ಬಿಸಿಲು ಹೆಚ್ಚಳ ಬೆನ್ನಲ್ಲೇ ರಾಜ್ಯದಲ್ಲಿ ಸಾಲುಸಾಲು ರೋಗ
– ವಾಂತಿ-ಭೇದಿ, ಚಿಕನ್ಫಾಕ್ಸ್, ಸನ್ಸ್ಟೋಕ್, ಮೂಗಿನಲ್ಲಿ ರಕ್ತಸ್ರಾವ, ಟೈಫಾಯ್ಡ್ ಏರಿಕೆ
– ಸ್ವಚ್ಛ ನೀರನ್ನು ಮಾತ್ರವೇ ಕುಡಿಯಲು ವೈದ್ಯರಿಂದ ಸಲಹೆ
NAMMUR EXPRESS NEWS
ಬೆಂಗಳೂರು: ರಾಜ್ಯದಲ್ಲಿ ಗರಿಷ್ಠ ಉಷ್ಣಾಂಶ 40 ಡಿಗ್ರಿಯ ಆಸುಪಾಸಿನಲ್ಲೇ ಮುಂದುವರೆದಿದೆ. ಅತಿಯಾದ ಒಣಹವೆಯಿಂದ ಸನ್ ಸ್ಪೋಕ್, ಮೈಗ್ರೇನ್, ಮೂಗಿನಲ್ಲಿ ರಕ್ತಸ್ರಾವದಂತಹ ಸಮಸ್ಯೆಗಳಲ್ಲದೆ ವಾತಾವರಣ ಶುಷ್ಕತೆಯಿಂದ ಕೂಡಿರುವುದರಿಂದ ಬ್ಯಾಕ್ಲೀರಿಯಾ, ವೈರಸ್ ಗಳು ತೀವ್ರವಾಗಿ ಹರಡುವ ಮೂಲಕ ಹಲವರು ಅನಾರೋಗ್ಯಕ್ಕೆ ತುತ್ತಾಗುತ್ತಿದ್ದಾರೆ. ರಾಜ್ಯಾದ್ಯಂತ ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ ಸನ್ ಸ್ಟೋಕ್, ಮೈಗ್ರೇನ್, ಚರ್ಮದ ಸಮಸ್ಯೆಗಳ ಜತೆಗೆ ಟೈಫಾಯ್ಡ್ ಸೇರಿದಂತೆ ವಿವಿಧ ಜ್ವರದ ಸಮಸ್ಯೆಗಳಿಂದ ಆಸ್ಪತ್ರೆಗಳಿಗೆ ಭೇಟಿ ನೀಡುವವರ ಸಂಖ್ಯೆ ಹೆಚ್ಚಾಗಿದೆ. ಮನುಷ್ಯನ ದೇಹದ ಸಾಮಾನ್ಯ ಉಷ್ಣತೆಯು 36.4 ಡಿಗ್ರಿಯಿಂದ 37.2 ಡಿಗ್ರಿ, ಸೆಲ್ಸಿಯಸ್ (97.5 20 98.9 2) . ಒಳಾಂಗಣ ಹಾಗೂ ಹೊರಾಂಗಣ ಪ್ರದೇಶದಲ್ಲಿ ಇದಕ್ಕಿಂತ ಹೆಚ್ಚಿನ ಉಷ್ಣತೆಯಿದ್ದರೆ ಅನಾರೋಗ್ಯ ಸಮಸ್ಯೆ ಉಂಟಾಗುತ್ತದೆ.
ಇದೀಗ, ರಾಜ್ಯಾದ್ಯಂತ ತೀವ್ರ ಬಿಸಿಲಿನಿಂದಾಗಿ ಸಾಂಕ್ರಾಮಿಕ ಕಾಯಿಲೆಗಳು ಹಾಗೂ ಬಿಸಿಲಿನಿಂದ ಉಂಟಾಗುವ ಕಾಯಿಲೆಗಳ ಪ್ರಮಾಣ ತೀವ್ರಗೊಳ್ಳುತ್ತಿದೆ. ಕರಳುಬೇನೆ, ನಿರ್ಜಲೀಕರಣ, ಮೂಗಿನಲ್ಲಿ ರಕ್ತಸ್ರಾವ, ವಾಂತಿ-ಭೇದಿ ಸಾಮಾನ್ಯವಾಗಿ ಕಾಣಿಸಿಕೊಳ್ಳುತ್ತವೆ. ಇವುಗಳ ಜತೆಗೆ ಕಣ್ಣಿನ ತೊಂದರೆ, ಮಕ್ಕಳನ್ನು ಬಾಧಿಸುವ ಚಿಕನ್ ಫಾಕ್ಸ್, ಟೈಫಾಯ್ಡ್ ಜ್ವರ, ಬಿಸಿಲಿನಿಂದ ತಲೆ ಸುತ್ತು, ಸನ್ ಸ್ಟೋಕ್, ಮೈಗ್ರೇನ್, ಅತಿಯಾದ ಸೂರ್ಯ ಕಿರಣಗಳಿಂದ ಚರ್ಮದ ಸಮಸ್ಯೆಗಳು ಹೆಚ್ಚಾಗಿ ಕಾಡುತ್ತಿವೆ. ವೈರಾಣು ಜ್ವರ ಹಾಗೂ ಟೈಫಾಯ್ಡ್ ಜ್ವರ ದಿಂದಾಗಿ ಮೈಕೈ ನೋವು, ಮೂಗಿನಲ್ಲಿ ನೀರು ಸೋರುವಿಕೆಯಂತಹ ಸಮಸ್ಯೆಯಿಂದ ಆಸ್ಪತ್ರೆಗೆ ಬರುತ್ತಿರುವವರ ಸಂಖ್ಯೆ ಶೇ.20ರಿಂದ 30ರಷ್ಟು ಹೆಚ್ಚಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.
ಹೆಚ್ಚುತ್ತಿರುವ ಜ್ವರದ ಪ್ರಕರಣ: ಬೇಸಿಗೆ ಕಾಲದಲ್ಲಿ ಸಕ್ರಿಯವಾಗುವ ಸಾಲೊನಲ್ಲಾ ಟೈಸಿ ಆ್ಯಂಡ್ ಪ್ಯಾರಾಟೈಸಿ ಬ್ಯಾಕ್ಟಿರಿಯಾದಿಂದ ಟೈಫಾಯ್ಡ್ ಬರುತ್ತದೆ. ಉಳಿದಂತೆ ವ್ಯಾರಿಸೆಲ್ಲಾ ಝಾಸ್ಟರ್ ವೈರಸ್ ನಿಂದ ಚಿಕನ್ಫಾಕ್ಸ್ (ಅಮ್ಮ), ಹೆಪಟೈಟಿಸ್ ಎ ಎಂಬ ವೈರಸ್ನಿಂದ ಜಾಂಡೀಸ್ ಕಾಯಿಲೆ ಬರುತ್ತದೆ.
ಉಷ್ಣದಿಂದ ಪಾರಾಗಲು ಹೀಗೆ ಮಾಡಿ
1 ಬೆವರಿನಿಂದ ದೇಹದಲ್ಲಿ ತೇವಾಂಶ ಕಡಿಮೆಯಾಗಿ ಅನಾರೋಗ್ಯ ಉಂಟಾಗುತ್ತದೆ. ಹೀಗಾಗಿ ನೀರಿನ ಜತೆಗೆ, ದೇಹಕ್ಕೆ ಶಕ್ತಿ, ಚೈತನ್ಯ ತುಂಬುವಂತಹ ಹಣ್ಣಿನ ರಸ, ಓಆರ್ಎಸ್ ಕುಡಿಯಬೇಕು.
2 ಬೇಸಿಗೆಗೆ ಕಾಟನ್ ಉಡುಪು ಧರಿಸುವುದು, ಬಿಸಿಲಿಗೆ ಹೋಗುವಾಗ ತಂಪು ಕನ್ನಡಕ (ಕೂಲಿಂಗ್ ಗ್ಲಾಸ್), ಛತ್ರಿ ಬಳಕೆ, ಅಗತ್ಯ ಪ್ರಮಾಣದ ನೀರು ಕೊಂಡೊಯ್ಯುವಂತಹ ಸಾಮಾನ್ಯ ಕ್ರಮ ಪಾಲಿಸಬೇಕು.
3 ಅಗತ್ಯವಿದ್ದರೆ ಮಾತ್ರ ಮನೆಗಳಿಂದ ಆಚೆ ತೆರಳಬೇಕು. ಬಿಸಿಲು ಏರುವುದರೊ ಳಗೆ ಕೆಲಸ ಮಾಡಿಕೊಂಡು ಮನೆ ಸೇರಿಕೊಳ್ಳಬೇಕು. ಮನೆಯಲ್ಲಿದ್ದರೂ, ನೆರಳು ಇರುವ ಕಡೆ, ಚೆನ್ನಾಗಿ ಗಾಳಿ ಬೀಸುವ ಜಾಗದಲ್ಲಿ ಇರಬೇಕು.
4 ಕಂದಮ್ಮಗಳನ್ನು, ಮಕ್ಕಳನ್ನು ಜೋಪಾನ ಮಾಡಬೇಕು. ಗರ್ಭಿಣಿ ಸ್ತ್ರೀಯರು, ಹೊರಗಡೆ ಹೆಚ್ಚು ಕೆಲಸ ಮಾಡುವಂಥವರು, ಮಾನಸಿಕವಾಗಿ ಸಮಸ್ಯೆಗಳು ಇರುವಂಥವರು, ಹೃದಯದ ಸಮಸ್ಯೆಗಳು ಇರುವಂಥವರು, ರಕ್ತದೊತ್ತಡ ಇರುವಂಥವರು ಆದಷ್ಟೂ ಜಾಗ್ರತೆಯಾಗಿ ಇರಬೇಕು.