- 8 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
- ಮಲೆನಾಡು, ಬೆಂಗಳೂರಲ್ಲೂ ಮಳೆ
NAMMUR EXPRESS NEWS
ಬೆಂಗಳೂರು: ರಾಜ್ಯದಲ್ಲಿ ಹಿಂಗಾರು ಮಳೆ ಮತ್ತೆ ಚುರುಕುಗೊಳ್ಳುತ್ತಿದ್ದು, ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಆಗಲಿದೆ. ಈಗಾಗಲೇ ಬೆಂಗಳೂರು, ಮಲೆನಾಡಿನ ಹಲವು ಕಡೆ ಮಳೆಯಾಗಿದೆ.
ಚೆನ್ನೈ ಅಲ್ಲಿ ಮಂಜು ಕವಿದ ವಾತಾವರಣ ಇದ್ದು ಬೆಂಗಳೂರಿನಲ್ಲೂ ಮಳೆ, ಮಂಜಿನ ವಾತಾವರಣ ಇದೆ.
ಕರಾವಳಿಯ ಜಿಲ್ಲೆಗಳು ಸೇರಿದಂತೆ ಒಟ್ಟು ರಾಜ್ಯದ 8 ಜಿಲ್ಲೆಗಳಿಗೆ ಹಳದಿ ಅಲರ್ಟ್ ನೀಡಲಾಗಿದೆ. ರಾಜ್ಯದಲ್ಲಿ ಕೆಲವು ದಿನಗಳಿಂದ ಕಡಿಮೆಯಾಗಿದ್ದ ಮಳೆ ಮತ್ತೆ ಆರಂಭವಾಗಿದೆ. ಗುರುವಾರ ಸಂಜೆಯಿಂದಲೇ ಬೆಂಗಳೂರಿನ ಹಲವೆಡೆ ಮಳೆ ಆರಂಭವಾಗಿದ್ದು, ಬೆಂಗಳೂರಿನ ಹಲವು ಜಿಲ್ಲೆಗಳಲ್ಲಿ ಇಂದು ಕೂಡ ಭಾರೀ ಮಳೆಯಾಗಲಿದೆ. ರಾಜ್ಯದಲ್ಲಿ ಹಿಂಗಾರು ಮಳೆ ಮತ್ತೆ ಚುರುಕುಗೊಳ್ಳುತ್ತಿದ್ದು, ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದ್ದು ಒಟ್ಟು 8 ಜಿಲ್ಲೆಗಳಿಗೆ ಹಳದಿ ಅಲರ್ಟ್ ನೀಡಲಾಗಿದೆ. ಹಲವು ಜಿಲ್ಲೆಗಳಲ್ಲಿ ನವೆಂಬರ್ 13 ಮತ್ತು 14ರಂದು ಮಳೆಯಾಗಲಿದ್ದು, ಬೆಂಗಳೂರು ಸೇರಿದಂತೆ ಚಾಮರಾಜನಗರ, ಕೊಡಗು, ಮಂಡ್ಯ ಮೈಸೂರು, ಹಾಸನ, ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ . ಹಾಗೇ, ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ, ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲೂ ನವೆಂಬರ್ 14ರಂದು ಭಾರೀ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.