ಆನ್ ಲೈನ್ ಗೇಮಿಂಗ್ ವಂಚನೆಗೆ ಮೂಗುದಾರ?!
– ಯುವ ಜನತೆ, ವಿದ್ಯಾರ್ಥಿಗಳ ಬದುಕು ಹಾಳು
– ರಾಜ್ಯ ಸರ್ಕಾರದ ಮಹತ್ವದ ಹೆಜ್ಜೆ
ಕೇಂದ್ರ ಸರ್ಕಾರ ಕೂಡಲೇ ಎಲ್ಲಾ ಆನ್ಲೈನ್ ಜೂಜು ಗೇಮ್ ರದ್ದು ಪಡಿಸಲಿ: ಭಾರೀ ಅಭಿಯಾನ
NAMMUR EXPRESS NEWS
ಬೆಂಗಳೂರು: ಆನ್ ಲೈನ್ ಗೇಮಿಂಗ್ ಆ್ಯಪ್ ಮೂಲಕ ಮಕ್ಕಳು ಹಾಗೂ ಸಾರ್ವಜನಿಕರು ತೊಂದರೆ ಅನುಭವಿಸುತ್ತಿದ್ದು, ಇವುಗಳ ಬಗ್ಗೆ ತನಿಖೆ ಕೈಗೊಂಡು, ಇಂತಹ ಚಟುವಟಿಕೆಗಳನ್ನು ರದ್ದು ಪಡಿಸುವಂತೆ ಕೋರಿ ವಿಧಾನ ಪರಿಷತ್ ಸದಸ್ಯರಾದ ಅರುಣ್ ಡಿ.ಎಸ್ ಸರ್ಕಾರದ ಗಮನ ಸೆಳೆದಿದ್ದು ಸರಕಾರ ಈ ಬಗ್ಗೆ ಕ್ರಮ ತೆಗೆದುಕೊಳ್ಳುವುದಾಗಿ ಘೋಷಣೆ ಮಾಡಿದೆ.
ಗೃಹ ಸಚಿವರ ಪರವಾಗಿ ಉತ್ತರಿಸಿದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್, ಆನ್ ಲೈನ್ ಗೇಮ್ ಗಳಾದ ಡ್ರೀಮ್ 11. ಮೈ ಸರ್ಕಲ್ ಮುಂತಾದ ಆ್ಯಪ್ ಗಳಿಂದ ಸಾರ್ವಜನಿಕರು ಅದರಲ್ಲೂ ವಿಶೇಷವಾಗಿ ಯುವ ಸಮುದಾಯದವರು ಆನ್ ಲೈನ್ ಗೇಮ್ ಆಡುವ ಹವ್ಯಾಸಿಗಳಾಗಿದ್ದು, ಇವರು ತಮ್ಮ ಉದ್ಯೋಗದ ಬಗ್ಗೆ ಹೆಚ್ಚು ಆಸಕ್ತಿಯನ್ನು ವಹಿಸದೆ ದಕ್ಷತೆಯಿಂದ ಕಾರ್ಯ ನಿರ್ವಹಿಸದೇ, ಜೀವನವನ್ನು ಹಾಳು ಮಾಡಿಕೊಳ್ಳುತ್ತಿದ್ದಾರೆ. ಆ ಮೂಲಕ ಆರ್ಥಿಕ ನಷ್ಟ ಹೊಂದಿ ಮಾನಸಿಕ ತೊಂದರೆಗೊಳಗಾಗುತ್ತಿರುತ್ತಾರೆ, ಜೊತೆಗೆ , ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯರು ಅನ್ ಲೈನ್ ಗೇಮ್ ಆಡುವ ಹವ್ಯಾಸಿಗಳಾಗಿದ್ದು ತಮ್ಮ ವಿದ್ಯಾರ್ಥಿ ಜೀವನವನ್ನು ಹಾಳು ಮಾಡಿಕೊಳ್ಳುತ್ತಿದ್ದಾರೆ .
ಹಾಗಾಗಿ ಸರ್ಕಾರ ಸೋಷಿಯಲ್ ಮಿಡಿಯಾ, ಮಾಧ್ಯಮಗಳು ಮತ್ತು ಪೊಲೀಸ್ ಇಲಾಖೆಯ ಮೂಲಕ ಸೈಬರ್ ಜಾಗೃತಿ ಮೂಡಿಸುವ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಜೊತೆಗೆ ಎಲ್ಲಾ ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿ ‘ಸೈಬರ್ ಕ್ರೈಂ ಜಾಗೃತಿ ದಿವಸ’ ಆಚರಣೆ ಮಾಡುತ್ತಿದ್ದು, ಈ ಕಾರ್ಯಕ್ರಮದಲ್ಲಿ ಸಾರ್ವಜನಿಕರಿಗೆ ಸೈಬರ್ ಅಪರಾಧ ತಡೆಗಟ್ಟುವ ಕುರಿತು. ಜಾಗೃತಿ ಕಾರ್ಯಾಗಾರಗಳನ್ನು ಏರ್ಪಡಿಸಿ ವಂಚನೆಗೆ ಒಳಗಾದಂತೆ ಸಲಹೆ ಸೂಚನೆಗಳನ್ನು ನೀಡಲಾಗುತ್ತಿದೆ.ಸರ್ಕಾರದಿಂದ ನ್ಯಾಷನಲ್ ಸೈಬರ್ ಕ್ರೈಂ ರಿಪೋರ್ಟಿಂಗ್ ಪೋರ್ಟಲ್ ಪ್ರಾರಂಭಿಸಿದ್ದು, ಸಾರ್ವಜನಿಕರು ತಮಗೆ ವಂಚನೆಯಾದ ಬಗ್ಗೆ ಈ ಪೋರ್ಟಲ್ ಮುಖಾಂತರ ದೂರು ಸಲ್ಲಿಸಬಹುದಾಗಿದೆ. ಸರ್ಕಾರವು 1930 ಸಹಾಯವಾಣಿ ಸಂಖ್ಯೆಯನ್ನು ಪ್ರಾರಂಭಿಸಿದ್ದು, ಸಾರ್ವಜನಿಕರು 24*7 ಹಣ ವಂಚನೆಯಾದ ಬಗ್ಗೆ ತುರ್ತಾಗಿ ಮಾಹಿತಿಯನ್ನು ಒದಗಿಸಬಹುದಾಗಿದೆ.
ಆನ್ಲೈನ್ ಸಾಲದ ಆಪ್ ಮೇಲೆ ನಿಗಾ!
ಆನ್ ಲೈನ್ ಮೂಲಕ ಸಾಲ ನೀಡಿ ವಂಚನೆ ಮಾಡುವ ಅ್ಯಪ್ ಗಳ ಮೇಲೆ ನಿಗಾ ವಹಿಸಲು ಜಿಲ್ಲಾ ಮಟ್ಟದಲ್ಲಿ ಸಿಐಎನ್ ಪಿಎಸ್ ತೆರೆದಿದ್ದು ಇದಕ್ಕೆ ಇನ್ಸ್ಪೆಕ್ಟರ್ ದರ್ಜೆ ಅಧಿಕಾರಿಯನ್ನು ನೇಮಿಸಿದೆ
ಸಾರ್ವಜನಿಕರಿಗೆ ಕಿರುಕುಳ ನೀಡುತ್ತಿರುವ 42 ಮೊಬೈಲ್ ಅಪ್ಲಿಕೇಶನ್ಗಳನ್ನು ಗೂಗಲ್ ಪ್ಲೇ ಸ್ಟೋರ್ನಿಂದ ರದ್ದುಪಡಿಸಲಾಗಿದೆ ಎಂದು ರಾಜ್ಯ ಸರಕಾರ ಹೇಳಿದೆ. ವಿಧಾನಪರಿಷತ್ತಿನಲ್ಲಿ ಸಾಲದ ಆ್ಯಪ್ ಗಳ ಕುರಿತು ಮಾತನಾಡಿದ ಬಿಜೆಪಿ ಎಂಎಲ್ಸಿ ಡಿ. ಎಸ್. ಅರುಣ್ ಅವರು, ಆನ್ಲೈನ್ ಗೇಮಿಂಗ್ ಮತ್ತು ಆನ್ಲೈನ್ ಹಣ ಸಾಲ ನೀಡುವ ಅಪ್ಲಿಕೇಶನ್ಗಳು ಜನರಿಗೆ ಕಿರುಕುಳ ನೀಡುತ್ತಿವೆ. ವಿಶೇಷವಾಗಿ ಗೇಮಿಂಗ್ ಅಪ್ಲಿಕೇಶನ್ಗಳು ಯುವಕರ ಶಿಕ್ಷಣ ಮತ್ತು ಜೀವನವನ್ನು ಹಾಳು ಮಾಡುತ್ತಿವೆ ಎಂದು ಹೇಳಿದರು.
ಅಲ್ಲದೆ, ಈ ಗೇಮಿಂಗ್ ಆ್ಯಪ್ ಗಳಿಗೆ ಸೆಲೆಬ್ರಿಟಿಗಳು ಪ್ರಚಾರ ಮಾಡುತ್ತಿರುವುದು ಕಳವಳ ವಿಚಾರವಾಗಿದೆ, ಇದು ಯುವಜನರನ್ನು ಆನ್ಲೈನ್ ಜೂಜಿನಲ್ಲಿ ತೊಡಗಿಸಿಕೊಳ್ಳಲು ಪ್ರೋತ್ಸಾಹ ನೀಡಿದಂತಾಗುತ್ತದೆ ಎಂದು ತಿಳಿಸಿದರು. ಈ ವೇಳೆ ಗೃಹ ಸಚಿವರ ಪರವಾಗಿ ಉತ್ತರಿಸಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು, ಇಂತಹ ಆ್ಯಪ್ಗಳ ಹಾವಳಿಯನ್ನು ತಡೆಯಲು ಸರಕಾರ ಹಲವಾರು ಕ್ರಮಗಳನ್ನು ತೆಗೆದುಕೊಂಡಿದೆ. ಈಗಾಗಲೇ ಗೂಗಲ್ ಪ್ಲೇ ಸ್ಟೋರ್ ನಿಂದ 42 ಅಪ್ಲಿಕೇಶನ್ ಗಳನ್ನು ತೆಗೆದುಹಾಕಲಾಗಿದೆ ಎಂದು ಹೇಳಿದ್ದಾರೆ
ಇದನ್ನೂ ಓದಿ : ತೀರ್ಥಹಳ್ಳಿಯಲ್ಲಿ ಕುಡಿದು ಲಾಂಗ್ ಬೀಸಿದರು!
HOW TO APPLY : NEET-UG COUNSELLING 2023