ಮತಪಟ್ಟಿಗೆ ಹೆಸರು ಸೇರಿಸಲು ಅವಕಾಶ!
– ಆ.20ರಿಂದ ಅ.18ರ ವರೆಗೆ ಪಟ್ಟಿ ಪರಿಷ್ಕರಣೆ
– ನೀವೂ ಸೇರಿ… ನಿಮ್ಮವರನ್ನು ಸೇರಿಸಿ…!
NAMMUR EXPRESS NEWS
ಬೆಂಗಳೂರು: ಕೇಂದ್ರ ಚುನಾವಣಾ ಆಯೋಗವು ಮತದಾರರ ಪಟ್ಟಿ ಪರಿಷ್ಕರಣೆ ವೇಳಾಪಟ್ಟಿಯನ್ನು ಪ್ರಕಟಿಸಿದ್ದು, ಇದೇ ತಿಂಗಳು 20ರಿಂದ ಮತಪಟ್ಟಿ ಪರಿಷ್ಕರಣೆ ನಡೆಯಲಿದೆ.
ಮತಪಟ್ಟಿಗೆ ಪರಿಷ್ಕರಣೆ ವೇಳೆ ರಾಜ್ಯದ ಎಲ್ಲಾ ಮತಗಟ್ಟೆ ಮಟ್ಟದ ಅಧಿಕಾರಿಗಳು ಮನೆಗಳಿಗೆ ಭೇಟಿ ನೀಡಲಿದ್ದಾರೆ. ಈ ಸಮಯದಲ್ಲಿ ಸಾರ್ವಜನಿಕರು ಯಾವುದೇ ತಿದ್ದುಪಡಿಗಳು, ಹೆಸರು ನೋಂದಣಿ, ಮೃತ ಮತ್ತು ಸ್ಥಳಾಂತರಗೊಂಡ ಮತದಾರರ
ಹೆಸರುಗಳ ತೆಗೆದು ಹಾಕುವಿಕೆ, 18 ವರ್ಷ ತುಂಬುವ ಯುವ ಮತದಾರರ ಹೆಸರು ಸೇರ್ಪಡೆ ಕುರಿತು ಅರ್ಜಿಗಳನ್ನು ಸಲ್ಲಿಸಬಹುಹದು ಎಂದು ಆಯೋಗವು ತಿಳಿಸಿದೆ.
ಆ.20ರಿಂದ ಅ.18ರವರೆಗೆ ಅಧಿಕಾರಿಗಳು ಪರಿಶೀಲನೆ ನಡೆಸಲಿದ್ದಾರೆ. ಅ.19ರಿಂದ ಅ.28ರ ವರೆಗೆ ಸಮಗ್ರ ಕರಡು ಮತದಾರರ ಪಟ್ಟಿಯನ್ನು ಸಿದ್ದ ಪಡಿಸಲಾಗುವುದು. ಅ.29ರಂದು ಸಮಗ್ರ ಕರಡು ಮತದಾರರ ಪಟ್ಟಿಯ ಪ್ರಕಟಣೆ ಮಾಡಲಾಗುತ್ತದೆ. ಸಾರ್ವಜನಿಕರು ತಮ್ಮ ಲೋಪದೋಷಗಳ ಕುರಿತಾಗ ಅ.29ರಿಂದ ನ.28ರವರೆಗೆ ಆಕ್ಷೇಪಣೆಗಳನ್ನು ಸಲ್ಲಿಸುವ ಅವಕಾಶ ಇರುತ್ತದೆ ಎಂದು ಹೇಳಿದೆ.
ಆಕ್ಷೇಪಣೆಗಳ ವಿಲೇವಾರಿಯನ್ನು ಡಿ.24ರೊಳಗೆ ಮುಕ್ತಾಯಗೊಳಿಸಲಾಗುವುದು. 2025ರ ಜ.1ರೊಳಗೆ ಮತದಾರ ಪಟ್ಟಿ ಗುಣಮಟ್ಟ ಪರಿಶೀಲಿಸಲಾಗುತ್ತದೆ. ಜ.6ರಂ ದು ಪಟ್ಟಿಗಳ ಅಂತಿಮ ಪ್ರಕಟಿಸಲಾಗುತ್ತದೆ. ಆಕ್ಷೇಪಣೆಯ ಅವಧಿಯಲ್ಲಿ ಮುಖ್ಯ ಚುನಾವಣಾಧಿಕಾರಿಗಳು ನಿಗದಿತ ಶನಿವಾರ ಮತ್ತು ಭಾನುವಾರ ವಿಶೇಷ ಅಭಿಯಾನದ ದಿನಾಂಕಗಳನ್ನು ಶೀಘ್ರದಲ್ಲಿಯೇ ಪ್ರಕಟಿಸಲಾಗುತ್ತದೆ ಎಂದು ತಿಳಿಸಲಾಗಿದೆ