Categories
ಬೆಂಗಳೂರು

ಅರುಣ್ ಪುತ್ತಿಲ ನಡೆ ಬಿಜೆಪಿ ಕಡೆಗೆ!?

ಅರುಣ್ ಪುತ್ತಿಲ ನಡೆ ಬಿಜೆಪಿ ಕಡೆಗೆ!?
– ಲೋಕ ಸಭಾ ಚುನಾವಣೆಗೆ ಕರಾವಳಿ ಸಂಘಟನೆ
– ಬೆಂಗಳೂರಲ್ಲಿ ಮಹತ್ವದ ಚರ್ಚೆ: ಶೀಘ್ರದಲ್ಲಿ ಸೇರ್ಪಡೆ?
– ನಳಿನ್ ಕುಮಾರ್ ವಿರುದ್ಧ ಪುತ್ತಿಲ ಪರಿವಾರ ಕಣಕ್ಕೆ?

NAMMUR EXPRESS NEWS
ಬೆಂಗಳೂರು: ಕರಾವಳಿಯಲ್ಲಿ ಬಿಜೆಪಿ ಸಂಘಟನೆಗೆ ಮತ್ತಷ್ಟು ಬಲ ನೀಡಲು ಹೈಕಮಾಂಡ್ ಮುಂದಾಗಿದೆ. ಕಳೆದ ವಿಧಾನ ಸಭಾ ಚುನಾವಣೆಯಲ್ಲಿ ಪುತ್ತೂರಿನಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಹಿಂದೂ ಹೋರಾಟಗಾರ ಅರುಣ್ ಪುತ್ತಿಲ ಅವರು ಮತ್ತೆ ಬಿಜೆಪಿಗೆ ಸೇರುವುದು ಬಹುತೇಕ ಖಚಿತವಾಗಿದೆ. ಬೆಂಗಳೂರಿನಲ್ಲಿ ಈ ಬಗ್ಗೆ ಮಹತ್ವದ ಚರ್ಚೆ ನಡೆಯುತ್ತಿದೆಂದು ಉನ್ನತ ಮೂಲಗಳಿಂದ ತಿಳಿದುಬಂದಿದೆ.

ಪುತ್ತೂರಿನಲ್ಲಿ ಬಿಜೆಪಿಯ ಹಿರಿಯ ನಾಯಕರ ಜತೆ ಮಾತುಕತೆ ನಡೆದಿದ್ದು, ಬಿಜೆಪಿ ರಾಜ್ಯ ಕಾರ್ಯದರ್ಶಿ ಕ್ಯಾ.ಬ್ರಿಜೇಶ್ ಚೌಟ ಅವರು ಪುತ್ತೂರಿಗೆ ಬಂದ ಬಳಿಕ ಈ ಬೆಳವಣಿಗೆ ನಡೆದಿದೆ. ಅರುಣ್ ಪುತ್ತಿಲ ಅವರು ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಅಲ್ಪ ಮತಗಳ ಅಂತರದಿಂದ ಪರಾಭವಗೊಂಡಿದ್ದರು. ಒಂದು ವೇಳೆ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಈ ಬಾರಿ ಮತ್ತೆ ನಳಿನ್ ಕುಮಾರ್‌ಗೆ ಟಿಕೆಟ್ ನೀಡಿದರೆ ಪುತ್ತಿಲ ಪರಿವಾರದ ಅಭಿಮಾನಿಗಳು ಅರುಣ್ ಕುಮಾರ್ ಪುತ್ತಿಲ ಅವರನ್ನು ಕಣಕ್ಕೆ ಇಳಿಸಲು ಭರ್ಜರಿ ತಯಾರಿ ನಡೆಸುತ್ತಿದೆ. ಈ ಬಗ್ಗೆ ಮಾಹಿತಿ ಪಡೆದ ಬಿಜೆಪಿ ಮುಖಂಡರು ಅರುಣ್ ಪುತ್ತಿಲ ಜೊತೆ ಸಂಧಾನ ಸಭೆ ನಡೆಸಿ ಮತ್ತೆ ಪಕ್ಷಕ್ಕೆ ಬರಮಾಡಿಕೊಳ್ಳವ ಸಾಧ್ಯತೆ ಇದೆ ಎನ್ನಲಾಗಿದೆ

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.