ಬೆಂಗಳೂರು ಸೇರಿ ಎಲ್ಲಾ ಕಡೆ ಬಸ್ ರಶ್ ರಶ್
– ಹಬ್ಬಕ್ಕೆ ಸಾಲು ಸಾಲು ರಜೆ : ರೈಲು ಕೂಡ ಜಾಗ ಇಲ್ಲ
– ದೀಪಾವಳಿ ಹಬ್ಬಕ್ಕೆ ಊರುಗಳಿಗೆ ತೆರಳುತ್ತಿರುವ ಜನ
NAMMUR EXPRESS NEWS
ಬೆಂಗಳೂರು: ಎಲ್ಲೆಡೆ ಪ್ರಸಿದ್ಧ ಹಬ್ಬ ದೀಪಾವಳಿ, ದೀಪಾವಳಿಯ ಪ್ರಯುಕ್ತ ಸಾಲು ಸಾಲು ರಜೆ ಹಿನ್ನೆಲೆಯಲ್ಲಿ ಜನರು ಊರುಗಳತ್ತ ತೆರಳುತ್ತಿದ್ದು ಬಸ್ಗಳಲ್ಲಿ ಪ್ರಯಾಣಿಕರಿಂದ ತುಂಬಿ ತುಳುಕುತ್ತಿವೆ. ರೈಲುಗಳಲ್ಲಿ ಪ್ರಯಾಣಿಕರ ಸಂಖ್ಯೆ ಹೆಚ್ಚಾಗಿದೆ. ಆದರೆ ರೈಲು ಕೂಡ ಜಾಗ ಇಲ್ಲದಂತಹ ಪರಿಸ್ಥಿತಿ ಎದುರಾಗಿದೆ. ಶನಿವಾರ ಕೆಲಸ ಮುಗಿಸಿಕೊಂಡು ಬಹುತೇಕ ಜನರು ರಾತ್ರಿಯೇ ಪ್ರಯಾಣಿ ಬೆಳೆಸಿದ್ದು, ಬೆಂಗಳೂರು ನಗರದ ಮೆಜೆಸ್ಟಿಕ್ ಕೆಎಸ್ಆರ್ಟಿಸಿ ಬಸ್ ನಿಲ್ದಾಣ, ಶಾಂತಿನಗರ ಸೇರಿದಂತೆ ವಿವಿಧ ನಿಲ್ದಾಣಗಳಲ್ಲಿ ಬಾರಿ ಸಂಖ್ಯೆಯಲ್ಲಿ ಜನರು ಜಮಾಯಿಸಿದ್ದು, ತಮ್ಮ ತಮ್ಮ ಊರುಗಳಿಗೆ ತೆರಳಿದ್ದಾರೆ. ಹಬ್ಬದ ಹಿನ್ನೆಲೆಯಲ್ಲಿ ಕೆಎಸ್ ಆರ್ ಟಿಸಿ ಜೊತೆಗೆ ಬಿಎಂಟಿಸಿ ಬಸ್ಗಳನ್ನು ಸಹ ವಿವಿಧ ಜಿಲ್ಲೆಗಳಿಗೆ ಸಂಚರಿಸುತ್ತಿದ್ದು, ಎಲ್ಲಾ ಬಸ್ಗಳಲ್ಲಿ ಪ್ರಯಾಣಿಕರು ತುಂಬಿ ತುಳುಕುತ್ತಿದ್ದರು.
ಶಕ್ತಿಯೋಜನೆಯಡಿ ಮಹಿಳೆಯರಿಗೆ ಉಚಿತ ಪ್ರಯಾಣ ಇರುವ ಹಿನ್ನೆಲೆಯಲ್ಲಿ ಸಾಮಾನ್ಯ ಬಸ್ಗಳಲ್ಲಿ ಮಹಿಳೆಯರ ಸಂಖ್ಯೆ ಹೆಚ್ಚಾಗಿ ಕಂಡು ಬರುತ್ತಿದೆ.
– ದೀಪಾವಳಿ ಹಬ್ಬದ ಹಿನ್ನಲೆಯಲ್ಲಿ ರೈಲುಗಳು ಫುಲ್ ರಶ್!
ದೇಶದಾದ್ಯಂತ ಸಡಗರದಿಂದ ದೀಪಾವಳಿ ಹಬ್ಬವನ್ನು ಆಚರಿಸಲಿದ್ದು, ಉದ್ಯೋಗಕ್ಕಾಗಿ ಬೆಂಗಳೂರಲ್ಲಿ ನೆಲೆಸಿರುವ ವಿವಿಧ ರಾಜ್ಯಗಳ ಜನರು ಸಹ ತಮ್ಮ ತಮ್ಮ ಊರುಗಳತ್ತ ತೆರಳುತ್ತಿದ್ದು ರೈಲುಗಳಲ್ಲೂ ಸಹ ಜಾಗವಿಲ್ಲದಂತೆ ಪ್ರಯಾಣಿಸುತ್ತಿದ್ದಾರೆ.
– ಖಾಸಗಿ ಬಸ್ಗಳ ಟಿಕೆಟ್ ದರ ದುಪ್ಪಟ್ಟಾದರೂ ಬಸ್ ಗಳಿಗೆ ಭಾರೀ
ಡಿಮಾಂಡ್
ಹೆಚ್ಚಿನ ಸಂಖ್ಯೆಯಲ್ಲಿ ಜನರು ಊರುಗಳತ್ತ ತೆರಳುತ್ತಿದ್ದು ಇದನ್ನೇ ಬಂಡವಾಳ ಮಾಡಿಕೊಂಡ ಕೆಲ ಖಾಸಗಿ ಬಸ್ ಮಾಲೀಕರು ಟಿಕೇಟ್ ದರವನ್ನು ದುಪ್ಪಟ್ಟು ಮಾಡಿದ್ದು, ದುಪ್ಪಟ್ಟು ದರವನ್ನು ಕೂಡ ಲೆಕ್ಕಿಸದೆ ಜನರು ತಮ್ಮ ಊರುಗಳತ್ತ ಪಯಣ ಬೆಳೆಸಿದ್ದಾರೆ.







