ಬಜೆಟ್ ಕ್ಷಣಗಣನೆ: ಜನರಿಗೆ ಸಿಗುತ್ತಾ ಸಿಹಿ!
– 17 ನೇ ಬಜೆಟ್ ಮಂಡಿಸುತ್ತಿರುವ ಸಿಎಂ ಸಿದ್ದರಾಮಯ್ಯ
– ಮೊಟ್ಟ ಮೊದಲ ಬಾರಿಗೆ ಬಸ್ ನಿಲ್ದಾಣಗಳಲ್ಲಿ ಬಜೆಟ್ ಲೈವ್
– ಮಹಿಳೆಯರಿಗೆ ಸೀರೆ… ಯುವಕರಿಗೆ ಉದ್ಯೋಗ ಸೃಷ್ಟಿಗೆ ಅವಕಾಶ?
ನಮ್ಮೂರ್ ಎಕ್ಸ್ ಪ್ರೆಸ್ ನ್ಯೂಸ್
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾರ್ಚ್ 6ರಂದು 2026-27 ನೇ ಸಾಲಿನ ಆಯವ್ಯಯವನ್ನು ಮಂಡಿಸಲಿದ್ದಾರೆ. ಸಿದ್ದರಾಮಯ್ಯ ಅವರ ಮೇಲೆ ರಾಜ್ಯದ ಜನ ಅನೇಕ ಭರವಸೆ ಇಟ್ಟಿದ್ದು ಏನಾಗಲಿದೆ ಎಂಬುದನ್ನು ಕಾದು ನೋಡಬೇಕಿದೆ. 2026 ರಂದು ರಾಜ್ಯದ 2026-27ನೇ ಸಾಲಿನ ಬಜೆಟ್ ಮಂಡಿಸಲಿದ್ದಾರೆ. ಇದು ಸಿದ್ದರಾಮಯ್ಯ ಅವರ 17ನೇ ಬಜೆಟ್ ಆಗಿರುವುದರಿಂದ ದಾಖಲೆಯಾಗಿದೆ.
ಈ ಬಜೆಟ್ ಮತ್ತೊಂದು ವಿಶೇಷವೆಂದರೆ ಮೊಟ್ಟ ಮೊದಲ ಬಾರಿಗೆ ಬಸ್ ನಿಲ್ದಾಣಗಳಲ್ಲಿ ಬಜೆಟ್ ನೇರ ಪ್ರಸಾರ ಮಾಡಲು ನಿರ್ಧರಿಸಲಾಗಿದೆ. ಈ ಬಜೆಟ್ ಮಂಡನೆಯ ನೇರಪ್ರಸಾರವನ್ನು ರಾಜ್ಯದ 230 ಸರ್ಕಾರಿ ಬಸ್ ನಿಲ್ದಾಣಗಳಲ್ಲಿ ಪ್ರಸಾರ ಮಾಡಲು ಉದ್ದೇಶಿಸಲಾಗಿದೆ. ಬಜೆಟ್ ಮಂಡನೆಯ ನೇರ ಪ್ರಸಾರವನ್ನು ರಾಜ್ಯದ ಜನತೆಗೆ ತಲುಪಿಸುವ ಉದ್ದೇಶದಿಂದ 230 ಸರ್ಕಾರಿ ಬಸ್ ನಿಲ್ದಾಣಗಳಲ್ಲಿ ಇರುವ ತನ್ನ ಡಿಜಿಟಲ್ ಡಿಸ್ಪ್ಲೇ (LED) ಪರದೆಗಳ ಮೂಲಕ ನೇರ ಪ್ರಸಾರ ಮಾಡಲು ಮುಂದಾಗಿದೆ.
ವಿಧಾನಸೌಧದಲ್ಲಿ ನಡೆಯುವ ಬಜೆಟ್ ಮಂಡನೆ ಹಾಗೂ ಬಳಿಕ ನಡೆಯಲಿರುವ ಮುಖ್ಯಮಂತ್ರಿಗಳ ಪತ್ರಿಕಾಗೋಷ್ಠಿಯ ನೇರ ಪ್ರಸಾರವನ್ನು ರಾಜ್ಯದ ವಿವಿಧ ಬಸ್ ನಿಲ್ದಾಣಗಳಲ್ಲಿ ಜನರು ವೀಕ್ಷಿಸುವ ಅವಕಾಶ ಇರಲಿದೆ.
ಮಹಿಳೆಯರಿಗೆ ಸೀರೆ… ಯುವಕರಿಗೆ ಉದ್ಯೋಗ ಸೃಷ್ಟಿಗೆ ಅವಕಾಶದ ಬಗ್ಗೆ ಹೆಚ್ಚು ಚರ್ಚೆಯಲ್ಲಿದೆ.








