Categories
ಬೆಂಗಳೂರು ರಾಜ್ಯ

ಮೂರ್ಛೆ ತಪ್ಪಿ ಬಿದ್ದ ಚೈತ್ರಾ ಕುಂದಾಪುರ..!

ಮೂರ್ಛೆ ತಪ್ಪಿ ಬಿದ್ದ ಚೈತ್ರಾ ಕುಂದಾಪುರ..!
– ಚೈತ್ರಾ ಬಾಯಿಯಲ್ಲಿ ನೊರೆ: ಆಸ್ಪತ್ರೆಗೆ ದಾಖಲು
– ಸಿಸಿಬಿ ವಿಚಾರಣೆ ವೇಳೆಯೇ ಘಟನೆ
– ಹಲವು ಅನುಮಾನ ಏನಾಯ್ತು..?

NAMMUR EXPRESS NEWS- ಬೆಂಗಳೂರು: ಉದ್ಯಮಿಗೆ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ವಂಚನೆ ಎಸಗಿದ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ಚೈತ್ರಾ ಕುಂದಾಪುರ ಅವರು ಅಸ್ವಸ್ಥರಾಗಿದ್ದಾರೆ. ಶುಕ್ರವಾರ ಬೆಳಗ್ಗೆ 8 ಗಂಟೆಯ ವೇಳೆಗೆ ಮಹಿಳಾ ಸಾಂತ್ವನ ಕೇಂದ್ರದಿoದ ಚೈತ್ರಾಳನ್ನು ಸಿಸಿಬಿ ಕಚೇರಿಗೆ ವಿಚಾರಣೆಗೆ ಕರೆ ತಂದಿದ್ದಾರೆ. 45 ನಿಮಿಷದ ವಿಚಾರಣೆ ವೇಳೆ ಆಕೆ ಪ್ರಜ್ಞಾಹೀನ ಸ್ಥಿತಿಗೆ ಬಂದು ಕುಸಿದು ಬಿದ್ದಿದ್ದಾಳೆ ಎನ್ನಲಾಗಿದೆ. ವಿಚಾರಣೆ ವೇಳೆ ಮೂರ್ಛೆ ಹೋದ ಚೈತ್ರಾಳನ್ನು ವಿಕ್ಟೋರಿಯಾ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಸದ್ಯ ತುರ್ತು ಚಿಕಿತ್ಸಾ ವಾರ್ಡ್ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಚೈತ್ರಾ ಬಾಯಿಯಲ್ಲಿ ನೊರೆ ಬಂದ ದೃಶ್ಯ ಸೆರೆಯಾಗಿದೆ. ಈಗ ಬಂದಿರುವ ಮಾಹಿತಿ ಪ್ರಕಾರ ಚೈತ್ರಾ ಮೂರ್ಛೆ ರೋಗದಿಂದ ಬಳಲುತ್ತಿದ್ದು, ವಿಚಾರಣೆ ವೇಳೆ ಪ್ರಜ್ಞೆ ತಪ್ಪಿರುವ ಸಾಧ್ಯತೆಯಿದೆ ಎನ್ನಲಾಗಿದೆ. ಈಗಾಗಲೇ ರಾಜ್ಯ ಮಟ್ಟದಲ್ಲಿ ಕುತೂಹಲ ಮೂಡಿಸಿರುವ ಈ ವಂಚನೆ ಪ್ರಕರಣ ನಾಟಕೀಯ ಹಂತಕ್ಕೆ ತಲುಪಿದೆ ಎಂಬ ಮಾತುಗಳು ಕೇಳಿ ಬಂದಿವೆ.

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.