Categories
ಬೆಂಗಳೂರು

ರಮೇಶ್ ಅರವಿಂದ್ ಪುತ್ರಿಗೆ “ಕಂಕಣ ಭಾಗ್ಯ”!

  • ಡಿ.28ರಂದು ವಿವಾಹ: ಮನೆಯಲ್ಲಿ ಸಂಭ್ರಮ
  • ಜನವರಿ ಎರಡನೇ ವಾರ ಅರತಕ್ಷತೆ

ಬೆಂಗಳೂರು: ಕನ್ನಡ ಚಿತ್ರರಂಗದ ಸ್ಟಾರ್ ನಟ ರಮೇಶ್ ಅರವಿಂದ್ ಮನೆಯಲ್ಲಿ ಮದುವೆ ಸಂಭ್ರಮ.
ರಮೇಶ್ ಅರವಿಂದ್ ಹಾಗೂ ಅರ್ಚನಾ ದಂಪತಿಗಳ ಪುತ್ರಿ ನಿಹಾರಿಕ ಅವರ ಮದುವೆ ಅಕ್ಷಯ್ ಅವರೊಂದಿಗೆ ಇದೇ ಡಿಸೆಂಬರ್ 28 ರಂದು ನಡೆಯಲಿದೆ. ‌
ನಿಹಾರಿಕ ಹಾಗೂ ಅಕ್ಷಯ್ ಒಂದೇ ಸಂಸ್ಥೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದು, ಈಗ ನವಜೀವನಕ್ಕೆ ಅಡಿಯಿಡುತ್ತಿದ್ದಾರೆ.
ಇವರ ವಿವಾಹ ಮಹೋತ್ಸವ ಎರಡು ಕುಟಂಬಗಳ ಸದಸ್ಯರ ಸಮ್ಮುಖದಲ್ಲಿ ಕರೋನಾ ನಿಯಮಾನುಸಾರ ನಡೆಯಲಿದೆ.ಜನವರಿ ಎರಡನೇ ವಾರದಲ್ಲಿ ಆರತಕ್ಷತೆ ಆಯೋಜಿಸಲಾಗಿದ್ದು, ಅಂದು ಚಿತ್ರರಂಗ‌ ಸೇರಿದಂತೆ ಎಲ್ಲಾ ಕ್ಷೇತ್ರಗಳ ಗಣ್ಯರನ್ನು ಆಹ್ವಾನಿಸಲಾಗುತ್ತಿದೆ.
ನಾನು ಚಿತ್ರರಂಗಕ್ಕೆ ಬಂದ ದಿನದಿಂದಲೂ‌ ಕರ್ನಾಟಕದ ಜನತೆ, ಚಿತ್ರರಸಿಕರು ಹಾಗೂ ಮಾಧ್ಯಮದವರು ನೀಡಿರುವ ಪ್ರೋತ್ಸಾಹ ಅಷ್ಟಿಷ್ಟಲ್ಲ.‌
ನಿಮ್ಮ ಪ್ರೀತಿಯ ಆಶೀರ್ವಾದ ಮದುಮಕ್ಕಳ ಮೇಲೆ ಸದಾ ಇರಲಿ ಎಂದು ರಮೇಶ್ ಅರವಿಂದ್ ಮನವಿ ಮಾಡಿದ್ದಾರೆ.

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.