ಮೈಸೂರು ಚಲೋದಲ್ಲಿ ಚಿಕ್ಕಮಗಳೂರು ಜಿಲ್ಲೆ ನಾಯಕರು!
– ಸಿದ್ದರಾಮಯ್ಯ ರಾಜೀನಾಮೆ ಕೊಡುವಂತೆ ಪಟ್ಟು
– ವಿಜಯೇಂದ್ರ ಅವರ ನೇತೃತ್ವದಲ್ಲಿ ಪಾದಯಾತ್ರೆ
NAMMUR EXPRESS NEWS
ಬೆಂಗಳೂರು: ಭ್ರಷ್ಟ ಕಾಂಗ್ರೆಸ್ ಸರ್ಕಾರ ತೊಲಗಿಸಿ ಎಂಬ ಘೋಷಣೆಯಡಿ ಹಮ್ಮಿಕೊಂಡಿರುವ ಬಿಜೆಪಿ-ಜೆಡಿಎಸ್ ಮೈಸೂರು ಶನಿವಾರ ಬೆಳಗ್ಗೆ ಕೆಂಗೇರಿಯ ಕೆಂಪಮ್ಮ ದೇವಸ್ಥಾನದ ಬಳಿ ಚಾಲನೆ ನೀಡಲಾಯಿತು.
ಪಾದಯಾತ್ರೆಯಲ್ಲಿ ಚಿಕ್ಕಮಗಳೂರು ಜಿಲ್ಲಾ ಅಧ್ಯಕ್ಷರಾದ ದೇವರಾಜ್ ಶೆಟ್ಟಿ ಮಾತನಾಡಿ, ನಮಗೆ 100 ಜನ ಬರಬೇಕು ಎಂದು ರಾಜ್ಯದಿಂದ ಆದೇಶ ಇತ್ತು, ಆದರೆ ನಾವು 150 ಕ್ಕೂ ಹೆಚ್ಚು ಕಾರ್ಯಕರ್ತರು ಪಾದಯಾತ್ರೆಯಲ್ಲಿ ಹೆಜ್ಜೆ ಹಾಕುತಿದ್ದೇವೆ. ಇನ್ನು 8 ದಿನಗಳ ಕಾಲ ಈ ಪಾದಯಾತ್ರೆಯಲ್ಲಿ ಭಾಗವಹಿಸುತ್ತಿದ್ದೇವೆ. ಈ ಪಾದಯಾತ್ರೆ ಸುಮಾರು 2 ವರೆ 3 ಕಿ. ಮೀ ವರೆಗೆ ಜನ ನಡೆದುಕೊಂಡು ಬರುತ್ತಿದ್ದಾರೆ. ಕಾಂಗ್ರೆಸ್ ನೇತೃತ್ವದ ಸರ್ಕಾರ ರಾಜೀನಾಮೆ ಕೊಡುವವರೆಗೂ ಹೋರಾಟ ಮುಂದುವರೆಯುತ್ತದೆ. ಇಂದು 12ಕಿ.ಮೀ ವರೆಗೂ ಅಧಿಕ ಪಾದಯಾತ್ರೆ ನಡೆದಿದೆ .2-3 ಕಿ.ಮೀಗಳಷ್ಟು ಉದ್ದ ರಸ್ತೆಯಲ್ಲಿ ಕಾರ್ಯಕರ್ತರು ಜಮಾಯಿಸಿದ್ದರು. ಗಂಟೆಗಟ್ಟಲೆ ಟ್ರಾಫಿಕ್ ಜಾಮ್ ಉಂಟಾಗಿತ್ತು. ಭಾರತೀಯ ಜನತಾ ಪಾರ್ಟಿಯ ನೇತೃತ್ವದಲ್ಲಿ, ವಿಜಯೇಂದ್ರ ಅವರ ನೇತೃತ್ವದಲ್ಲಿ ಮತ್ತು ಜೆಡಿಎಸ್ ರಾಜ್ಯಾಧ್ಯಕ್ಷರಾದ ಕುಮಾರ್ ಸ್ವಾಮಿ ಅವರ ನೇತೃತ್ವದಲ್ಲಿ ಈ ಪಾದಯಾತ್ರೆ ನಡೆಯುತ್ತಿದೆ. ಪಾದಯಾತ್ರೆ ಅಂತಿಮವಾಗುವ ಮುಂಚೆ ಕಾಂಗ್ರೇಸ್ ನೇತೃತ್ವದ ಸರ್ಕಾರ ಪತನ ಆಗಬೇಕು, ಸಿದ್ದರಾಮಯ್ಯ ರಾಜೀನಾಮೆ ಕೊಡಬೇಕು ಎನ್ನುವುದು ನಮ್ಮೆಲ್ಲರ ಒತ್ತಾಯ ಎಂದರು. ಬೋಜೆ ಗೌಡರು ಕೂಡ ನಮ್ಮ ಜೊತೆ ಇದ್ದಾರೆ. ನೂರಾರು ಕಾರ್ಯಕರ್ತರ ಜೊತೆ ಹೆಜ್ಜೆ ಹಾಕುತ್ತಿದ್ದಾರೆ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಒಟ್ಟಾಗಿ ಪಾದಯಾತ್ರೆ ನಡೆಸುತ್ತಿದ್ದೇವೆ ಎಂದರು. ಜಿಲ್ಲೆಯಲ್ಲಿ ಸುಮಾರು 1 ಸಾವಿರ ಬಿಜೆಪಿ ಕಾರ್ಯಕರ್ತರು ಹಾಗು 500 ಜನ ಜೆಡಿಎಸ್ ಕಾರ್ಯಕರ್ತರು ಭಾಗವಹಿಸಲಿದ್ದಾರೆ ಎಂದರು.
ಯುವ ಮೋರ್ಚಾ ಅಧ್ಯಕ್ಷರಾದ ಸಂತೋಷ್ ಕೋಟ್ಯಾನ್ ಮತ್ತು ಅನೇಕರು ಭಾಗವಹಿಸಿದ್ದರು.
ರಾಜ್ಯ ರಾಜಕೀಯದಲ್ಲಿ ಭಾರೀ ಸಂಚಲನ!
ರಾಜ್ಯ ಕಾಂಗ್ರೇಸ್ ಸರ್ಕಾರದ ಹಗರಣದ ವಿರುದ್ಧ ರಾಜ್ಯ ಬಿಜೆಪಿ ಕರೆಕೊಟ್ಟಿರುವ ಮೈಸೂರು ಚಲೋ ಪಾದಯಾತ್ರೆ ಕಾರ್ಯಕ್ರಮಕ್ಕೆ ರಾಜ್ಯದ ಮೂಲೆ ಮೂಲೆಯಿಂದ ಬಿಜೆಪಿ, ಜೆಡಿಎಸ್ ನಾಯಕರು, ಕಾರ್ಯಕರ್ತರು ಆಗಮಿಸಿದ್ದಾರೆ. ಬೆಂಗಳೂರಿನಿಂದ ಮೈಸೂರಿನವರೆಗೆ ನಡೆಯಲಿರುವ ಪಾದಯಾತ್ರೆ ಬೆಂಗಳೂರಿನಲ್ಲಿ ಮಾಜಿ ಮುಖ್ಯಮಂತ್ರಿ ಬಿ ವೈ ವಿಜಯೇಂದ್ರ ಹಾಗೂ ಹೆಚ್.ಡಿ ಕುಮಾರಸ್ವಾಮಿಯವರ ನೇತೃತ್ವದಲ್ಲಿ ಉದ್ಘಾಟನೆಗೊಂಡು ಆಗಸ್ಟ್ 8 ರಂದು ಮೈಸೂರಿನಲ್ಲಿ ಕೊನೆಗೊಳ್ಳಲಿದೆ.