Categories
ಬೆಂಗಳೂರು ರಾಜ್ಯ

ರೈತರ ಖಾತೆಗೆ 6 ಸಾವಿರ ರೂ..!

ರೈತರ ಖಾತೆಗೆ 6 ಸಾವಿರ ರೂ..!
– ಪಿಎಂ ಕಿಸಾನ್ ಸಮ್ಮಾನ್ ಯೋಜನೆ ನೋಂದಣಿ ವಿಶೇಷ ಅಭಿಯಾನ

NAMMUR EXPRESS NEWS
ಭಾರತ ಸರ್ಕಾರವು ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯನ್ನು ರಾಜ್ಯದಲ್ಲಿ ಜಾರಿಗೊಳಿಸಿದ್ದು, ಯೋಜನೆಯ ಮಾರ್ಗಸೂಚಿಯಂತೆ ಭೂ ಒಡೆತನ ಹೊಂದಿರುವ ಪ್ರತಿ ಅರ್ಹ ರೈತರ ಕುಟುಂಬಕ್ಕೆ ಕೇಂದ್ರ ಸರ್ಕಾರದಿಂದ ಒಂದು ವರ್ಷಕ್ಕೆ 6000 ರೂ. ಪ್ರತಿ 4 ತಿಂಗಳಿಗೊಮ್ಮೆ 3 ಕಂತುಗಳಲ್ಲಿ ನೀಡಲಾಗುತ್ತಿದೆ. ಸಾಗುವಳಿ ಭೂಮಿ ಹೊಂದಿರುವ ಎಲ್ಲಾ ಅರ್ಹ ರೈತರನ್ನು ಈ ಯೋಜನೆಯ ವ್ಯಾಪ್ತಿಗೆ ತರಲು ಫೆ. 12 ರಿಂದ 21 ರವರೆಗೆ 10 ದಿನಗಳ ರಾಷ್ಟ್ರವ್ಯಾಪಿ ವಿಶೇಷ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ.

ಅರ್ಹ ರೈತರ ನೋಂದಣಿಯೊಂದಿಗೆ ಈಗಾಗಲೇ ನೋಂದಣಿಯಾಗಿರುವ ರೈತರ ಬಾಕಿಯಿರುವ ಇ-ಕೆವೈಸಿ ಮಾಡಿಸಲು ಮತ್ತು ರೈತರ ಬ್ಯಾಂಕ್ ಖಾತೆಗೆ ಆಧಾ‌ರ್ ಜೋಡಣೆ ಮಾಡಿಸಿಕೊಳ್ಳುವ ಮೂಲಕ ರೈತರು ಈ ಯೋಜನೆಯ ಸದುಪಯೋಗ ಪಡೆದುಕೊಳ್ಳಬಹುದು. ರೈತರು ತಮ್ಮ ಆಧಾ‌ರ್ ಕಾರ್ಡ್ ಹಾಗೂ ಮೊಬೈಲ್‌ನೊಂದಿಗೆ ಹತ್ತಿರದ ಸಾಮಾನ್ಯ ಸೇವಾ ಕೇಂದ್ರ ಅಥವಾ ಗ್ರಾಮ ಒನ್ ಕೇಂದ್ರಗಳಿಗೆ ಭೇಟಿ ನೀಡಿ ಅಥವಾ ಕೇಂದ್ರ ಸರ್ಕಾರವು ಬಿಡುಗಡೆಗೊಳಿಸಿರುವ ಪಿಎಂಕಿಸಾನ್ ಇ-ಕೆವೈಸಿ ಫೇಸ್ ರೆಗ್ನನೇಷನ್ ಆಪ್ ಮೂಲಕ ಇ-ಕೆವೈಸಿ ಮಾಡಿಸುವಂತೆ ಶಿವಮೊಗ್ಗ ಜಂಟಿ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.