ಮಂಗಳೂರಿನಲ್ಲಿ ಕಾಂಗ್ರೆಸ್ ಸಮಾವೇಶ ಮುಂದೂಡಿಕೆ
– ಪ್ರಕಟಣೆಯ ಮೂಲಕ ಮಾಹಿತಿ!
ಬಿಜೆಪಿ ವಿವಿಧ ಮೋರ್ಚಾಗಳಿಗೆ ಆಯ್ಕೆ ಪ್ರಕ್ರಿಯೆ
– ಯುವಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಹರೀಶ್ ಪೂಂಜಾ ನೇಮಕ!
NAMMUR EXPRESS NEWS
ಬೆಂಗಳೂರು: ಮಂಗಳೂರಿನಲ್ಲಿ ಇದೇ ಜನವರಿ 21ರಂದು ನಿಗಧಿ ಮಾಡಲಾಗಿದ್ದ ರಾಜ್ಯ ಮಟ್ಟದ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶವನ್ನು ಮುಂದೂಡಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಪ್ರಕಟಣೆ ಮೂಲಕ ತಿಳಿಸಿದ್ದಾರೆ. ಜ.15ರಂದು ರಾತ್ರಿ ಬೆಂಗಳೂರಿನಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿ ಮಹತ್ವದ ಮಾತುಕತೆ ನಡೆಸಿದ ಬಳಿಕ ಡಿಕೆ ಶಿವಕುಮಾರ್ ಅವರು ಮಂಗಳೂರಿನಲ್ಲಿ ಜನವರಿ 21ರಂದು ನಿಗದಿ ಮಾಡಲಾಗಿದ್ದ ರಾಜ್ಯ ಮಟ್ಟದ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶವನ್ನು ಮುಂದೂಡಿ ಪ್ರಕಟಣೆ ಹೊರಡಿಸಿದ್ದಾರೆ. ದಿನಾಂಕವನ್ನು ಶೀಘ್ರದಲ್ಲೇ ತಿಳಿಸುವುದಾಗಿ ಡಿಕೆ ಶಿವಕುಮಾರ್ ಮಾಹಿತಿ ನೀಡಿದ್ದಾರೆ. ಬಿಜೆಪಿ ವಿವಿಧ ಮೋರ್ಚಾಗಳಿಗೆ ಆಯ್ಕೆ ಪ್ರಕ್ರಿಯೆ ಬಿಜೆಪಿ ಯುವ ಮೋರ್ಚಾದ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಹರೀಶ್ ಪೂಂಜಾ ನೇಮಕ
ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿ ಕರ್ನಾಟಕ ರಾಜ್ಯ ವಿವಿಧ ಮೋರ್ಚಾಗಳಿಗೆ ಪ್ರಧಾನ ಕಾರ್ಯದರ್ಶಿಗಳನ್ನು ಆಯ್ಕೆ ಮಾಡಲಾಗಿದೆ. ಯುವ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕ ಹರೀಶ್ ಪೂಂಜ ಅವರನ್ನು ನೇಮಕ ಮಾಡಲಾಗಿದೆ. ಈ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದ್ದಾರೆ.