Categories
ಬೆಂಗಳೂರು

ಚೈತ್ರಾ ಕೇಸ್: ಹಾಲಶ್ರೀ ಸ್ವಾಮೀಜಿ ರೈಲಲ್ಲಿ ಅರೆಸ್ಟ್.!

ಚೈತ್ರಾ ಕೇಸ್: ಹಾಲಶ್ರೀ ಸ್ವಾಮೀಜಿ ರೈಲಲ್ಲಿ ಅರೆಸ್ಟ್.!
– ಓರಿಸ್ಸಾದ ಕಟಕ್ ಬಳಿ ರೈಲಿನಲ್ಲಿ ಸಿಕ್ಕಿಬಿದ್ದ ಶ್ರೀಗಳು
– ಚೈತ್ರಾ ಕುಂದಾಪುರ ಗ್ಯಾಂಗ್‌ನ 3ನೇ ಆರೋಪಿ
– ಮತ್ತಷ್ಟು ಮಂದಿ ಬಂಧನವಾಗುವ ಭೀತಿ..!

NAMMUR EXPRESS NEWS
ಬೆಂಗಳೂರು: ಚೈತ್ರಾ ಕುಂದಾಪುರ ವಂಚನೆ ಪ್ರಕರಣದ ಮೂರನೇ ಆರೋಪಿ ಹಾಲಶ್ರೀ ಸ್ವಾಮೀಜಿ ಬಂಧನವಾಗಿದೆ.
ಬೈಂದೂರಿನ ಉದ್ಯಮಿಗೆ ಬಿಜೆಪಿಯಿಂದ ಎಂಎಲ್‌ಎ ಟಿಕೆಟ್‌ ಕೊಡಿಸುವುದಾಗಿ 5 ಕೋಟಿ ರೂ. ಪಡೆದು ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಂದೂ ಕಾರ್ಯಕರ್ತೆ ಚೈತ್ರಾ ಕುಂದಾಪುರ ಗ್ಯಾಂಗ್‌ನ 3ನೇ ಆರೋಪಿ ಅಭಿನವ ಹಾಲ ಸ್ವಾಮೀಜಿಯನ್ನು ಸಿಸಿಬಿ ಪೊಲೀಸರು ಒಡಿಶಾದಲ್ಲಿ ಬಂಧಿಸಲಾಗಿದೆ. ಈ ವಂಚನೆ ಪ್ರಕರಣದ ಪ್ರಮುಖ ಆರೋಪಿಯಾಗಿದ್ದ ಹಾಲಶ್ರೀ ಸ್ವಾಮೀಜಿ ಬಂಧನ ಭೀತಿಯಿಂದ ತಲೆಮರೆಸಿಕೊಂಡು, ನಿರೀಕ್ಷಣಾ ಜಾಮೀನು ಪ್ರಯತ್ನಿಸಿದ್ದರಾದರೂ ನ್ಯಾಯಾಲಯವು ಅವರ ಅರ್ಜಿ ವಿಚಾರಣೆಯನ್ನು ಸೆಪ್ಟೆಂಬರ್ 19ಕ್ಕೆ ಬೆಂಗಳೂರಿನ ಸಿಸಿಹೆಚ್ 57 ಕೋರ್ಟ್ ಮುಂದೂಡಿದೆ.

ಕಳೆದ ವಾರ ಚೈತ್ರಾ ಕುಂದಾಪುರ ಬಂಧನವಾಗುತ್ತಿದ್ದಂತೆಯೇ ಸ್ವಾಮೀಜಿ ನಾಪತ್ತೆಯಾಗಿದ್ದರು. ಪ್ರಕರಣದ ಮೂರನೇ ಆರೋಪಿ ವಿಜಯನಗರ ಜಿಲ್ಲೆಯ ಅಭಿನವ ಹಾಲಶ್ರೀಯನ್ನು ಒಡಿಶಾದ ಕಟಕ್ ನಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಹಾಲಶ್ರೀ ಸ್ವಾಮೀಜಿ ಮಂಗಳವಾರ ಓರಿಸ್ಸಾದ ಕಟಕ್ ಬಳಿ ರೈಲಿನಲ್ಲಿ ಭುವನೇಶ್ವರದಿಂದ ಬೋಧಾಯಾಗೆ ತೆರಳುತ್ತಿದ್ದಾಗ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಒಡಿಶಾ ಪೊಲೀಸರ ಸಹಕಾರದಿಂದ ಹಾಲಶ್ರೀಯನ್ನು ಬಂಧಿಸುವಲ್ಲಿ ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದು, ಮಂಗಳವಾರ ರಾತ್ರಿ ಬೆಂಗಳೂರಿಗೆ ಕರೆತರಲಿದ್ದಾರೆ ಎನ್ನಲಾಗಿದೆ. ಪ್ರಕರಣದಲ್ಲಿ ಮತ್ತಷ್ಟು ಮಂದಿಯ ಹೆಸರು ಬರುವ ಸಾಧ್ಯತೆ ಇದೆ.

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.