- ಮಲೆನಾಡಿಗೂ ಬಂತು ಹೊಸ ಕಾನೂನು
- 15 ಜಿಲ್ಲೆಗಳಲ್ಲಿ ಅನುಮತಿ ಪಡೆಯದಿದ್ದರೆ ಶಿಕ್ಷೆ
ಬೆಂಗಳೂರು: ಇನ್ಮುಂದೆ ಬೋರ್ವೆಲ್ ಕೊರೆಯಬೇಕಾ…?. ಜಿಲ್ಲಾ ಅಂತರ್ಜಲ ಸಮಿತಿಯಿಂದ ಅನುಮತಿ ಪಡೆಯೋದು ಕಡ್ಡಾಯ!. ಒಂದು ವೇಳೆ ಅನುಮತಿ ಪಡೆಯದಿದ್ದರೆ ಶಿಕ್ಷೆ ಕಟ್ಟಿಟ್ಟ ಬುತ್ತಿ.
ಕರ್ನಾಟಕ ಅಂತರ್ಜಲ ಪ್ರಾಧಿಕಾರ ಈ ಮಹತ್ವದ ಅಧಿಸೂಚನೆ ಹೊರಡಿಸಿದೆ. ಅಂತರ್ಜಲ ಮಟ್ಟ ಕಡಿಮೆಯಾಗುತ್ತಿದೆ. ಭೂಮಿ ಬರಡಾಗುತ್ತಿದೆ. ಈ ಹಿನ್ನಲೆಯಲ್ಲಿ ಬೋರ್ವೆಲ್ ಕೊರೆಸಲು ನಿಬಂಧನೆ ಹಾಕಲಾಗಿದೆ. ಅನುಮತಿ ಪಡೆಯದೇ ಬಾವಿ ಕೊರೆಸಿದರೆ ಅಂತವರನ್ನು ಶಿಕ್ಷೆಗೆ ಗುರಿಪಡಿಸಲಾಗುತ್ತದೆ ಎಂದು ಆದೇಶ ಹೊರಡಿಸಲಾಗಿದೆ.
ರಾಜ್ಯದ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬಾಗಲಕೋಟೆ, ಬೆಳಗಾವಿ, ಬಳ್ಳಾರಿ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಗದಗ, ಹಾಸನ, ಕೋಲಾರ, ರಾಮನಗರ, ತುಮಕೂರು ಈ 15 ಜಿಲ್ಲೆಗಳಲ್ಲಿನ ಒಟ್ಟು 45 ತಾಲೂಕುಗಳಿಗೆ ಈ ಆದೇಶ ಅನ್ವಯವಾಗಲಿದೆ ಎಂದು ಹೇಳಲಾಗಿದೆ. ಇಲ್ಲಿ ಬೋರ್ವೆಲ್ ಕೊರೆಯಬೇಕಾದರೆ ಅನುಮತಿ ಪಡೆಯುವುದು ಕಡ್ಡಾಯವಾಗಲಿದೆ.