- ಕಿರಿಕ್ ಪಾರ್ಟಿ ಹುಡುಗಿಗೆ ಭಾರೀ ಡಿಮ್ಯಾಂಡ್
ಹೈದರಾಬಾದ್: ಕನ್ನಡದ ಕಿರಿಕ್ ಪಾರ್ಟಿ ಸಿನಿಮಾದ ಮೂಲಕ ಚಿತ್ರರಂಗಕ್ಕೆ ಎಂಟ್ರಿಯಾದ ಕೊಡಗಿನ ನಟಿ ರಷ್ಮಿಕಾ ಮಂದಣ್ಣ ಇದೀಗ ದಕ್ಷಿಣ ಭಾರತ ಚಿತ್ರರಂಗದ ಬಹು ಬೇಡಿಕೆಯ ನಟಿಯಾಗಿದ್ದಾರೆ. ತೆಲುಗು ಹಾಗೂ ತಮಿಳು ಚಿತ್ರರಂಗದಲ್ಲಿ ಭಾರಿ ಸಂಭಾವನೆಗಾಗಿ ಮತ್ತೆ ಸುದ್ದಿಯಾಗಿದ್ದಾರೆ. ಅಂದಾಜು ಪ್ರಕಾರ ಒಂದು ಸಿನಿಮಾಗೆ ರಷ್ಮಿಕಾ 1 ಕೋಟಿ ಸಂಭಾವನೆ ಪಡೆಯಲಿದ್ದಾರೆ ಎನ್ನಲಾಗಿದೆ.
ತೆಲುಗಿನಲ್ಲಿ ಹೊಸ ಸಿನಿಮಾ ಆಡಲ್ಲು ಮೀಕು ಜೋಹರ್ಲು ಚಿತ್ತ್ರಕ್ಕೆ ರಶ್ಮಿಕಾ ಮಂದಣ್ಣ ಸಹಿ ಮಾಡಿದ್ದು, ಚಿತ್ರ ಅಧಿಕೃತವಾಗಿ ತಿರುಮಲದಲ್ಲಿ ಮುಹೂರ್ತ ಮುಗಿಸಿ ಸೆಟ್ಟೇರಿದೆ. ತೆಲುಗಿನಲ್ಲಿ ಬ್ಯಾಕ್ ಟು ಬ್ಯಾಕ್ ಹಿಟ್ ಚಿತ್ರಗಳನ್ನೇ ನೀಡುತ್ತಿರುವ ರಶ್ಮಿಕಾಗೆ ಒಂದು ಕೋಟಿಗೂ ಅಧಿಕ ಸಂಭಾವನೆ ನೀಡಲು ನಿರ್ಮಾಪಕರು ಸಿದ್ಧರಾಗಿದ್ದಾರೆ ಎಂಬ ಮಾಹಿತಿ ಕೇಳಿ ಬರುತ್ತಿದೆ. ತೆಲುಗು ನಟ ಶಾರ್ವಾನಂದ್ ನಾಯಕರಾಗಿರುವ ಈ ಚಿತ್ರಕ್ಕೆ ಮೊದಲು ನಟಿ ಸಾಯಿ ಪಲ್ಲವಿ ಆಯ್ಕೆಯಾಗಿದ್ದರು. ಸಾಯಿ ಪಲ್ಲವಿ ಸಿನಿಮಾದಿಂದ ಹೊರನಡೆದಿದ್ದಾರೆ. ಪಲ್ಲವಿ ಜಾಗಕ್ಕೆ ನಟಿ ರಶ್ಮಿಕಾ ಮಂದಣ್ಣ ಆಯ್ಕೆಯಾಗಿದ್ದಾರೆ. ಬಹುನಿರೀಕ್ಷೆಯ ಸಿನಿಮಾದ ಚಿತ್ರೀಕರಣ ಮುಂದಿನ ವರ್ಷ ಪ್ರಾರಂಭವಾಗಲಿದ್ದು, ವರ್ಷದ ಕೊನೆಯಲ್ಲಿ ರಿಲೀಸ್ ಆಗಲಿದೆ ಎಂಬ ಪ್ಲಾನ್ ಇದೆ.