ಎನ್ಡಿಎಗೆ ಬಿಹಾರ ಗದ್ದುಗೆ, ಮಹಾಘಟಬಂಧನ್ಗೆ ತೀವ್ರ ಮುಖಭಂಗ
* ಸಮೀಕ್ಷೆಗಳ ನಿರೀಕ್ಷೆಯನ್ನೂ ಮೀರಿ ಬಿಹಾರ ವಿಧಾನಸಭಾ ಚುನಾವಣಾ ಫಲಿತಾಂಶ
* ಮತಗಳ್ಳತನ ಆರೋಪ ಮಾಡಿದ ಕಾಂಗ್ರೆಸ್
NAMMMUR EXPRESS NEWS
ಬೆಂಗಳೂರು: ಭಾರೀ ಕುತೂಹಲ ಕೆರಳಿಸಿರುವ ಬಿಹಾರ ವಿಧಾನಸಭೆ ಚುನಾವಣೆ ಫಲಿತಾಂಶ ಇನ್ನು ಕೆಲವೇ ಕ್ಷಣಗಳಲ್ಲಿ ಹೊರಬೀಳಲಿದೆ. ಬಿಹಾರದಲ್ಲಿ ಎನ್ಡಿಎ ಭಾರೀ ಮುನ್ನಡೆ ಸಾಧಿಸಿದ್ದು, ಆರ್ಜೆಡಿ ಹಾಗೂ ಕಾಂಗ್ರೆಸ್ಗೆ ಭಾರೀ ಮುಖಭಂಗವಾಗಿದೆ.
ಈ ನಡುವೆ ಬಿಹಾರದ ಸಂಪೂರ್ಣ ಫಲಿತಾಂಶ ಹೊರ ಬೀಳುವ ಮುನ್ನವೇ ಕಾಂಗ್ರೆಸ್ ನಾಯಕರು ಮತಗಳ್ಳತನದ ಆರೋಪ ಮಾಡುತ್ತಿದ್ದಾರೆ.
* ಸದ್ಯದ ಫಲಿತಾಂಶ ಹೀಗಿದೆ
ಬಿಹಾರ ವಿಧಾನಸಭಾ ಚುನಾವಣೆಯ ಒಟ್ಟು ಸ್ಥಾನಗಳು – 243
ಮ್ಯಾಜಿಕ್ ನಂಬರ್ -122
ಎನ್ಡಿಎ ಮುನ್ನಡೆ -203
ಮಹಾಘಟಬಂಧನ್ ಮುನ್ನಡೆ – 33
ಜೆಎಸ್ಪಿ -00
ಇತರೆ – 06
ಪಕ್ಷವಾರು ನೋಡೋದಾದರೆ ಎನ್ಡಿಎ ಮೈತ್ರಿಕೂಟದಲ್ಲಿ ಬಿಜೆಪಿ -91 ಸ್ಥಾನದಲ್ಲಿ ಮುನ್ನಡೆಯಲ್ಲಿದ್ದು,ಮಿತ್ರ ಪಕ್ಷ ಜೆಡಿಯು – 84 ಸ್ಥಾನಗಳಲ್ಲಿ ಮುನ್ನಡೆಯಲ್ಲಿದೆ, ಮಹಾಘಟಬಂಧನ್ನಲ್ಲಿರುವ ಕಾಂಗ್ರೆಸ್ -05 ಸ್ಥಾನಗಳಲ್ಲಿ ಮುನ್ನಡೆಯಲ್ಲಿದ್ದು, ಆರ್ಜೆಡಿ – 27ಸ್ಥಾನಗಳಲ್ಲಿ ಮುನ್ನಡೆಯಲ್ಲಿದೆ. ಇತರೆ -06 ಸ್ಥಾನಗಳಲ್ಲಿ ಮುನ್ನಡೆಯಲ್ಲಿದ್ದು ಒಟ್ಟಾರೆ ಎನ್ಡಿಎ ಮೈತ್ರಿಕೂಟ ಸ್ಪಷ್ಟ ಬಹುಮತದತ್ತ ಹೆಜ್ಜೆಯಿಟ್ಟು ಗೆಲುವಿನ ನಗೆ ಬೀರಿದೆ.
* ಮತಗಳ್ಳತನದ ಆರೋಪ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ
ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೂ ಕೂಡ ಬಿಹಾರದಲ್ಲಿ ಮತಗಳ್ಳತನವಾಗಿದೆ ಎಂದು ಆರೋಪ ಮಾಡಿದ್ದಾರೆ.
ಬಿಹಾರ ಚುನಾವಣೆಯಲ್ಲಿ ಯಾಕೆ ಹಿನ್ನಡೆ ಆಗಿದೆ ಗೊತ್ತಿಲ್ಲ, ನಾನು ಇನ್ನೂ ನೋಡಿಲ್ಲ, ಸರಿಯಾಗಿ ಮಾಹಿತಿ ಪಡೆದು ಮತ್ತೆ ಮಾತನಾಡುತ್ತೇನೆಂದು ಹೇಳಿದರು.
ಯಾಕೆ ಜನ ವೋಟ್ ಹಾಕಿಲ್ಲ, NDA ಯಾಕೆ ಇಷ್ಟು ದೊಡ್ಡ ಬಹುಮತದಲ್ಲಿದೆ ಎನ್ನುವುದು ಗೊತ್ತಿಲ್ಲ. ಇಲ್ಲೂ ಮತಗಳ್ಳತನವಾಗಿದೆ. ಆದರೆ ನಾವು ಜನರ ತೀರ್ಪು ಒಪ್ಪಿಕೊಳ್ಳಬೇಕು ಎಂದು ತಿಳಿಸಿದ್ದಾರೆ.
* ಎಲ್ಲೆಡೆ ಕಾರ್ಯಕರ್ತರ ಸಂಭ್ರಮಾಚರಣೆ
ಬಿಹಾರ ಚುನಾವಣೆಯಲ್ಲಿ ಎನ್ಡಿಎ ಸ್ಪಷ್ಟ ಬಹುಮತದತ್ತ ಸಾಗಿ ಗೆಲುವು ಖಚಿತವಾಗುತ್ತಿದ್ದಂತೆ ಬಿಜೆಪಿ ಕಾರ್ಯಕರ್ತರು ರಾಜ್ಯದಾದ್ಯಂತ ಸಿಹಿ ಹಂಚಿ,ಪಟಾಕಿ ಸಿಡಿಸಿ ಸಂಭ್ರಮಿಸಿದ್ದಾರೆ.








