2 ತಿಂಗಳು ಬಿಸಿಲಿನ ತಾಪದ ಎಚ್ಚರಿಕೆ
– ಸೂರ್ಯನ ತಾಪಮಾನದಿಂದ ಅನೇಕ ಖಾಯಿಲೆ
– ಆರೋಗ್ಯ ಕಾಪಾಡಿಕೊಳ್ಳಲು ಕೆಲವೊಂದಿಷ್ಟು ಸಲಹೆ
NAMMUR EXPRESS NEWS
ಬೆಂಗಳೂರು: ರಾಜ್ಯದಲ್ಲಿ ಬರ ತಾಂಡವವಾಡುತ್ತಿದೆ. ನೀರಿಗೆ ಹಾಹಾಕಾರ ಉಂಟಾಗಿದೆ. ಇದೇ ವೇಳೆ ಬಿಸಿಲು ದಿನದಿಂದ ದಿನಕ್ಕೆ ಜಾಸ್ತಿಯಾಗುತ್ತಿದೆ. ಫೆಬ್ರವರಿಯಿಂದ ಆರಂಭವಗಿರುವ ಈ ಬಿಸಿಲು ಜೂನ್ ಎರಡನೇ ವಾರದವರೆಗೂ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬಿಸಿಲಿನಿಂದ ಆರೋಗ್ಯ ಸಮಸ್ಯೆ ಉಂಟಾಗಲಿದೆ. ಹೀಗಾಗಿಯೇ ಅನೇಕ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳುವುದು ಅನಿವಾರ್ಯ. ಹವಾಮಾನ ಇಲಾಖೆ ಸೂರ್ಯನ ಬಿಸಿಲು ಮತ್ತು ಬಿಸಿಯ ಗಾಳಿಯೂ ಹೆಚ್ಚಾಗುವ ಬಗ್ಗೆ ಮುನ್ನೆಚ್ಚರಿಕೆ ನೀಡಿದೆ. ಸೂರ್ಯನ ಶಾಖದ ಪ್ರಖರತೆಯಿಂದ ಡಿಹೈಡೇಷನ್, ಸನ್ ಸ್ಟೋಕ್, ವಿಪರೀತ ತಲೆನೋವು ಸೇರಿದಂತೆ ಅನೇಕ ಕಾಯಿಲೆಗಳು ಬರುತ್ತವೆ. ಅದಕ್ಕಾಗಿಯೇ ಅನೇಕ ವೈದ್ಯರು ಹಲವಾರು ಸಲಹೆಗಳನ್ನು ನೀಡುತಿದ್ದಾರೆ.
ಆರೋಗ್ಯ ಕಾಪಾಡಿಕೊಳ್ಳಲು ಸಲಹೆಗಳು
*ಹೊರಗೆ ಹೋಗುವುದನ್ನು ತಪ್ಪಿಸಬೇಕು
* ಅನಿವಾರ್ಯತೆ ಇದ್ದಲ್ಲಿ ಬಿಳಿ ಬಣ್ಣದ ಛತ್ರಿ ಬಳಸಬೇಕು
* ಕಪ್ಪು, ನೀಲಿ ಬಣ್ಣದ ಬಟ್ಟೆ ಧರಿಸಬಾರದು
*ಹೆಚ್ಚು ಕಾಟನ್ ಬಟ್ಟೆ ಧರಿಸಬೇಕು
*ಹಿರಿಯ ನಾಗರಿಕರಿಗೆ, ಮಕ್ಕಳಿಗೆ ಹೆಚ್ಚು ನೀರು ಕುಡಿಯಲು ಕೊಡಬೇಕು
* ಬಿಸಿಲಿನಿಂದ ವಿಟಮಿನ್ ‘ಸಿ’ ಕೊರತೆ ಎದುರಾಗುವುದರಿಂದ ಹೆಚ್ಚು ನಿಂಬೆಹಣ್ಣಿನ ಜ್ಯೂಸ್ ಮಾಡಿಕೊಂಡು ಕುಡಿಯಿರಿ. ಸಕ್ಕರೆ ಬದಲು ಬೆಲ್ಲವನ್ನು ಬಳಸುವುದು ಸೂಕ್ತ.
* ಬೆಳಗ್ಗೆ ಎದ್ದ ತಕ್ಷಣ ತುಳಸಿ ಎಲೆಗಳನ್ನು ಮಿಕ್ಸಿಯಲ್ಲಿ ರುಬ್ಬಿಕೊಂಡು ಎರಡು ಲೋಟದಷ್ಟು ನೀರನ್ನು ಬೆರೆಸಿ ಕುಡಿಯಿರಿ ಇದರಿಂದ ಕೆಲಸ ಮಾಡುವಾಗ ಸುಸ್ತಾಗುವುದಿಲ್ಲ
* ಆಹಾರದಲ್ಲಿ ಮಸಾಲೆ ಪದಾರ್ಥಗಳನ್ನು ಹೆಚ್ಚು ಬಳಸಬಾರದು.
*ತಲೆ ಮತ್ತು ಮೆದುಳು ತಂಪಾಗಿರಲು ಎರಡು ದಿನಕ್ಕೊಮ್ಮೆ ಕೊಬ್ಬರಿ ಎಣ್ಣೆ ಬದಲು ರಾತ್ರಿ ಮಲಗುವಾಗ ಹರಳೆಣ್ಣೆ ಹಚ್ಚಿ ಬೆಳಗ್ಗೆ ಸ್ನಾನ ಮಾಡಬೇಕು.
*ರಾತ್ರಿ ಮಲಗುವ ಮೊದಲು ತಣ್ಣೀರಿನ ಬಟ್ಟೆಯಿಂದ ನೆಲವನ್ನು ಒರೆಸಿಕೊಂಡು ತೆಳುವಾದ ಬಟ್ಟೆಯ ಮೇಲೆ ಮಲಗುವುದು ಸೂಕ್ತ.
*ಹೆಸರು ಕಾಳುಗಳನ್ನು ನೀರಿನಲ್ಲಿ ಅರ್ಧ ಗಂಟೆಯಷ್ಟು ನೆನಸಿಟ್ಟು ನಂತರ ಮಿಕ್ಸಿಯಲ್ಲಿ ಜ್ಯೂಸ್ ಮಾಡಿಕೊಂಡು ದಿನಕ್ಕೆರಡು ಬಾರಿ ಕುಡಿದಲ್ಲಿ ದೇಹ ತಂಪಾಗಿರುತ್ತದೆ.
*5 ವರ್ಷದ ಒಳಗಿನ ಮಕ್ಕಳಿಗೆ ಪ್ರತಿ ಅರ್ಧ ಗಂಟೆಗೊಮ್ಮೆ ಒಂದು ಚಿಟಿಕೆಯಷ್ಟು ಅಯೋಡಿನ್ ಉಪ್ಪು ಬೆರೆಸಿದ ನೀರನ್ನು ಕುಡಿಸುತ್ತಿರಬೇಕು.
* ಬೇಸಿಗೆ ದಿನಗಳಲ್ಲಿ ತಣ್ಣೀರಿನ ಸ್ನಾನ ಒಳ್ಳೆಯದ್ದು.