೆ ಕಡ್ಡಾಯ
- ಆಡಳಿತಕ್ಕೆ ಸರ್ಕಾರದ ಗೈಡ್ಲೈನ್
ಬೆಂಗಳೂರು: ಶಾಲಾ-ಕಾಲೇಜು ಕರೋನಾ ವೈರಸ್ ಭೀತಿಯಿಂದ ಬಂದ್ ಬಳಿಕ ನವೆಂಬರ್ 17ರಿಂದ ಎಲ್ಲಾ ಡಿಗ್ರಿ ಕಾಲೇಜುಗಳು ಆರಂಭವಾಗಲಿದೆ. ಇದಕ್ಕೆ ಈಗಾಗಲೇ ಸರ್ಕಾರದ ಕಡೆಯಿಂದ ಸಿದ್ಧತೆ ನಡೆದಿದೆ. ಜತೆಗೆ ಎಲ್ಲಾ ಆಡಳಿತ ಮಂಡಳಿಗಳಿಗೂ ಸರ್ಕಾರ ನಿಯಮ ಪಾಲನೆ ಕಡ್ಡಾಯಗೊಳಿಸಿದೆ.
ಸರ್ಕಾರ ಪದವಿ, ಸ್ನಾತಕೋತ್ತರ ಪದವಿ ಕಾಲೇಜು ಪ್ರಾರಂಭ ಮಾಡುವುದಾಗಿ ನಿರ್ಣಯಿಸಲಾಗಿದೆ. ಮಾರ್ಗಸೂಚಿ ಪಾಲನೆಯನ್ನು ಕಾಲೇಜು ಶಿಕ್ಷಣ ಇಲಾಖೆಗೆ ಹೆಗಲಿಗೆ ಹಾಕಲಾಗಿದೆ. ಮಾರ್ಗಸೂಚಿ ಪಾಲನೆಗೆ ಅಗತ್ಯ ಕ್ರಮವಹಿಸಿ ಎಂದು ಸಿಎಂ ಸೂಚನೆ ನೀಡಿದ್ದಾರೆ. ನವೆಂಬರ್ 17ರಿಂದ ಎಂಜಿನಿಯರಿಂಗ್, ಡಿಪೆÇ್ಲಮಾ, ಪದವಿ ಕಾಲೇಜು ಪ್ರಾರಂಭ ಮಾಡವುದಾಗಿ ಸಭೆಯಲ್ಲಿ ತೀರ್ಮಾನಿಸಲಾಯಿತು.
ಆನ್ ಲೈನ್, ಆಫ್ ಲೈನ್ ತರಗತಿ ಪಡಿಯೋ ಅವಕಾಶ ವಿದ್ಯಾರ್ಥಿಗೆ ಬಿಟ್ಟಿದ್ದಾಗಿದೆ. ಕಾಲೇಜಿಗೆ ಬರೋರು ರಿಜಿಸ್ಟರ್ ಮಾಡಿಕೊಳ್ಳಬೇಕು. ಅಲ್ಲದೆ ಪೆÇೀಷಕರ ಒಪ್ಪಿಗೆ ಕಡ್ಡಾಯವಾಗಿದೆ. ಕಾಲೇಜು ಬರೋರಿಗೆ ಇಲಾಖೆ ವ್ಯವಸ್ಥೆ ಮಾಡುತ್ತೆ. ಹಾಸ್ಟೆಲ್ ವಿದ್ಯಾರ್ಥಿಗಳಿಗೂ ಅಗತ್ಯ ಮುಂಜಾಗ್ರತಾ ಕ್ರಮದ ವ್ಯವಸ್ಥೆ ಮಾಡುವುದಾಗಿ ಸರ್ಕಾರದ ಮಟ್ಟದಲ್ಲಿ ನಡೆದ ಸಭೆಯಲ್ಲಿ ನಿರ್ಧರಿಸಲಾಗಿದೆ.
ಯುಜಿಸಿ ನಿಯಮದ ಪ್ರಕಾರ ಕಾಲೇಜು ಪ್ರಾರಂಭ ಮಾಡಲಾಗುತ್ತದೆ. ವಿದ್ಯಾರ್ಥಿಗಳ ಒತ್ತಾಸೆ ಮೇರೆಗೆ ಕಾಲೇಜು ಪ್ರಾರಂಭ ಮಾಡುವ ನಿರ್ಧಾರ ಸಭೆಯಲ್ಲಿ ಮಾಡಲಾಯಿತು. ಪ್ರತಿ ಕಾಲೇಜಿನಲ್ಲಿ ಟಾಸ್ಕ್ ಫೆÇೀರ್ಸ್ ಇರುತ್ತದೆ. ಅಲ್ಲದೆ ಪ್ರತಿ ಜಿಲ್ಲೆಗೆ ಡಿಸಿ ನೇತೃತ್ವದಲ್ಲಿ ಸಮಿತಿ ರಚಿಸಲಾಗುತ್ತದೆ. ಯಾರಿಗೂ ಒತ್ತಾಯ ಮಾಡಲ್ಲ. ಪೆÇೀಷಕರ ಅನುಮತಿ ಪತ್ರ ಕಡ್ಡಾಯ ಇರಬೇಕು. ಕಲಿಕೆಗೆ ಒತ್ತು ನೀಡುವ ಕೆಲಸ ಸರ್ಕಾರ ನೀಡ್ತಿದೆ ಎಂದು ಚರ್ಚಿಸಲಾಗಿದೆ. ಈ ಬಗ್ಗೆ ತಿಂಗಳಾಂತ್ಯಕ್ಕೆ ಸ್ಪಷ್ಟತೆ ಸಿಗಲಿದೆ.