ಮಹಿಳೆಯರಿಗೆ ಮತ್ತೊಂದು ಗುಡ್ ನ್ಯೂಸ್!
– 2 ಲಕ್ಷ ರೂ.ವರೆಗೆ ಸಿಗಲಿದೆ ಬಡ್ಡಿ ರಹಿತ ಸಾಲ ಸೌಲಭ್ಯ
– ಯಾರಿಗೆ ಸಿಗಲಿದೆ ಸ್ತ್ರೀ ಶಕ್ತಿ ಸಾಲ..?
NAMMUR EXPRESS NEWS
ಬೆಂಗಳೂರು: ರಾಜ್ಯ ಸರ್ಕಾರದಿಂದ ರಾಜ್ಯದ ಮಹಿಳೆಯರಿಗೆ ಮತ್ತೊಂದು ಶುಭ ಸುದ್ದಿ ಸಿಕ್ಕಿದೆ. ಹೌದು, ಸ್ತ್ರೀಶಕ್ತಿ ಸಂಘಟನೆಗಳಿಗೆ 2 ಲಕ್ಷ ರೂ. ವರೆಗೆ ಬಡ್ಡಿ ರಹಿತ ಸಾಲ ಸೌಲಭ್ಯ ಸಿಗಲಿದೆ. ಈ ಬಗ್ಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಳಾರ್ ಮಾಹಿತಿ ನೀಡಿದ್ದು, ರಾಜ್ಯದ ಒಟ್ಟು 1 ಲಕ್ಷದ 65 ಸಾವಿರ ಸ್ತ್ರೀ ಶಕ್ತಿ ಗುಂಪುಗಳಿಗೆ ತಲಾ ರೂ. 25,000 ಆವರ್ತ ನಿಧಿ ಸ್ತ್ರೀ ಶಕ್ತಿ ಸಂಘಟನೆಗಳಿಗೆ ರೂ. 2 ಲಕ್ಷದವರೆಗೆ ಬಡ್ಡಿರಹಿತ ಸಾಲ ಸೌಲಭ್ಯ ಸಿಗಲಿದೆ ಪ್ರಸಕ್ತ ಸಾಲಿನ ಬಜೆಟ್ ನಲ್ಲಿ ನಮ್ಮ ಸರ್ಕಾರ ಮಹಿಳಾ ಕಲ್ಯಾಣ ಕಾರ್ಯಕ್ರಮಗಳಿಗಾಗಿ ರೂ. 70,427 ಕೋಟಿ ಹಣವನ್ನು ಮೀಸಲಿಟ್ಟು ಸ್ತ್ರೀ ಸಬಲೀಕರಣದ ನಿಟ್ಟಿನಲ್ಲಿ ನವಯುಗಕ್ಕೆ ನಾಂದಿ ಹಾಡಿದೆ ಅಂತ ಹೇಳಿದ್ದಾರೆ.
ರಾಜ್ಯದ ಮಹಿಳೆಯರ ಆರ್ಥಿಕ ಹಾಗೂ ಸಾಮಾಜಿಕ ಸಬಲೀಕರಣಕ್ಕಾಗಿ “ಸ್ತ್ರೀಶಕ್ತಿ” ಯೋಜನೆಯನ್ನು 2000-01 ನೇ ವರ್ಷದಿಂದ ಜಾರಿಗೊಳಿಸಲಾಗಿದೆ. ರಾಜ್ಯದಲ್ಲಿ 176 ತಾಲ್ಲೂಕುಗಳ ನಗರ ಮತ್ತು ಗ್ರಾಮೀಣ ಪ್ರದೇಶದಲ್ಲಿ ಸ್ತ್ರೀಶಕ್ತಿ ಗುಂಪುಗಳನ್ನು ರಚನೆ ಮಾಡಲಾಗಿದೆ.ಯೋಜನೆಯ ಮೂಲಕ ಮಹಿಳೆಯರ ಅಬಿವೃದ್ಧಿಗಾಗಿ ಹಮ್ಮಿಕೊಂಡಿರುವ ಕಾರ್ಯಕ್ರಮಗಳಿಗೆ ಅನುದಾನವನ್ನು ಮೀಸಲಿಟ್ಟು ಬೃಹತ್ ಪ್ರಮಾಣದಲ್ಲಿ ಮಹಿಳೆಯರನ್ನು ಸಂಘಟಿಸಲು ಪ್ರಯತ್ನಿಸಿರುವುದು ಒಂದು ಕ್ರಾಂತಿಕಾರಿ ಹೆಜ್ಜೆಯಾಗಿದೆ.