4 ದಿನಗಳ ಕಾಲ ಭಾರೀ ಮಳೆ ಸಾಧ್ಯತೆ
– ಕರಾವಳಿ, ಮಲೆನಾಡಲ್ಲಿ ಮಳೆ ಅಲರ್ಟ್
– 3 ದಿನಗಳಿಂದ ತುಸು ವಿಶ್ರಾಂತಿ ಪಡೆದ ಮಳೆ
NAMMUR EXPRESS NEWS
ಬೆಂಗಳೂರು: ರಾಜ್ಯದಲ್ಲಿ ಮಳೆ ತುಸು ವಿಶ್ರಾಂತಿ ಪಡೆದಿದ್ದು, 4 ದಿನ ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಈಗಾಗಲೇ 1 ವಾರದ ಮಳೆಯ ಆಗಮನದಿಂದ ರೈತರು ಸಂತಸಗೊಂಡಿದ್ದು, ಕೆಲವೊಂದು ಕಡೆ ಮಳೆಯಿಂದಾಗಿ ಜನರ ಜೀವನ ಅಸ್ಥವ್ಯಸ್ಥವಾಗಿದೆ. ಇನ್ನು ರಾಜ್ಯದ ಕರಾವಳಿ ಜಿಲ್ಲೆಗಳು ಹಾಗೂ ದಕ್ಷಿಣ ಒಳನಾಡಿನ ಹಲವು ಪ್ರದೇಶಗಳಲ್ಲಿ ಮುಂದಿನ 4 ದಿನಗಳವರೆಗೂ ಭಾರಿ ಮಳೆಯಾಲಿದ್ದು, ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಹವಾಮಾನ ಇಲಾಖೆ ಪ್ರಕಾರ, ದಕ್ಷಿಣಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಕೊಡುಗು, ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಹೀಗಾಗಿ ಅತೀಯಾದ ಮಳೆಯಿಂದ ಉಂಟಾಗುವ ತೊಂದರೆಗಳ ಬಗೆ ಎಚ್ಚರಿಕೆ ಇರುವಂತೆ ಮುನ್ಸೂಚನೆ ನೀಡಲಾಗಿದೆ.
ಹಲವು ಜೀವ ಹಾನಿ!:
ವರುಣನ ಆರ್ಭಟದಿಂದಾಗಿ ನೆರೆ ಪ್ರವಾಹದಿಂದ ಹಳ್ಳ ಕೊಳ್ಳ, ನದಿಗಳು ತುಂಬಿ ಪ್ರಾಣ ಹಾನಿ ಕೂಡ ಸಂಭವಿಸಿದೆ. ಕಳೆದೆರಡು ದಿನಗಳಿಂದ ಉಡುಪಿ ಜಿಲ್ಲೆಯ ಬಹುತೇಕ ಕಡೆಗಳಲ್ಲಿ ಮಳೆರಾಯ ಕೊಂಚ ಬಿಡುವು ಕೊಟ್ಟಿದೆ. ಆದರೆ ಹವಾಮಾನ ಇಲಾಖೆ ನೀಡಿರುವ ಮುನ್ಸೂಚನೆಯ ಪ್ರಕಾರ ಕರಾವಳಿಯ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಸೇರಿದಂತೆ ಕರಾವಳಿ ಹಾಗೂ ಕೊಡಗು ಜಿಲ್ಲೆಯಲ್ಲಿ ಭಾರೀ ಪ್ರಮಾಣದಲ್ಲಿ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ.
ಕರಾವಳಿಯ ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಪ್ರಮಾಣದಲ್ಲಿ ಗಾಳಿ ಬೀಸುವ ಸಾಧ್ಯತೆಯಿದ್ದು ಜನರು ಎಚ್ಚರಿಕೆಯಿರುವಂತೆ ಸೂಚಿಸಲಾಗಿದೆ.
ಇದನ್ನೂ ಓದಿ : ಯಾವ ಊರಲ್ಲಿ ಜು.9ಕ್ಕೆ ಅಡಿಕೆ ದರ ಎಷ್ಟು ?
HOW TO APPLY : NEET-UG COUNSELLING 2023