Categories
ಬೆಂಗಳೂರು

ಅಕ್ಟೋಬರ್‌ನಲ್ಲಿ ಅಂಗನವಾಡಿ ಸುವರ್ಣ ಮಹೋತ್ಸವ ಆಚರಣೆ

ಅಕ್ಟೋಬರ್‌ನಲ್ಲಿ ಅಂಗನವಾಡಿ ಸುವರ್ಣ ಮಹೋತ್ಸವ ಆಚರಣೆ
– ಎಲ್‌ಕೆಜಿ, ಯುಕೆಜಿ ಆರಂಭಿಸಲು ಅಗತ್ಯ ಕ್ರಮಕ್ಕೆ ಸೂಚನೆ
– ಬೆಂಗಳೂರಿನ ಅರಮನೆ ಮೈದಾನದಲ್ಲಿ ಅದ್ದೂರಿಯಾಗಿ ಸುವರ್ಣ ಮಹೋತ್ಸವ

NAMMUR EXPRESS NEWS
ಬೆಂಗಳೂರು : ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ವತಿಯಿಂದ ಎಲ್‌ಕೆಜಿ, ಯುಕೆಜಿ ಆರಂಭಿಸಲು ಅಗತ್ಯ ಕ್ರಮವಹಿಸುವಂತೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳರ್ ಸೂಚನೆ ನೀಡಿದರು. ಮಹಿಳಾ ಮತ್ತು ಮಕ್ಕಳ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಪೂರ್ವ ಪ್ರಾಥಮಿಕ ತರಗತಿಗಳನ್ನು ಆರಂಭಿಸಲು ಉಪ ನಿರ್ದೇಶಕರು, ಸಿಡಿಪಿಒಗಳು ಸೇರಿದಂತೆ ಇಲಾಖೆಯ ಎಲ್ಲಾ ಅಧಿಕಾರಿಗಳು ಮುತುವರ್ಜಿ ವಹಿಸಬೇಕು. ಪೂರ್ವ ಪ್ರಾಥಮಿಕ ತರಗತಿಗಳನ್ನು ಆರಂಭಿಸುವುದು ಇಲಾಖೆ ಪಾಲಿಗೆ ಪ್ರತಿಷ್ಠೆಯ ಪ್ರಶ್ನೆಯಾಗಿದೆ. ಇಲಾಖೆಗೆ ಉಳಿವಿಗೂ ಎಲ್‌ಕೆಜಿ, ಯುಕೆಜಿ ಸಹಕಾರಿಯಾಗಲಿದೆ ಎಂದು ಅಭಿಪ್ರಾಯಪಟ್ಟರು.

ಅಂಗನವಾಡಿ ಕೇಂದ್ರಗಳಲ್ಲಿ ಪೂರ್ವ ಪ್ರಾಥಮಿಕ ತರಗತಿಗಳನ್ನು ಪ್ರಾರಂಭಿಸುವ ಬಗ್ಗೆ, ವಿಭಾಗ ಮಟ್ಟದಲ್ಲಿ ಐಸಿಡಿಎಸ್ ಶಾಖೆಯ ವ್ಯಾಪ್ತಿಗೆ ಬರುವ ಪೋಷಣ್ ಟ್ರ್ಯಾಕರ್ ಅನ್ವಯ ವಿವಿಧ ಸೂಚ್ಯಂಕಗಳ ಪ್ರಗತಿ ಪರಿಶೀಲನೆ, ಐಸಿಡಿಎಸ್ ಯೋಜನೆಯ ವಿವಿಧ ಲೆಕ್ಕಶೀರ್ಷಿಕೆಯಲ್ಲಿ ಬಿಡುಗಡೆಯಾದ ಅನುದಾನ ಮತ್ತು ವೆಚ್ಚದ ವಿವಿರ, ಅಂಗನವಾಡಿ ಕಟ್ಟಡಗಳ ಪ್ರಗತಿ ಪರಿಶೀಲನೆ, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ನೇಮಕಾತಿ ವಿವರ, ಎನ್‌ಪಿಎಸ್ ರೀಕನಿಲೇಷನ್ ಪ್ರಕ್ರಿಯೆ ಬಾಕಿ ವಿವರ ಹಾಗೂ ಆಯುಷ್ಮಾನ್ ಭಾರತ್ ಆರೋಗ್ಯ ಕಾರ್ಡ್ ಕುರಿತು ಸಚಿವರು ಸಭೆಯಲ್ಲಿ ಮಾಹಿತಿ, ಪಡೆದು ಚರ್ಚೆ ನಡೆಸಿದರು. ಸಭೆಯಲ್ಲಿ ಇಲಾಖೆಯ ಕಾರ್ಯದರ್ಶಿ ಡಾ. ಶಾಮ್ಲಾ ಇನ್ಸಾಲ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ನಿರ್ದೇಶಕ ರಾಘವೇಂದ್ರ ಸೇರಿ ಹಲವರಿದ್ದರು.

– 1 ಲಕ್ಷ ಜನರ ಸಮ್ಮುಖದಲ್ಲಿ ಕಾರ್ಯಕ್ರಮ ಆಯೋಜನೆ

ಮುಂಬರುವ ಅಕ್ಟೋಬರ್ ತಿಂಗಳಿಗೆ ಕರ್ನಾಟಕದಲ್ಲಿ ಅಂಗನವಾಡಿ ಆರಂಭಗೊಂಡು 50 ವರ್ಷ ತುಂಬುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರಿನ ಅರಮನೆ ಮೈದಾನದಲ್ಲಿ ಅದ್ದೂರಿಯಾಗಿ ಸುವರ್ಣ ಮಹೋತ್ಸವ ಕಾರ್ಯಕ್ರಮ ಆಯೋಜಿಸಲಾಗುವುದು. ಈ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯನವರೊಂದಿಗೆ ಒಂದು ಸುತ್ತಿನ ಮಾತುಕತೆ ನಡೆಸಲಾಗಿದೆ. ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರನ್ನು ಸಮಾರಂಭಕ್ಕೆ ಆಹ್ವಾನಿಸಲಾಗುವುದು. ಎಲ್ಲಾ ಅಂಗನವಾಡಿ ಕಾರ್ಯಕರ್ತರು, ಸಹಾಯಕಿಯರು ಸೇರಿದಂತೆ ಇಲಾಖೆಯ ಎಲ್ಲಾ ಸಿಬ್ಬಂದಿ ವರ್ಗ ಸೇರಿಕೊಂಡು 1 ಲಕ್ಷ ಜನರ ಸಮ್ಮುಖ ದಲ್ಲಿ ಕಾರ್ಯಕ್ರಮ ಆಯೋಜಿಸುವ ಕನಸಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಳರ್ ಹೇಳಿದರು.

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.