ಅಂಗನವಾಡಿ ಕಾರ್ಯಕರ್ತೆಯರಿಂದ “ಮೊಬೈಲ್ ವಾಪಾಸ್” ಹೋರಾಟ!
– ಸ್ಟೋರೇಜ್ ಇಲ್ಲದ ಮೊಬೈಲ್, ಕೆಲಸ ಮಾತ್ರ ಮಾಡ್ಬೇಕು
– ಜು.10ರಂದು ಪ್ರತಿಭಟನೆಗೆ ಕಾರ್ಯಕರ್ತರು ಸಜ್ಜು!
NAMMUR EXPRESS NEWS
ಬೆಂಗಳೂರು: ‘ಅಂಗನವಾಡಿ ಕಾರ್ಯಕರ್ತೆಯರಿಗೆ ಸರ್ಕಾರ ನೀಡಿರುವ ಮೊಬೈಲ್ಗಳನ್ನು ಜುಲೈ 10ರಂದು ವಾಪಸ್ ಮಾಡುವ ಮೂಲಕ ರಾಜ್ಯದಾದ್ಯಂತ ಪ್ರತಿಭಟನೆ ಮಾಡಲು ಸಿದ್ಧತೆ ನಡೆದಿದೆ.
ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘದ ಅಧ್ಯಕ್ಷೆ ಎಸ್. ವರಲಕ್ಷ್ಮಿ ಮಾತನಾಡಿ, ‘ಸರ್ಕಾರ ನೀಡಿರುವ ಮೊಬೈಲ್ಗಳಲ್ಲಿ ನೆಟ್ವರ್ಕ್, ರಾಮ್, ಸ್ಟೋರೇಜ್ ಸಮಸ್ಯೆ ಇದೆ. ಹೊಸ ಆ್ಯಪ್ಗಳನ್ನು ಡೌನ್ಲೋಡ್ ಮಾಡಿಕೊಳ್ಳಲು ಅವಕಾಶವಿಲ್ಲ’ ಎಂದರು.
ಪೋಷಣ್ ಅಭಿಯಾನ ಯೋಜನೆ ಅಡಿಯಲ್ಲಿ ಪೋಷಣ್ ಆಪ್ ಅಲ್ಲಿ ಪ್ರತಿನಿತ್ಯ ಮಕ್ಕಳ, ಪೋಷಕರ ಹಾಜರಾತಿ, ಆಹಾರ ವಿತರಣೆ, ಶಾಲಾಪೂರ್ವ ಶಿಕ್ಷಣ ಚಟುವಟಿಕೆಗಳನ್ನು ಅಪ್ಲೋಡ್ ಮಾಡುವುದಕ್ಕೆ ಸಮಸ್ಯೆಯಾಗುತ್ತಿದೆ. ಈಗಾಗಲೇ ನಾಲ್ಕು ವರ್ಷಗಳ ಹಿಂದೆ ನೀಡಿರುವ ಮೊಬೈಲ್ಗಳು ಹಾಳಾಗಿವೆ. ಆದ್ದರಿಂದ, ಆರೋಗ್ಯ ಸಮೀಕ್ಷೆ ಕೈಗೊಳ್ಳಲು ಹೊಸ ಮೊಬೈಲ್ಗಳನ್ನು ನೀಡಬೇಕು. ಇಲ್ಲವಾದರೆ, ಕೈಪಿಡಿಯಲ್ಲಿ ದಾಖಲಿಸಲು ಅವಕಾಶ ನೀಡಬೇಕು. ಹಿಂದಿನ ಬಜೆಟ್ನಲ್ಲಿ ಘೋಷಿಸಿರುವ 1 ಸಾವಿರ ಗೌರವಧನವನ್ನು ಕೂಡಲೇ ಪಾವತಿ ಮಾಡಬೇಕು. ರಾಜ್ಯ ಸರ್ಕಾರ ನೂತನ ಮೊಬೈಲ್ಗಳನ್ನು ನೀಡಿದರೆ ಮಾತ್ರ ಆನ್ಲೈನ್ ಆರೋಗ್ಯ ಸಮೀಕ್ಷೆ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.
ಸಂಘದ ಪ್ರಧಾನ ಕಾರ್ಯದರ್ಶಿ ಎಚ್.ಎಸ್. ಸುನಂದ, ಖಜಾಂಚಿ ಕಮಲ ಇದ್ದರು.
ಇದನ್ನೂ ಓದಿ : ನಾಯಿ ವೇದಿಕೆ ಮೇಲೆ ಪ್ರಶಸ್ತಿ ಪಡೆಯಿತು!!
HOW TO APPLY : NEET-UG COUNSELLING 2023