ಸೆ.11ಕ್ಕೆ ಬೆಂಗಳೂರು ಬಂದ್?!
– ಏನಿರುತ್ತೆ…? ಏನಿರಲ್ಲ..? ಯಾರಿಗೆ ಬಂದ್ ಬಿಸಿ
– ಕಾಂಗ್ರೆಸ್ ಸರ್ಕಾರಕ್ಕೆ ಮೊದಲ ಬಂದ್ ತಲೆಬಿಸಿ
NAMMUR EXPRESS NEWS
ಬೆಂಗಳೂರು: ಸೆ.11 ರಂದು ಬೆಂಗಳೂರು ನಗರದ ಬಂದ್‍ಗೆ ಖಾಸಗಿ ವಾಹನ ಚಾಲಕರ ಒಕ್ಕೂಟ ಸಕಲ ಸಿದ್ಧತೆ ಮಾಡಿಕೊಂಡಿದೆ. ಈ ಮೂಲಕ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರಕ್ಕೆ ಮೊದಲ ಬಂದ್ ಬಿಸಿ ಮುಟ್ಟಲಿದೆ.
ಶಾಲಾ ಕಾಲೇಜು ವಾಹನಗಳು, ಸರಕು ಸಾಗಣೆ ವಾಹನಗಳ ಬಂದ್ ಇಂದ ಜನತೆಗೆ ತೊಂದರೆ ಆಗಲಿದೆ.
ರಾಜ್ಯ ಸರ್ಕಾರದ ಶಕ್ತಿ ಯೋಜನೆಯ ಯಶಸ್ಸು ಸರ್ಕಾರಕ್ಕೆ ಅನುಕೂಲವಾದರೆ ಖಾಸಗಿ ವಾಹನಗಳಾದ ಆಟೋ, ಓಲಾ, ಉಬರ್ ಸೇರಿದಂತೆ ಖಾಸಗಿ ಬಸ್‍ಗಳಿಗೆ ದೊಡ್ಡ ಪೆಟ್ಟು ಕೊಟ್ಟಿದೆ. ಮಹಿಳೆಯರು ಅವುಗಳಲ್ಲಿ ಸಂಚರಿಸುವುದನ್ನೇ ಬಿಟ್ಟಿದ್ದಾರೆ. ಇದು ಖಾಸಗಿ ವಾಹನ ಚಾಲಕರ ಹಾಗೂ ಮಾಲೀಕರ ಆತಂಕಕ್ಕೆ ಕಾರಣವಾಗಿದೆ.
ಈ ವಿಚಾರವಾಗಿ ಪರಿಹಾರ ಕೊಡುವಂತೆ ಸರ್ಕಾರಕ್ಕೆ ಒತ್ತಡ ಕೂಡ ತರಲಾಗಿತ್ತು. ಆದರೆ ಬೇಡಿಕೆ ಈಡೇರದ ಹಿನ್ನೆಲೆಯಲ್ಲಿ ಬೆಂಗಳೂರು ಬಂದ್‍ಗೆ ಕರೆ ನೀಡಲಾಗಿದೆ. ಭಾನುವಾರ ರಾತ್ರಿ 12 ಗಂಟೆಯಿಂದಲೇ ಖಾಸಗಿ ವಾಹನ ಸಂಚಾರ ಬಂದ್ ಆಗಲಿದ್ದು, ಸೋಮವಾರ ರಾತ್ರಿ 12 ಗಂಟೆವರೆಗೆ ಬಂದ್ ಮಾಡಲು ಒಕ್ಕೂಟ ನಿರ್ಧಾರ ಮಾಡಿದೆ. ಬಂದ್ ಬಗ್ಗೆ ಜನರಿಗೆ ತಿಳಿಸಲು ಮತ್ತು ಬಂದ್‍ಗೆ ಬೆಂಬಲ ನೀಡುವಂತೆ ಸಾರ್ವಜನಿಕರಲ್ಲಿ ಮನವಿ ಕೂಡ ಮಾಡಿದೆ. ಕೆ.ಜಿ ರೋಡ್, ಮೆಜೆಸ್ಟಿಕ್, ಆನಂದ್ ರಾವ್ ಸರ್ಕಲ್, ಕೆ.ಆರ್ ಮಾರ್ಕೆಟ್, ಮಲ್ಲೇಶ್ವರಂ ಸೇರಿದಂತೆ ಹಲವೆಡೆ ಈ ಬಗ್ಗೆ ಮಾಹಿತಿ ನೀಡಿದ್ದಾರೆ.
ಯಾರು ಯಾರು ಬೆಂಬಲ?:
ವರ್ತಕರ ಸಂಘಟನೆಗಳು, ಕನ್ನಡ ಪರ ಸಂಘಟನೆಗಳು, ಬೀದಿ ಬದಿ ವ್ಯಾಪಾರಿಗಳೊಂದಿಗೆ ಬಂದ್‍ಗೆ ಬೆಂಬಲಿಸುವಂತೆ ಕೇಳಿಕೊಳ್ಳಲಾಗಿದೆ. ಪ್ರತಿಭಟನಾಕಾರರು ನಗರದೊಳಗೆ ಬೃಹತ್ ಮೆರವಣಿಗೆಗೆ ತಯಾರಿ ಮಾಡಿಕೊಂಡಿದ್ದು, ಮೆರವಣಿಗೆ ಬಳಿಕ ಫ್ರೀಡಂ ಪಾರ್ಕಿನಲ್ಲಿ ಶಕ್ತಿ ಪ್ರದರ್ಶನಕ್ಕೆ ತಯಾರಾಗಿದ್ದಾರೆ.
ಬಂದ್ ದಿನ ಏನಿದೆ, ಏನಿಲ್ಲ?
1.32 ಸಂಘಟನೆಗಳ 7 ಲಕ್ಷಕ್ಕೂ ಹೆಚ್ಚು ವಾಹನಗಳು ಸಂಚಾರ ನಿಲ್ಲಿಸಲಿವೆ.
2.ಏರ್‌ಪೋರ್ಟ್ ಟ್ಯಾಕ್ಸಿ ಸಂಪೂರ್ಣ ಸ್ಥಗಿತಗೊಳಿಸಲಾಗುತ್ತದೆ.
3.ಓಲಾ, ಊಬರ್ ಆಟೋ ಟ್ಯಾಕ್ಸಿ ಬಂದ್ ಆಗಲಿದೆ.
4.ಕಾರ್ಪೋರೇಟ್ ಕಂಪನಿಗಳ ಜೊತೆ ಒಪ್ಪಂದ ಮಾಡಿಕೊಂಡಿರುವ ಬಸ್‍ಗಳು ಕೂಡ ಬಂದ್‍ಗೆ ಬೆಂಬಲ ನೀಡಿದ್ದು ಸಂಚಾರ ಸ್ಥಗಿತಗೊಳಿಸಲಿವೆ.
5. ನಗರದಲ್ಲಿ 3 ಲಕ್ಷ ಆಟೋ (Auto), 1.5 ಲಕ್ಷ ಟ್ಯಾಕ್ಸಿ, 20 ಸಾವಿರ ಗೂಡ್ಸ್ ವಾಹನಗಳು, 5 ಸಾವಿರಕ್ಕೂ ಹೆಚ್ಚು ಖಾಸಗಿ ಶಾಲಾ ವಾಹನಗಳು, 80 ಸಾವಿರ ಸಿಟಿ ಟ್ಯಾಕ್ಸಿ ಮತ್ತು ಕಾರ್ಪೋರೇಟ್ ಕಂಪನಿಯ ಬಸ್‍ಗಳು ಸೇವೆಯಿಂದ ಹೊರಗುಳಿಯಲಿವೆ.
6.ಒಟ್ಟು 5 ಲಕ್ಷಕ್ಕೂ ಹೆಚ್ಚು ವಾಹನಗಳು ಸಂಚಾರವನ್ನು ನಿಲ್ಲಿಸಲಿವೆ.
7. ಹೋಟೆಲ್ ಮಾಲೀಕರ ಸಂಘದ ಬಳಿಯೂ ಬಂದ್‍ಗೆ ಬೆಂಬಲ ಸೂಚಿಸುವಂತೆ ಮನವಿ ಮಾಡಲಾಗಿದ್ದು 8.ಹೋಟೆಲ್‍ಗಳು ಬಂದ್ ಆಗುವ ಸಾಧ್ಯತೆ ಇದೆ.
