Categories
ಬೆಂಗಳೂರು

ಗೃಹಲಕ್ಷ್ಮಿ, ಗೃಹಜ್ಯೋತಿ ಬಳಿಕ ಇದೀಗ ಗೃಹ ಆರೋಗ್ಯ!

ಗೃಹಲಕ್ಷ್ಮಿ, ಗೃಹಜ್ಯೋತಿ ಬಳಿಕ ಇದೀಗ ಗೃಹ ಆರೋಗ್ಯ!
– ಸಿದ್ದರಾಮಯ್ಯ ಸರ್ಕಾರದಿಂದ ಜನರಿಗೆ ಮತ್ತೊಂದು ಯೋಜನೆ
– ಮನೆ ಮನೆಗೆ ಬರಲಿದೆ ಕ್ಲಿನಿಕ್, ಉಚಿತ ಔಷಧಿ

NAMMUR EXPRESS NEWS
ಬೆಂಗಳೂರು: ಗೃಹ ಲಕ್ಷ್ಮಿ, ಗೃಹ ಜ್ಯೋತಿ ಮಧ್ಯೆಯೇ ಈಗ ಮತ್ತೊಂದು ಗ್ಯಾರಂಟಿ ಮಾದರಿಯಲ್ಲೇ ಯೋಜನೆ ಜಾರಿ ಮಾಡಲುಸರ್ಕಾರ ಮುಂದಾಗಿದೆ ಜನರಿಗೆ ಆರೋಗ್ಯ ಭಾಗ್ಯ ನೀಡಲು ಸಿದ್ದರಾಮಯ್ಯ ಸರ್ಕಾರ ಮುಂದಾಗಿದೆ. ಇನ್ಮುಂದೆ ಮನೆ ಮನೆಗೆ ಕ್ಲಿನಿಕ್ ಬರಲಿದ್ದು ಚಿಕಿತ್ಸೆ ಜೊತೆ ಉಚಿತ ಔಷಧಿ ಕೂಡ ನಿಮ್ಮ ಮನೆ ಬಾಗಿಲಿಗೆ ಬರಲಿದೆ. ಬಿಪಿ, ಶುಗರ್, ಕ್ಯಾನ್ಸರ್ ಅಂದ್ರೆ ಕಾಮನ್ ಅಂತ ನಿರ್ಲಕ್ಷ್ಯ ಮಾಡುವವರ ಸಂಖ್ಯೆ ಹೆಚ್ಚಾಗಿದೆ. ಈ ಕಾರಣಕ್ಕಾಗಿ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಗೃಹ ಆರೋಗ್ಯ ಯೋಜನೆ ಜಾರಿ ತರಲು ಆರೋಗ್ಯ ಇಲಾಖೆ ಚಿಂತನೆ ನಡೆಸಿದೆ. ಈ ಸಂಬಂಧ ಸರ್ಕಾರಕ್ಕೆ ಪ್ರಸ್ತಾವನೆ ಕೂಡ ಸಲ್ಲಿಕೆ ಮಾಡಲಾಗಿದ್ದು, ಸಚಿವ ಸಂಪುಟದಲ್ಲಿ ಒಪ್ಪಿಗೆ ಪಡೆದ ಬಳಿಕ ಗೃಹ ಆರೋಗ್ಯ ಯೋಜನೆ ಜಾರಿಯಾಗಲಿದೆ.

ಏನಿದು ಯೋಜನೆ?

ಮನೆ ಬಾಗಿಲಿಗೆ ಉಚಿತ ಔಷಧಿ ಹಾಗೂ ಚಿಕಿತ್ಸೆ ನೀಡಲು ಸರ್ಕಾರ ಮುಂದಾಗಿದೆ. ಕಿಡ್ನಿ, ಕ್ಯಾನ್ಸರ್, ಬಿಪಿ, ಮಧುಮೇಹ, ಇಸಿಜಿ ವ್ಯವಸ್ಥೆಯನ್ನು ಮನೆ ಬಾಗಿಲಿಗೆ ತಲುಪಿಸುವ ಯೋಜನೆ ಇದಾಗಿದೆ.ಬಡ ಜನರ ಪಾಲಿಗೆ ಮಹತ್ವದ ಭಾಗ್ಯ ನೀಡಲು ಆರೋಗ್ಯ ಇಲಾಖೆ ಮುಂದಾಗಿದೆ. ರಾಜ್ಯದ ಪ್ರತಿಯೊಬ್ಬರ ಮನೆ ಬಾಗಿಲಿಗೆ ಆರೋಗ್ಯ ಸೇವೆ ನೀಡಲು ಗೃಹ ಆರೋಗ್ಯ ಯೋಜನೆ ಜಾರಿಗೆ ಆರೋಗ್ಯ ಇಲಾಖೆ ಮುಂದಾಗಿದೆ. ಹೃದಯ, ಕಿಡ್ನಿ, ಕ್ಯಾನ್ಸರ್, ಬಿಪಿ, ಮಧುಮೇಹ, ಇಸಿಜಿ ಸೇರಿದಂತೆ ಎಲ್ಲಾ ರೀತಿಯ ಆರೋಗ್ಯ ತಪಾಸಣೆ ನಡೆಸಿ ಆಯ್ದ ಸಮಸ್ಯೆಗಳಿಗೆ ಅಗತ್ಯವಿರುವಷ್ಟು ಔಷಧಗಳನ್ನು ಸ್ಥಳದಲ್ಲೇ ಉಚಿತವಾಗಿ ನೀಡಲು ಮುಂದಾಗಿದೆ. ಯಾವುದೇ ದುಡ್ಡು ಇಲ್ಲದೇ ಈ ಭಾಗ್ಯ ನೀಡಲು ಮುಂದಾಗಿದೆ. ಇದಕ್ಕಾಗಿ ಮೊಬೈಲ್ ಯೂನಿಟ್ ಪ್ರತ್ಯೇಕ್ ಸಿಬ್ಬಂದಿ ನೇಮಕಾತಿ ವೈದ್ಯರ ನೇಮಕಾತಿಗೆ ಇಲಾಖೆ ಮುಂದಾಗಿದೆ.

ಆರಂಭದಲ್ಲಿಯೇ ಖಾಯಿಲೆ ಪತ್ತೆ ಹಚ್ಚಿ ಚಿಕಿತ್ಸೆ ನೀಡುವ ಮೂಲಕ ಬಡ ಜನರ ಸಾವಿನ ಪ್ರಮಾಣ ಕಡಿಮೆ ಮಾಡಿ ಉತ್ತಮ ಆರೋಗ್ಯದ ಉದ್ದೇಶದಿಂದ ಈ ಯೋಜನೆಗೆ ಜಾರಿಗೆ ಇಲಾಖೆ ಮುಂದಾಗಿದೆ. ಈ ಗೃಹ ಆರೋಗ್ಯ ಯೋಜನೆ ಸೇವೆಯನ್ನು ಪ್ರಾಯೋಗಿಕವಾಗಿ 8 ಜಿಲ್ಲೆಗಳಲ್ಲಿ ಆರಂಭ ಮಾಡಲು ಚಿಂತನೆ ನಡೆಸಲಾಗಿದೆ.

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.