Categories
ಬೆಂಗಳೂರು

ಬಿಜೆಪಿಯಿಂದ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಅಮಾನತು

ಬಿಜೆಪಿಯಿಂದ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಅಮಾನತು

* 6 ವರ್ಷಗಳ ಕಾಲ ಪಕ್ಷದಿಂದ ಉಚ್ಛಾಟನೆ
* ಬಿಜೆಪಿ ಕೇಂದ್ರೀಯ ಶಿಸ್ತು ಸಮಿತಿಯಿಂದ ಆದೇಶ

NAMMUR EXPRESS NEWS
ಬೆಂಗಳೂರು: ಪಕ್ಷ ವಿರೋಧಿ ಹೇಳಿಕೆ ಹಿನ್ನೆಲೆಯಲ್ಲಿ ಬಿಜೆಪಿಯಿಂದ ವಿಜಯಪುರ ವಿಧಾನಸಭಾ ಕ್ಷೇತ್ರದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನ 6 ವರ್ಷಗಳ ಕಾಲ ಅಮಾನತು ಮಾಡಲಾಗಿದೆ.
ಬಿಜೆಪಿ ಕೇಂದ್ರಿಯ ಶಿಸ್ತು ಸಮಿತಿಯು ಬಿಜೆಪಿಯಿಂದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ 6 ವರ್ಷಗಳ ಕಾಲ ಉಚ್ಚಾಟನೆ ಮಾಡಿ ಆದೇಶ ಹೊರಡಿಸಿದೆ. ಫೆಬ್ರವರಿ 10 ರಂದು ಶಾಸಕ ಯತ್ನಾಳ್‌ಗೆ ಶೋಕಾಸ್ ನೋಟಿಸ್ ನೀಡಲಾಗಿತ್ತು. ನೋಟಿಸ್‌ಗೆ ಉತ್ತರ ನೀಡದ ಕಾರಣ ಉಚ್ಚಾಟನೆ ಮಾಡಲಾಗಿದೆ.

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಹಾಗೂ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ವಿರುದ್ದ ಶಾಸಕ ಯತ್ನಾಳ್ ಅಗ್ಗಾಗ್ಗೆ ಹೇಳಿಕೆ ನೀಡುತ್ತಿದ್ದರು. ಅಲ್ಲದೆ ರಾಜ್ಯಾಧ್ಯಕ್ಷ ಸ್ಥಾನದಿಂದ ಬಿವೈ ವಿಜಯೇಂದ್ರರನ್ನ ಬದಲಿಸುವಂತೆ ಆಗ್ರಹಿಸಿದ್ದರು.

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.