ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಫಲಿತಾಂಶ ಪ್ರಕಟ
– karresults.nic.in ನಲ್ಲಿ ಪೂರಕ ಪರೀಕ್ಷೆ ಫಲಿತಾಂಶ
– 50,478 ವಿದ್ಯಾರ್ಥಿಗಳು ಉತ್ತೀರ್ಣ: ಎರಡನೇ ಬಾರಿ ಫೇಲ್ ಆದವರೇ ಹೆಚ್ಚು!
NAMMUR EXPRESS NEWS
ಬೆಂಗಳೂರು: 2023ನೇ ಸಾಲಿನ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯ ಫಲಿತಾಂಶವು ಮಂಗಳವಾರ ಪ್ರಕಟವಾಗಿದೆ.
ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಜಾಲತಾಣವಾದ https://karresults.nic.in ನಲ್ಲಿ ಪೂರಕ ಪರೀಕ್ಷೆ ಫಲಿತಾಂಶ ಪ್ರಕಟವಾಗಿದೆ.
2023ನೇ ಸಾಲಿನ ದ್ವಿತೀಯ ಪಿಯುಸಿ ಪೂಕರ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದೆ. ಪರೀಕ್ಷೆಗೆ ಹಾಜರಾದ ಒಟ್ಟು 1,57,756 ವಿದ್ಯಾರ್ಥಿಗಳ ಪೈಕಿ 50,478 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಮಧ್ಯಾಹ್ನ 3 ಗಂಟೆಗೆ ಕಾಲೇಜುಗಳಲ್ಲಿ ಫಲಿತಾಂಶ ಲಗತ್ತಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಫಲಿತಾಂಶ ನೋಡೋದು ಹೇಗೆ?
ಪೂರಕ ಪರೀಕ್ಷೆಗಳಿಗೆ ಹಾಜರಾದ ವಿದ್ಯಾರ್ಥಿಗಳು ತಮ್ಮ ಫಲಿತಾಂಶಗಳನ್ನು ಅಧಿಕೃತ ವೆಬ್ ಸೈಟ್ ನಿಂದ karresults.nic.in ಪರಿಶೀಲಿಸಲು ಸಾಧ್ಯವಾಗುತ್ತದೆ.
ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯ ಫಲಿತಾಂಶವನ್ನು ವಿದ್ಯಾರ್ಥಿಗಳು ಮಂಡಳಿಯ ಜಾಲತಾಣ
https://karresults.nic.in ನಲ್ಲಿ ವೀಕ್ಷಿಸಬಹುದಾಗಿದೆ. ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಗೆ ಹಾಜರಾತಿ ಕೊರತೆಯಿಂದ ವಾರ್ಷಿಕ ಪರೀಕ್ಷೆಗೆ ಹಾಜರಾಗದ ವಿದ್ಯಾರ್ಥಿಗಳಿಗೂ ಇದೇ ಮೊದಲ ಬಾರಿಗೆ ಅವಕಾಶವನ್ನು ನೀಡಿತ್ತು.
ಫಲಿತಾಂಶ ನೋಡಲು https://kseab.karnataka.gov.in/
ಅಥವಾ https://karresults.nic.in
https://karresults.nic.in ವೆಬ್ ಸೈಟ್ ಲಿಂಕ್ ನೋಡಬಹುದಾಗಿದೆ. ವಿದ್ಯಾರ್ಥಿಗಳು ಅಧಿಕೃತ ವೆಬ್ಸೈಟ್ಗೆ ಹೋಗಿ ಫಲಿತಾಂಶ ನೋಡಬಹುದು.