- ಖಾಸಗೀಕರಣದ ವಿರುದ್ಧ ಆಕ್ರೋಶ
ಬೆಂಗಳೂರು: ರಾಜ್ಯ ಸಾರಿಗೆ ಸಂಸ್ಥೆಯನ್ನು ಖಾಸಗಿ ಸಹಭಾಗಿತ್ವದ ಹೆಸರಿನಲ್ಲಿ ಖಾಸಗೀಕರಣ ಮಾಡುವುದನ್ನು ನಿಲ್ಲಿಸಬೇಕು. ಕರೋನಾ ಸಂಕಷ್ಟದಲ್ಲಿ ಸಾರಿಗೆ ನೌಕರರಿಗೆ ಪೂರ್ಣ ವೇತನ ಒದಗಿಸಬೇಕು ಮುಂತಾದ ವಿವಿಧ ಬೇಡಿಕೆಗಳನ್ನ ಮುಂದಿಟ್ಟು ರಾಜ್ಯ ಸಾರಿಗೆ ನೌಕರರು ಗುರುವಾರ ಪ್ರತಿಭಟನೆ ಶುರು ಮಾಡಿದ್ದಾರೆ.
ಸಿಐಟಿಯು ಕಾರ್ಮಿಕ ಸಂಘಟನೆಯ ವತಿಯಿಂದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ನೌಕರರ ಒಕ್ಕೂಟ ನೇತೃತ್ವದಲ್ಲಿ 4 ಸಾರಿಗೆ ನಿಗಮಗಳ ಕಾರ್ಮಿಕರು ಗುರುವಾರ ಫ್ರೀಡಂ ಪಾರ್ಕ್ನಲ್ಲಿ ಬೆಳಗ್ಗೆ 11:30 ಗಂಟೆಗೆ ಪ್ರತಿಭಟನೆ ಪ್ರಾರಂಭವಾಗಿದ್ದು, ಸರ್ಕಾರಕ್ಕೆ ಮತ್ತು ಆಡಳಿತ ವರ್ಗಕ್ಕೆ ಮನವಿ ಪತ್ರ ಸಲ್ಲಿಸಿದ್ದಾರೆ.
ಸಾರಿಗೆ ನಿಗಮಗಳಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ಸರಿಯಾದ ಸುರಕ್ಷತಾ ಸಾಮಗ್ರಿಗಳನ್ನ ಒದಗಿಸಿಲ್ಲ. 50ಕ್ಕೂ ಹೆಚ್ಚು ಕಾರ್ಮಿಕರು ಕೊರೋನಾಗೆ ಬಲಿಯಾಗಿದ್ದಾರೆ. ಮೃತರ ಕುಟುಂಬಗಳಿಗೆ ಸರ್ಕಾರವೇ 30 ಲಕ್ಷ ರೂ ಪರಿಹಾರ ಘೋಷಿಸಿದರೂ ನಿಗಮಗಳಿಂದ ಈ ಆದೇಶ ಜಾರಿ ಆಗಿಲ್ಲ. ಕೂಡಲೇ ಪರಿಹಾರ ಒದಗಿಸುವ ವ್ಯವಸ್ಥೆ ಮಾಡಬೇಕ. ನಿಗಮಗಳಲ್ಲಿ ವಾಹನಗಳ ಕಾರ್ಯಾಚರಣೆ ಯಥಾಸ್ಥಿತಿಗೆ ಬರುವವರೆಗೂ ಕಾರ್ಮಿಕರಿಗೆ ಪೂರ್ಣ ವೇತನ ನೀಡಬೇಕು. ಕಾರ್ಮಿಕರು ಗಳಿಸಿದ್ದ ರಜೆಗಳನ್ನು ಅವರ ಖಾತೆಗೆ ಪುನಃ ವಾಪಸ್ ನೀಡಬೇಕು ಎಂಬ ಹತ್ತಾರು ಬೇಡಿಕೆ ಮುಂದಿಟ್ಟು ಹೋರಾಟ ನಡೆಸುತ್ತಿದ್ದಾರೆ.