Categories
ಬೆಂಗಳೂರು ರಾಜಕೀಯ ರಾಜ್ಯ

ಮುಖ್ಯಮಂತ್ರಿ ಚಂದ್ರುಗೆ ಆಮ್ ಆದ್ಮಿ ಚುಕ್ಕಾಣಿ!

ಮುಖ್ಯಮಂತ್ರಿ ಚಂದ್ರುಗೆ ಆಮ್ ಆದ್ಮಿ ಚುಕ್ಕಾಣಿ!
– ರಾಜ್ಯ ಅಧ್ಯಕ್ಷರಾಗಿ ಮುಖ್ಯಮಂತ್ರಿ ಚಂದ್ರು ನೇಮಕ
– ದೆಹಲಿಯಿಂದ ಆದೇಶ: ರಾಷ್ಟ್ರ ಸಂಘಟನೆಗೆ ರೆಡ್ಡಿ

NAMMUR EXPRESS NEWS
ಬೆಂಗಳೂರು: ರಾಜ್ಯದ ಹೆಸರಾಂತ ರಂಗಭೂಮಿ, ಚಲನಚಿತ್ರ ಕಲಾವಿದ, ಮಾಜಿ ಶಾಸಕರು ಹಾಗೂ ಹಿರಿಯ ರಾಜಕಾರಣಿಗಳಾದ ಮುಖ್ಯಮಂತ್ರಿ ಚಂದ್ರು ಅವರು ಕರ್ನಾಟಕದ ಆಮ್ ಆದ್ಮಿ ಪಕ್ಷದ ರಾಜ್ಯ ಘಟಕದ ರಾಜ್ಯಾಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ಈ ಮೂಲಕ ಮುಖ್ಯಮಂತ್ರಿ ಚಂದ್ರು ಅವರಿಗೆ ದೊಡ್ಡ ಹೊಣೆಗಾರಿಕೆ ಸಿಕ್ಕಿದೆ.
ಪಕ್ಷದ ಸಂಘಟನೆಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಂದೀಪ್ ಪಾಠಕ್ ದೆಹಲಿಯಲ್ಲಿ ಘೋಷಣೆ ಮಾಡಿದ್ದಾರೆ. ಇವರೊಂದಿಗೆ ರಾಜ್ಯ ಸಂಘಟನಾ ಕಾರ್ಯದರ್ಶಿಗಳನ್ನಾಗಿ ಬಿ.ಟಿ. ನಾಗಣ್ಣ ಹಾಗೂ ಅರ್ಜುನ್ ಪರಪ್ಪ ಹಲಗಿಗೌಡರ್ ರವರುಗಳನ್ನು ನೇಮಿಸಲಾಗಿದೆ.

ಕಳೆದ ಅವಧಿಯಲ್ಲಿ ಚಂದ್ರು ಆಮ್ ಆದ್ಮಿ ಪಕ್ಷದ ಪ್ರಚಾರ ಸಮಿತಿ ಅಧ್ಯಕ್ಷರಾಗಿ ಆಯ್ಕೆ ಆಗಿದ್ದರು. ಚುನಾವಣೆಗಾಗಿ ಪ್ರತಿ ರಾಜ್ಯ ಸುತ್ತಿದ್ದರು. ಪಕ್ಷದ ಈ ಹಿಂದಿನ ರಾಜ್ಯಾಧ್ಯಕ್ಷರಾಗಿದ್ದ ಪೃಥ್ವಿ ರೆಡ್ಡಿ ರವರನ್ನು ರಾಷ್ಟ್ರೀಯ ಜಂಟಿ ಕಾರ್ಯದರ್ಶಿಗಳನ್ನಾಗಿ ನೇಮಿಸಲಾಗಿದೆ. 2023ರ ಚುನಾವಣೆಯಲ್ಲಿ ಬಹುತೇಕ ಎಲ್ಲಾ ಕ್ಷೇತ್ರದಲ್ಲಿ ಸ್ಪರ್ಧೆ ಮಾಡಿದ್ದರೂ ಗೆಲುವು ಸಿಕ್ಕಿರಲಿಲ್ಲ.

ಇದನ್ನೂ ಓದಿ : ಅಡಿಕೆ ದರ ಎಷ್ಟಿದೆ..? ಪ್ರಮುಖ ಮಾರುಕಟ್ಟೆಯಲ್ಲಿ ಏನಿದೆ ದರ?

HOW TO APPLY : NEET-UG COUNSELLING 2023

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.