- ತಪ್ಪು ಮಾಹಿತಿ, ಅಕ್ರಮ, ಹಗರಣಕ್ಕೆ ಹೈಕೋರ್ಟ್ ಕಡಿವಾಣ
- ರಾಜ್ಯದ ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ದಾಳಿ
NAMMUR EXPRESS NEWS
ಬೆಂಗಳೂರು: ರಾಜ್ಯದ 200 ಕ್ಕೂ ಅಧಿಕ ಗ್ರಾಮಗಳಲ್ಲಿ ಸ್ಮಶಾನಕ್ಕೆ ಜಾಗ ಕಲ್ಪಿಸದಿದ್ದರೆ, 319 ಗ್ರಾಮಗಳಿಗಷ್ಟೇ ಸಶಾನ ಜಾಗ ಒದಗಿಸಬೇಕಿದೆ ಎಂದು ತಪ್ಪು ಮಾಹಿತಿ ನೀಡಿರುವ ಎಲ್ಲ ಜಿಲ್ಲಾಧಿಕಾರಿ ಹಾಜರಾಗಬೇಕು ಎಂದು ತಾಕೀತು ಮಾಡಿರುವ ಹೈಕೋರ್ಟ್, ತಪ್ಪು ಮಾಹಿತಿ ನೀಡುವ ಜೈಲಿಗೆ ಕಳುಹಿಸಲಾಗುವುದು ಎಂದು ಎಚ್ಚರಿಕೆ ನೀಡಿದೆ.
ರಾಜ್ಯದಲ್ಲಿ ಸ್ಮಶಾನಕ್ಕೆ ಜಾಗ ಇಲ್ಲದೆ ಗ್ರಾಮಗಳಿಗೆ ಅಗತ್ಯ ಭೂಮಿ ಒದಗಿಸಲು ಸರ್ಕಾರಕ್ಕೆ ನಿರ್ದೇಶಿಸುವಂತೆ ಕೋರಿ ಬೆಂಗಳೂರು ನಿವಾಸಿ ಮಹಮದ್ ಇಕಾರ ಸಲ್ಲಿಸಿದ್ದ ಸಿವಿಲ್ ನ್ಯಾಯಾಂಗ ನಿಂದನೆ ಅರ್ಜಿ ವಿಚಾರಣೆ ನಡೆಸಿದ ಹಿರಿಯ ನ್ಯಾಯಮೂರ್ತಿ ಬಿ, ನೀರಪ್ಪ ಅವರ ನೇತೃತ್ವದ ವಿಭಾಗೀಯ ನ್ಯಾಯಪೀಠ ಈ ನಿರ್ದೇಶನ ನೀಡಿದೆ.
ಜ10ರಂದು ಸರ್ಕಾರ ಸಲ್ಲಿಸಿದ್ದ ಪ್ರಮಾಣ ಪತ್ರದಲ್ಲಿ ರಾಜ್ಯದ ಒಟ್ಟು 29,616 ಗ್ರಾಮಗಳ ಪೈಕಿ ಈವರೆಗೆ 27,903 ಗ್ರಾಮಗಳಲ್ಲಿ ಸ್ಮಶಾನಕ್ಕೆ ಜಮೀನು ಒದಗಿಸಲಾಗಿದೆ. 319 ಗ್ರಾಮಗಳಿಗೆ ಸ್ಥಾನ ಸೌಲಭ್ಯ ಒದಗಿಸಬೇಕಾಗಿದೆ. ಒಟ್ಟು 1,394 ಬೇಚರಾಕ್ (ಜನ ವಸತಿ ಇಲ್ಲದೆ ಗ್ರಾಮಗಳಿವೆ. ಎಂದುವಿವರಿಸಲಾಗಿತ್ತು. ಅದನ್ನು ಪರಿಗಣಿಸಿದ್ದ ನ್ಯಾಯಪೀಠ, ಸರ್ಕಾರದ ವರದಿ ಪರಿಶೀಲಿಸಿ ವಸ್ತುಸ್ಥಿತಿ ಮಾಹಿತಿ ತಿಳಿಸುವಂತೆ ಮೂಲಕ ಕಾನೂನು ಸೇವೆಗಳ ಪ್ರಾಧಿಕಾರಕ್ಕೆ ನಿರ್ದೇಶಿಸಿತ್ತು.
ನ್ಯಾಯಾಲಯಕ್ಕೆ ವಂಚನೆ ಎಸಗಿರುವ ಜಿಲ್ಲಾಧಿಕಾರಿಗಳನ್ನು ಗುರುವಾರ ಪ್ರಾಧಿಕಾರದ ಪರ ವಕೀಲರು, ಸರ್ಕಾರದ ಅಂಕಿ-ಅಂಶಗಳಿಗೂ ಮತ್ತು ಪ್ರಾಧಿಕಾರ ಸಂಗ್ರಹಿಸಿದ ಮಾಹಿತಿಗೂ ವ್ಯತ್ಯಾಸವಿದೆ, ರಾಜ್ಯದಲ್ಲಿ ಇನ್ನೂ 2,141 ಗ್ರಾಮಗಳಲ್ಲಿ ಸ್ಥಶಾನಕ್ಕೆ ಜಾಗ ಒದಗಿಸಬೇಕಿದೆ ಎಂದು ನ್ಯಾಯಪೀಠದ ಗಮನಕ್ಕೆ ತಂದರು. ಇದೇ ವೇಳೆ ಸರ್ಕಾರಿ ವಕೀಲರು ಸಹ, ಪ್ರಕರಣದಲ್ಲಿ ಸರ್ಕಾರದಿಂದ ತಪ್ಪಾಗಿದೆ, ಕೆಲ ಜಿಲ್ಲಾಧಿಕಾರಿಗಳು ತಪ್ಪು ಮಾಹಿತಿ ನೀಡಿದ್ದಾರೆ ಎಂದು ತಿಳಿಸಿದರು. ಇದರಿಂದ ಕೋಗೊಂಡ ನ್ಯಾಯಪೀಠ, ತಪ್ಪ ಮಾಹಿತಿ ನೀಡಿದ ಎಲ್ಲ ಜಿಲ್ಲಾಧಿಕಾರಿಗಳು ಮಾ.16 ಕ್ಕೆ ವಿಚಾರಣೆಗೆ ಹಾಜರಾಗಬೇಕು ಎಂದು ನಿರ್ದೇಸಿತು,
ಲಂಚ ಪಡೆಯುವಾಗ ಮಹಿಳಾ ಅಧಿಕಾರಿ ಅರೆಸ್ಟ್!
ಮಡಿಕೇರಿ: ಅಧೀನ ಅಧಿಕಾರಿಯೊಬ್ಬರಿಂದ 50,000 ರೂಪಾಯಿಲಂಚ ಪಡೆಯುತ್ತಿದ್ದ ಆರೋಪಕ್ಕೆ ಸಂಬಂಧಿಸಿದಂತೆ ಇಲ್ಲಿನ ಸಾಮಾಜಿಕ ಅರಣ್ಯ ವಿಭಾಗದ ಡಿಸಿಎಫ್ ಪೂರ್ಣಿಮಾ ಅವರನ್ನು ಲೋಕಾಯುಕ್ತ ಪೊಲೀಸರು ಗುರುವಾರ ಬಂಧಿಸಿದ್ದಾರೆ.
ಇಲಾಖೆಯಿಂದ 1.60 ಲಕ್ಷ ವೆಚ್ಚದಲ್ಲಿ ಎರಡು ಕಾಮಗಾರಿಗಳನ್ನು ಕೈಗೊಳ್ಳಲಾಗಿತ್ತು.ಇದರಲ್ಲಿ ಒಂದು ಲಕ್ಷ ರೂಪಾಯಿ ಹಣವನ್ನು ತನಗೆ ನೀಡಬೇಕು ಎಂದು ಆರೋಪಿ ಪೂರ್ಣಿಮಾ ತನ್ನ ಅಧೀನ ಅಧಿಕಾರಿಯನ್ನು ಪೀಡಿಸುತ್ತಿದ್ದರು. ಹಣ ನೀಡದೇ ಇದ್ದರೆ ಅಮಾನತುಪಡಿಸಲಾಗುವುದು ಎಂದು ಬೆದರಿಕೆಯನ್ನೂ ಒಡ್ಡಿದ್ದರು. ಮೊದಲಿಗೆ ಮುಂಗಡವಾಗಿ 50 ಸಾವಿರ ರೂಪಾಯಿ ಇಲಾಖೆಯಿಂದ 1.60 ಲಕ್ಷ ವೆಚ್ಚದಲ್ಲಿ ಎರಡು ಕಾಮಗಾರಿಗಳನ್ನು ಕೈಗೊಳ್ಳಲಾಗಿತ್ತು.
ಇದರಲ್ಲಿ ಒಂದು ಲಕ್ಷ ರೂಪಾಯಿ ಹಣವನ್ನು ತನಗೆ ನೀಡಬೇಕು ಎಂದು ಆರೋಪಿ ಪೂರ್ಣಿಮಾ ತನ್ನ ಅಧೀನ ಅಧಿಕಾರಿಯನ್ನು ಪೀಡಿಸುತ್ತಿದ್ದರು. ಹಣ ನೀಡದೇ ಇದ್ದರೆ ಅಮಾನತುಪಡಿಸಲಾಗುವುದು ಎಂದು ಬೆದರಿಕೆಯನ್ನೂ ಒಡ್ಡಿದ್ದರು. ಮೊದಲಿಗೆ ಮುಂಗಡವಾಗಿ 50 ಸಾವಿರ ರೂಪಾಯಿ ನೀಡುವಂತೆ ಕೇಳಿದ್ದರು. ಈ ಹಣವನ್ನು ಅರಣ್ಯ ಭವನದ ಮುಂಭಾಗ ಇರುವ ತಮ್ಮ ಜೀಪಿನಲ್ಲಿ ಇಡುವಂತೆ ಪೂರ್ಣಿಮಾ ಸೂಚಿಸಿದ್ದರು.
ಅದರಂತೆ ಅಧೀನ ಅಧಿಕಾರಿಯು ಗುರುವಾರ ಸಂಜೆ ಜೀಪಿನಲ್ಲಿ ಲಂಚದ ಹಣ ಹಾಕುತ್ತಿದ್ದಂತೆ ಪೂರ್ಣಿಮಾ ಅವರನ್ನು ಬಂಧಿಸಲಾಯಿತು ಎಂದು ಲೋಕಾಯುಕ್ತ ಪೊಲೀಸರು ತಿಳಿಸಿದ್ದಾರೆ.
ಮೈಸೂರು ವಿಭಾಗದ ಲೋಕಾಯುಕ್ತ ಎಸ್.ಪಿ ಸುರೇಶ್ಬಾಬು ಅವರ ಮಾರ್ಗದರ್ಶನದಲ್ಲಿ ಕಾರ್ಯಾಚರಣೆ ನಡೆಸಲಾಗಿತ್ತು. ಈ ವೇಳೆ ಮೈಸೂರಿನ ಡಿವೈಎಸ್ಪಿ ಕೃಷ್ಣಯ್ಯ, ಮಡಿಕೇರಿಯ ಡಿವೈಎಸ್ಪಿ ಪವನಕುಮಾರ್ ಹಾಗೂ ಇನ್ಸ್ಪೆಕ್ಟರ್ಗಳಾದ ಲೋಕೇಶ್, ಜಯರತ್ನಾ ಸಿಬ್ಬಂದಿಯಾದ ಲೋಕೇಶ್, ಮಂಜುನಾಥ, ಸಲಾಹುದ್ದೀನ್, ದೀಪಿಕಾ, ಅರುಣ್ಕುಮಾರ್, ಶಶಿ, ತ್ರಿವೇಣಿ, ಪ್ರಕಾಶ್, ಲೋಕೇಶ್ ಕಾರ್ಯಾಚರಣೆ ತಂಡದಲ್ಲಿದ್ದರು.