ಕಾಂಗ್ರೆಸ್ ವಿರುದ್ಧ ಪೊಲೀಸ್ ಮಹಾ ನಿರ್ದೇಶಕರಿಗೆ ಬಿಜೆಪಿ ದೂರು
– ರಾಜ್ಯಪಾಲರ ವಿರುದ್ಧ ಅವಹೇಳನಕಾರಿ ಹೇಳಿಕೆ: ಬಿಜೆಪಿ ನಾಯಕರ ಖಂಡನೆ
– ಅಬಲಾಶ್ರಮದಲ್ಲಿ ವಿಜಯೇಂದ್ರ ರಕ್ಷಾ ಬಂಧನ ಆಚರಣೆ
NAMMUR EXPRESS NEWS
ಬೆಂಗಳೂರು: ರಾಜ್ಯಪಾಲರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡುತ್ತಿರುವ ವ್ಯಕ್ತಿಗಳ ವಿರುದ್ಧ ಹಾಗೂ ಪೂರ್ವ ನಿಯೋಜಿತ ಪ್ರತಿಭಟನೆ ನಡೆಸುತ್ತಿರುವ ಕಾಂಗ್ರೆಸ್ ನಾಯಕರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ, ಪೊಲೀಸ್ ಮಹಾ ನಿರ್ದೇಶಕರಿಗೆ ಬಿಜೆಪಿ ನಿಯೋಗ ಮನವಿ ಸಲ್ಲಿಸಿತು.
ಈ ಸಂದರ್ಭದಲ್ಲಿ ಮಾಜಿ ಉಪಮುಖ್ಯಮಂತ್ರಿಗಳು ಹಾಗೂ ಸಂಸದರಾದ ಗೋವಿಂದ ಕಾರಜೋಳ, ವಿಧಾನ ಪರಿಷತ್ ವಿರೋಧ ಪಕ್ಷ ನಾಯಕರಾದ ಛಲವಾದಿ ನಾರಾಯಣ ಸ್ವಾಮಿ, ಎಸ್.ಸಿ.ಮೋರ್ಚಾದ ರಾಜ್ಯಾಧ್ಯಕ್ಷರು ಹಾಗೂ ಶಾಸಕರಾದ ಸಿಮೆಂಟ್ ಮಂಜು, ಎಸ್ಟಿ ಮೋರ್ಚಾ ರಾಜ್ಯಾಧ್ಯಕ್ಷರಾದ ಬಂಗಾರು ಹನಮಂತು, ಮಾಜಿ ಸಂಸದರಾದ ಎಸ್.ಮುನಿಸ್ವಾಮಿ, ಶಾಸಕರಾದ ಡಾ.ಅವಿನಾಶ್ ಜಾಧವ್ ಸೇರಿದಂತೆ ಪಕ್ಷದ ಮುಖಂಡರು ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಅಬಲಾಶ್ರಮದಲ್ಲಿ ವಿಜಯೇಂದ್ರ ರಕ್ಷಾ ಬಂಧನ ಆಚರಣೆ
ಪವಿತ್ರ ರಕ್ಷಾಬಂಧನದ ಅಂಗವಾಗಿ ರಾಜ್ಯಾಧ್ಯಕ್ಷರಾದ ವಿಜಯೇಂದ್ರ ಯಡಿಯೂರಪ್ಪ ಬೆಂಗಳೂರಿನ ಬಸವನಗುಡಿಯ ಅಬಲಾಶ್ರಮಕ್ಕೆ ಭೇಟಿ ನೀಡಿ ರಕ್ಷಾ ಬಂಧನ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯರಾದ ಭಾರತಿ ಶೆಟ್ಟಿ, ಮಹಿಳಾ ಮೋರ್ಚಾ ರಾಜ್ಯಾಧ್ಯಕ್ಷರಾದ ಕು ಮಂಜುಳಾ, ಆಶ್ರಮದ ಪ್ರಮುಖರು ಹಾಗೂ ಮಕ್ಕಳು ಉಪಸ್ಥಿತರಿದ್ದರು. ಈ ವೇಳೆ ಅಲ್ಲಿನ ವಿದ್ಯಾರ್ಥಿನಿಯರು ವಿಜಯೇಂದ್ರ ಅವರಿಗೆ ರಾಖಿ ಕಟ್ಟಿದರು.