ಸಿಎಂ ರಾಜೀನಾಮೆಗೆ ಬಿಜೆಪಿ ಪಟ್ಟು!
– ವಿಜಯೇಂದ್ರ ನೇತೃತ್ವದಲ್ಲಿ ಬೆಂಗಳೂರಲ್ಲಿ ಭಾರೀ ಪ್ರತಿಭಟನೆ
– ರಾಜ್ಯದಲ್ಲಿ ಹೆಚ್ಚಿದ ಬಿಜೆಪಿ ಹೋರಾಟ
NAMMUR EXPRESS NEWS
ಬೆಂಗಳೂರು: ಮುಡಾ ಹಗರಣದಲ್ಲಿ ಭಾಗಿ ಆಗಿದ್ದಾರೆ ಎಂದು ಆರೋಪಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಬೆಂಗಳೂರಲ್ಲಿ ಭಾರೀ ಪ್ರತಿಭಟನೆ ನಡೆಸಿದೆ.
ರಾಜ್ಯಾಧ್ಯಕ್ಷ ವಿಜಯೇಂದ್ರ ಯಡಿಯೂರಪ್ಪನವರ ನೇತೃತ್ವದಲ್ಲಿ ವಿಧಾನಸೌಧ ಮುಂಭಾಗದ ಗಾಂಧಿ ಪ್ರತಿಮೆ ಎದುರು ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳ ವಿಧಾನಸಭಾ ಹಾಗೂ ವಿಧಾನಪರಿಷತ್ ಸದಸ್ಯರುಗಳ ಸಮ್ಮುಖದಲ್ಲಿ ಪ್ರತಿಭಟನೆ ನಡೆಯಿತು.
ಈ ಸಂದರ್ಭದಲ್ಲಿ ವಿರೋಧ ಪಕ್ಷ ನಾಯಕರಾದ ಆರ್ ಅಶೋಕ್, ಮಾಜಿ ಮುಖ್ಯಮಂತ್ರಿಗಳಾದ ಡಿ.ವಿ.ಸದಾನಂದ ಗೌಡ, ವಿಧಾನ ಪರಿಷತ್ ವಿರೋಧ ಪಕ್ಷ ನಾಯಕರಾದ ಛಲವಾದಿ ನಾರಾಯಣ ಸ್ವಾಮಿ, ಮಾಜಿ ಉಪಮುಖ್ಯಮಂತ್ರಿಗಳಾದ ಡಾ ಸಿ ಎನ್ ಅಶ್ವಥ್ ನಾರಾಯಣ್, ವಿರೋಧ ಪಕ್ಷ ಉಪ ನಾಯಕರಾದ ಅರವಿಂದ್ ಬೆಲ್ಲದ್, ಮಾಜಿ ಸಚಿವರಾದ ಅರಗ ಜ್ಞಾನೇಂದ್ರ, ಸಿ.ಟಿ.ರವಿ ಸೇರಿದಂತೆ ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳ ಪ್ರಮುಖರು, ಶಾಸಕರು ಹಾಗೂ ವಿಧಾನ ಪರಿಷತ್ ಸದಸ್ಯರು ಉಪಸ್ಥಿತಿದ್ದರು.