Categories
ಬೆಂಗಳೂರು

ರಾಜ್ಯದ ಜನರಿಗೆ ಮತ್ತೊಂದು ಬೆಲೆ ಏರಿಕೆ ಬರೆ !!

ರಾಜ್ಯದ ಜನರಿಗೆ ಮತ್ತೊಂದು ಬೆಲೆ ಏರಿಕೆ ಬರೆ !! 
* ಡೀಸೆಲ್ ದರ 2 ರೂ. ಹೆಚ್ಚಿಸಿದ ರಾಜ್ಯ ಸರ್ಕಾರ
* ಪರಿಷ್ಕೃತ ದರ ಏ.1 ರಿಂದಲೇ ಜಾರಿ

NAMMUR EXPRESS NEWS
ಬೆಂಗಳೂರು: ರಾಜ್ಯದಲ್ಲಿ ಬೆಲೆ ಏರಿಕೆ ಸರಣಿ ಮುಂದಿವರೆದಿದ್ದು, ರಾಜ್ಯ ಸರ್ಕಾರವು ಡೀಸೆಲ್ ಬೆಲೆಯನ್ನು ಪ್ರತಿ ಲೀಟರ್​ಗೆ 2 ರೂ. ಹೆಚ್ಚಿಸಿ ಆದೇಶ ಹೊರಡಿಸಿದೆ.
ಡೀಸೆಲ್ ಬೆಲೆ ಏರಿಸಿ ಸರ್ಕಾರ ರಾಜ್ಯದ ಜನರಿಗೆ ಮತ್ತೊಂದು ಬರೆ ಎಳೆದಿದೆ.
ಏಪ್ರಿಲ್ 1ರಿಂದ ಅನ್ವಯವಾಗುವಂತೆ ಈಗಾಗಲೇ ಹಾಲು, ವಿದ್ಯುತ್, ಟೋಲ್ ದರ ಏರಿಕೆ ಮಾಡಿರುವ ಸರ್ಕಾರ, ಇದೀಗ ಆ ಪಟ್ಟಿಗೆ ಡೀಸೆಲ್ಅನ್ನು ಸೇರಿಸಿದೆ. ಡೀಸೆಲ್ ಬೆಲೆ ಮೇಲಿನ ಮಾರಾಟ ತೆರಿಗೆಯನ್ನು ಶೇ 18.44 ರಿಂದ ಶೇ 21.17 ಗೆ ಏರಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಆ ಮೂಲಕ 2 ರೂ. ಏರಿಕೆ ಮಾಡಿದೆ.
ಪ್ರಸ್ತುತ ರಾಜ್ಯದಲ್ಲಿ ಡೀಸೆಲ್ ದರ 91.02 ರೂ. ಆಗಲಿದೆ. ಈ ಮುಂಚೆ ಬೆಂಗಳೂರಲ್ಲಿ ಡೀಸೆಲ್ ದರ 89.02 ರೂ. ಇದೆ. ಡೀಸೆಲ್ ಬೆಲೆ ಏರಿಕೆಯಿಂದ ರಾಜ್ಯದ ಜನರ ಮೇಲೆ ಮತ್ತೆ ಹೊರೆ ಬೀಳಲಿದ್ದು ಸರಕುಗಳು, ಹಣ್ಣು, ತರಕಾರಿಗಳ ಬೆಲೆ ಏರಿಕೆಯಾಗುವ ಸಾಧ್ಯತೆ ಇದೆ.
2021ರಲ್ಲಿ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಇದ್ದಾಗ ಪೆಟ್ರೋಲ್ ಮೇಲಿನ ಮಾರಾಟ ತೆರಿಗೆಯನ್ನು ಶೇ. 25.92 ಕ್ಕೆ ಹಾಗೂ ಡೀಸೆಲ್ ಮೇಲಿನ ಮಾರಾಟ ತೆರಿಗೆಯನ್ನು ಶೇ. 14.34ಕ್ಕೆ ಇಳಿಕೆ ಮಾಡಿತ್ತು. ಬಳಿಕ 2024ರ ಜೂನ್ ಕಾಂಗ್ರೆಸ್ ಸರ್ಕಾರ ಬಂದ ಬಳಿಕ ಪೆಟ್ರೋಲ್ ಮೇಲಿನ ಮಾರಾಟ ತೆರಿಗೆಯನ್ನು 29.84%ಗೆ ಏರಿಕೆ ಮಾಡಿದ್ದರೆ, ಡೀಸೆಲ್ ಮೇಲಿನ ಮಾರಾಟ ತೆರಿಗೆಯನ್ನು 18.44%ಗೆ ಏರಿಕೆ ಮಾಡಿತ್ತು. ಇದೀಗ ರಾಜ್ಯ ಸರ್ಕಾರ ಡೀಸೆಲ್ ಮೇಲಿನ ಮಾರಾಟ ತೆರಿಗೆಯನ್ನು 21.17%ಗೆ ಏರಿಕೆ ಮಾಡಿದೆ.
ಸರ್ಕಾರದ ಬೆಲೆ ಏರಿಕೆ ನೀತಿಗೆ ವಿಪಕ್ಷಗಳಿಂದ ತೀವ್ರ ಖಂಡನೆ ವ್ಯಕ್ತವಾಗಿದ್ದು ಬಿಜೆಪಿ ಹಾಗೂ ಜೆಡಿಎಸ್ ನಾಯಕರು ವಾಗ್ದಾಳಿ ನಡೆಸಿದ್ದಾರೆ.

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.