ಶಾಲಾ ಮಕ್ಕಳಿಗೆ ಮತ್ತೆ ಸೈಕಲ್ ಭಾಗ್ಯ?!
– ಸಿಎಂ ಸಿದ್ದರಾಮಯ್ಯ ಭರವಸೆ: ಮಕ್ಕಳಿಗೆ ಸಂತಸ
– 8ನೇ ತರಗತಿ ಮಕ್ಕಳಿಗೆ ಸೈಕಲ್ ವಿತರಣೆ
NAMMUR EXPRESS NEWS
ಬೆಂಗಳೂರು: ನಾಲ್ಕು ವರ್ಷ ಗಳಿಂದ ಸ್ಥಗಿತಗೊಂಡಿರುವ ಶಾಲಾ ಮಕ್ಕಳಿಗೆ ಬೈಸಿಕಲ್ ವಿತರಣೆ ಯೋಜನೆಗೆ ಮತ್ತೆ ಚಾಲನೆ ಸಿಗುವ ಸಾಧ್ಯತೆಗಳಿವೆ. ಈ ಸುದ್ದಿ ಮಕ್ಕಳಲ್ಲಿ ಹೊಸ ಸಂತಸಕ್ಕೆ ಕಾರಣ ಆಗಿದೆ. ಹೌದು. ಶಾಲಾ ಮಕ್ಕಳಿಗೆ ಸೈಕಲ್ ನೀಡುವ ಬಗ್ಗೆ ಪರಿಶೀಲನೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭರವಸೆ ನೀಡಿದ್ದಾರೆ. ವಿಧಾನಪರಿಷತ್ನಲ್ಲಿ ಬಜೆಟ್ ಮೇಲಿನ ಚರ್ಚೆಗೆ ಉತ್ತರಿಸಿದ ಅವರು,”ಮಕ್ಕಳ ವಿದ್ಯಾಭ್ಯಾಸಕ್ಕೆ ಮತ್ತು ಶಾಲೆ ಯಿಂದ ದೂರ ಉಳಿದ ಮಕ್ಕಳನ್ನು ಸೆಳೆಯಲು ಅನುಕೂಲ ಆಗುವ ಸೈಕಲ್ ವಿತರಣೆ ಯೋಜನೆ ಹಲವು ವರ್ಷ ಗಳಿಂದ ಸ್ಥಗಿತಗೊಂಡಿದೆ. ಯೋಜನೆ ಪುನಾರಂಭಿಸುವ ಬಗ್ಗೆ ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು’ ಎಂದರು.
2006-07ರಲ್ಲಿ ಆರಂಭಗೊಂಡ ಈ ಯೋಜನೆಯಡಿ 8ನೇ ತರಗತಿಯಲ್ಲಿ ವ್ಯಾಸಂಗ ಮಾಡುವ ಸರಕಾರಿ ಶಾಲಾ ಮಕ್ಕಳಿಗೆ ಸರಕಾರದ ವತಿಯಿಂದ ಉಚಿತವಾಗಿ ಸೈಕಲ್ಗಳನ್ನು ನೀಡಲಾಗುತ್ತಿತ್ತು. ಇದರಿಂದ ದೂರದ, ಕಾಡಂಚಿನ ಗ್ರಾಮಗಳಲ್ಲಿ ಯಾವುದೇ ವಾಹನ ವ್ಯವಸ್ಥೆ ಕೂಡ ಇಲ್ಲದ ಪ್ರದೇಶಗಳ ವಿದ್ಯಾರ್ಥಿಗಳಿಗೆ ಶಾಲೆಗಳಿಗೆ ತೆರಳಲು ಅನುಕೂಲವಾಗುತ್ತಿತ್ತು.ಆದರೆ 2019ರಿಂದ ಈಚೆಗೆ ಯೋಜನೆ ಸ್ಥಗಿತಗೊಂಡಿದೆ. ಪುನರಾರಂಭಿಸುವಂತೆ ಜೆಡಿಎಸ್ನ ಮರಿತಿಬ್ಬೇ ಗೌಡ ಮನವಿ ಮಾಡಿದ್ದರು. ಇದಕ್ಕೆ ಮುಖ್ಯಮಂತ್ರಿ ಪರಿಶೀಲಿಸಿ ಕ್ರಮ ಕೈಗೊಳ್ಳುವ ಭರವಸೆ ನೀಡಿದರು.
ಇದನ್ನೂ ಓದಿ : ಕರಾವಳಿಯಲ್ಲಿ ಕೊರಗಜ್ಜನ ಪವಾಡ.!
HOW TO APPLY : NEET-UG COUNSELLING 2023