ಶಾಲಾ ಮಕ್ಕಳಿಗೆ ವಾರಕ್ಕೊಂದು ಮೊಟ್ಟೆ!
– ಒಂದರಿಂದ ಎಂಟನೇ ತರಗತಿಯ ಮಕ್ಕಳಿಗೆ ಮೊಟ್ಟೆ
– ಮೊಟ್ಟೆ ತಿನ್ನದವರಿಗೆ ಬಾಳೆಹಣ್ಣು ಅಥವಾ ಚಿಕ್ಕಿ
NAMMUR EXPRESS NEWS
ಬೆಂಗಳೂರು: ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳ ಒಂದರಿಂದ ಎಂಟನೇ ತರಗತಿಯ ಮಕ್ಕಳಿಗೆ ವಾರಕ್ಕೆ ಒಂದು ಬೇಯಿಸಿದ ಮೊಟ್ಟೆ, ಮೊಟ್ಟೆ ತಿನ್ನದವರಿಗೆ ಚಿಕ್ಕಿ ಅಥವಾ ಬಾಳೆಹಣ್ಣು ನೀಡುವಂತೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸುತ್ತೋಲೆ ಹೊರಡಿಸಿದೆ. ಅಪೌಷ್ಟಿಕತೆ ಮತ್ತು ರಕ್ತ ಹೀನತೆ ನಿವಾರಣೆಗಾಗಿ ಕಳೆದ ಸಾಲಿನಲ್ಲಿ ಕಲ್ಯಾಣ ಕರ್ನಾಟಕದ ಎಂಟು ಜಿಲ್ಲೆಯ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟದ ಜತೆ ಮೊಟ್ಟೆ ವಿತರಿಸಲು ಸರ್ಕಾರ ಅನುಮತಿ ನೀಡಿತ್ತು.
ನಂತರ ಎಲ್ಲ ಜಿಲ್ಲೆಗಳಿಗೂ ವಿಸ್ತರಿಸಿತ್ತು. 2023-24ನೇ ಶೈಕ್ಷಣಿಕ ಸಾಲಿಗೆ ಮೊದಲ ಹಂತದಲ್ಲಿ ಜುಲೈ 15ರವರೆಗೆ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ ಮಕ್ಕಳಿಗೆ ಮೊಟ್ಟೆ ವಿತರಣೆಗೆ ಅನುಮತಿ ನೀಡಲಾಗಿದೆ. ಪ್ರತಿ ಮೊಟ್ಟೆಗೆ 6 ರೂ. ನಿಗದಿ ಮಾಡಲಾಗಿದೆ. ಇದರಿಂದ ಮಕ್ಕಳ ಆರೋಗ್ಯದ ಬಗ್ಗೆ ಸರ್ಕಾರ ನಿಗಾ ಇರಿಸಿದೆ.