Categories
ಬೆಂಗಳೂರು

ಬಿಬಿಎಂಪಿ ಲ್ಯಾಬ್‌ಗೆ ಬೆಂಕಿ: ಭಾರೀ ದುರಂತ!

ಬಿಬಿಎಂಪಿ ಲ್ಯಾಬ್‌ಗೆ ಬೆಂಕಿ: ಭಾರೀ ದುರಂತ!
– ಮುಖ್ಯ ಎಂಜಿನಿಯರ್ ಸೇರಿ 9 ಮಂದಿ ಗಂಭೀರ
– ಪೊಲೀಸ್ ತನಿಖೆ: ಹಲವರು ಆಸ್ಪತ್ರೆಗೆ ದಾಖಲು
– ರಾಜಕೀಯ ಬಣ್ಣಕ್ಕೆ ತಿರುಗಿದ ಘಟನೆ?

NAMMUR EXPRESS NEWS
ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ) ಕೇಂದ್ರ ಕಚೇರಿ ಆವರಣದ ಕಟ್ಟಡದಲ್ಲಿರುವ ಗುಣ ನಿಯಂತ್ರಣ ಪ್ರಯೋಗಾಲಯದಲ್ಲಿ ಸಂಭವಿಸಿದ ಭಾರೀ ಅಗ್ನಿ ಅವಘಡದಲ್ಲಿ ಪ್ರಯೋಗಾಲಯದ ಮುಖ್ಯ ಅಭಿಯಂತರ ಸೇರಿ 9 ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಶುಕ್ರವಾರ ಸಂಜೆ ನಡೆದಿದೆ. ಸಂಜೆ 5ರ ಸುಮಾರಿಗೆ ಈ ಘಟನೆ ನಡೆದಿದೆ. ಈ ಘಟನೆಯಲ್ಲಿ ಪ್ರಯೋಗಾಲಯದ ಮುಖ್ಯ ಅಭಿಯಂತರ ಶಿವಕುಮಾರ್, ಕಾರ್ಯಪಾಲಕ ಎಂಜಿನಿಯರ್‌ಗಳಾದ ಕಿರಣ್, ಸಂತೋಷ್ ಕುಮಾರ್, ವಿಜಯಮಾಲಾ, ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಶ್ರೀಧರ್, ಪ್ರಥಮ ದರ್ಜೆ ಸಹಾಯಕ ಸಿರಾಜ್, ಆಪರೇಟರ್ ಜ್ಯೋತಿ, ಪ್ರಾಜೆಕ್ಟ್ ಮ್ಯಾನೇಜ್‌ಮೆಂಟ್ ಕನ್ಸಲ್ವೆಂಟ್ ಶ್ರೀನಿವಾಸ, ಗಣಕಯಂತ್ರ ನಿರ್ವಾಹಕ ಮನೋಜ್ ಗಾಯಗೊಂಡಿದ್ದಾರೆ. ಅವಘಡದಲ್ಲಿ 9 ಮಂದಿಗೂ ಶೇ.35-40ರಷ್ಟು ಸುಟ್ಟು ಗಾಯಗಳಾಗಿದ್ದು, ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಏನಿದು ಘಟನೆ?

ಬಿಬಿಎಂಪಿ ಕೇಂದ್ರ ಕಚೇರಿಯ ಆವರಣದ ಆನೆಕ್ಸ್-2 ಕಟ್ಟಡದಲ್ಲಿ ಗುಣ ನಿಯಂತ್ರಣ ಪ್ರಯೋಗಾಲಯ ಹಾಗೂ ಕಚೇರಿ ಇದೆ. ಇಲ್ಲಿ ಬಿಬಿಎಂಪಿ ಕಾಮಗಾರಿಗಳಿಗೆ ಸಂಬಂಧಿಸಿದಂತೆ ವಸ್ತುಗಳ ಗುಣಮಟ್ಟದ ಪರೀಕ್ಷೆ ಮಾಡಲಾಗುತ್ತದೆ. ವೈಜ್ಞಾನಿಕವಾಗಿ ರಾಸಾಯನಿಕಗಳನ್ನು ಬಳಸಿ ವಸ್ತುಗಳ ಗುಣಮಟ್ಟ ಪರೀಕ್ಷಿಸಲಾಗುತ್ತದೆ. ಸಂಜೆ 5 ಗಂಟೆ ಸುಮಾರಿಗೆ ಬೆಂಜಿನ್ ರಾಸಾಯನಿಕ ಬಳಸಿ ಪರೀಕ್ಷೆ ಮಾಡುವಾಗ ಬೆಂಕಿ ಹೊತ್ತಿಕೊಂಡಿರುವ ಸಾಧ್ಯತೆಯಿದೆ. ಈ ವೇಳೆ ಪ್ರಯೋಗಾಲಯದ ಮೂರು ಹಾಟ್ ಏರ್ ಓವನ್ ಪೈಕಿ ಒಂದು ಓವನ್‌ಗೆ ಬೆಂಕಿ ತಾಕಿ ಸ್ಫೋಟಗೊಂಡಿದೆ. ಸ್ಫೋಟದ ರಭಸಕ್ಕೆ ಇಡೀ ಪ್ರಯೋಗಾಲಯಕ್ಕೆ ಬೆಂಕಿ ಆವರಿಸಿರುವ ಸಾಧ್ಯತೆಯಿದೆ.

ಸ್ಫೋಟದ ವೇಳೆ ಪ್ರಯೋಗಾಲಯದಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಮುಖ್ಯ ಎಂಜಿನಿಯರ್ ಸೇರಿದಂತೆ 9 ಮಂದಿ ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ ಗಾಯಗೊಂಡಿದ್ದಾರೆ. ಪ್ರಾಣ ಉಳಿಸಿಕೊಳ್ಳಲು ಹೊರಗೆ ಓಡಿ ಬಂದಿದ್ದಾರೆ. ಈ ವೇಳೆ ಸಾರ್ವಜನಿಕರು ಹಾಗೂ ನೌಕರರು ಈ 9 ಮಂದಿಯ ನೆರವಿಗೆ ಧಾವಿಸಿ ಮೈ ಮೇಲೆ ನೀರು ಎರಚಿ ಬೆಂಕಿ ನಂದಿಸಿದ್ದಾರೆ. ಅಗ್ನಿ ಅವಘಡದ ವಿಚಾರ ತಿಳಿದು ಹಿರಿಯ ಪೊಲೀಸ್ ಅಧಿಕಾರಿಗಳು, ಹಲಸೂರು ಗೇಟ್ ಠಾಣೆ ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ ಬೆಂಕಿ ನಂದಿಸುವ ಕಾರ್ಯಾಚರಣೆಯಲ್ಲಿ ತೊಡಗಿದರು.

ಮತ್ತೊಂದೆಡೆ ಕೂಡಲೇ ಆ0ಬುಲೆನ್ಸ್‌ಗಳನ್ನು ಕರೆಸಿ ಗಾಯಾಳುಗಳನ್ನು ಸಮೀಪದ ಸೇಂಟ್ ಮಾರ್ಥಾಸ್ ಆಸ್ಪತ್ರೆಗೆ ಕಳುಹಿಸಲಾಗಿದೆ. ಇಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಸದ್ಯಕ್ಕೆ ವಿಕ್ಟೋರಿಯಾ ಆಸ್ಪತ್ರೆಯ ಸುಟ್ಟಗಾಯಗಳ ವಿಭಾಗದಲ್ಲಿ 9 ಮಂದಿಗೂ ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ. ಈ ಸಂಬಂಧ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಕಡತ, ಕಂಪ್ಯೂಟರ್ ಬೆಂಕಿಗಾಹುತಿ!

ಪ್ರಯೋಗಾಲಯದಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಬಿಬಿಎಂಪಿಯ ವಿವಿಧ ಕಾಮಗಾರಿಗಳಿಗೆ ಸಂಬಂಧಿಸಿದ ಕಡತಗಳು, ಕಂಪ್ಯೂಟರ್‌ಗಳು ಹಾಗೂ ಪ್ರಾಯೋಗಾಲಯದ ಉಪಕರಣಗಳು, ಪೀಠೋಪಕರಣಗಳಿಗೆ ಹಾನಿಯಾಗಿದೆ. ಎಷ್ಟು ಕಡತ, ಯಾವ ಕಾಮಗಾರಿಗೆ ಸಂಬಂಧಿಸಿದ ಕಡತಗಳು ಬೆಂಕಿಗಾಹುತಿಯಾಗಿವೆ ಎಂಬುದರ ಬಗ್ಗೆ ಬಿಬಿಎಂಪಿ ಅಧಿಕಾರಿಗಳೇ ಮಾಹಿತಿ

ನೀಡಬೇಕಿದೆ. ಎಫ್‌ಎಸ್ಎಲ್ ತಂಡ ಭೇಟಿ:

ಬೆಂಕಿ ಅವಘಡದ ಹಿನ್ನೆಲೆಯಲ್ಲಿ ಗುಣ ನಿಯಂತ್ರಣ ಪ್ರಯೋಗಾಲಯಕ್ಕೆ ವಿಧಿವಿಜ್ಞಾನ ಪ್ರಯೋಗಾಲಯ(ಎಫ್‌ಎಸ್‌ಎಲ್)ದ ತಜ್ಞರ ತಂಡ ಭೇಟಿ ನೀಡಿ ಪರಿಶೀಲಿಸಿದೆ. ಅವಘಡಕ್ಕೆ ನಿಖರ ಕಾರಣ ಸದ್ಯಕ್ಕೆ ತಿಳಿದಿಲ್ಲ. ಬೆಂಜಿನ್ ರಾಸಾಯನಿಕ ಬಳಸಿ ಪ್ರಯೋಗ ಮಾಡುವಾಗ ಬೆಂಕಿ ಹೊತ್ತಿಕೊಂಡಿರುವ ಸಾಧ್ಯತೆಯಿದೆ. ಹೆಚ್ಚಿನ ತನಿಖೆಯಿಂದ ಘಟನೆಗೆ ನಿಖರ ಕಾರಣ ಗೊತ್ತಾಗಲಿದೆ.

ಇದನ್ನೂ ಓದಿ : ಭೂತಾನ್ ಅಡಿಕೆ ಬಂದ್ರೂ ತೊಂದರೆ ಇಲ್ಲ- ಆರಗ ಜ್ಞಾನೇಂದ್ರ

[embedyt] https://www.youtube.com/watch?v=rTGqP21dgrM%5B/embedyt%5D

HOW TO APPLY : NEET-UG COUNSELLING 2023

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.