ರಾಜ್ಯಾದ್ಯಂತ ಶೀತಗಾಳಿ, ಮಳೆ!
– ಇಂದಿನಿಂದ 6 ದಿನಗಳ ಕಾಲ ಮಳೆ ಸಾಧ್ಯತೆ
– ಹವಮಾನ ವರದಿ ಹೇಗಿದೆ!?
NAMMUR EXPRESS NEWS
ಬೆಂಗಳೂರು: ಈಗಾಗಲೇ ರಾಜ್ಯದ ಕೆಲವು ಭಾಗಗಳಲ್ಲಿ ಮಳೆಯಾಗುತ್ತಿದ್ದು, ಕರ್ನಾಟಕದ ದಕ್ಷಿಣ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಜನವರಿ 4ರಿಂದ 6 ದಿನಗಳ ಕಾಲ ಮಳೆಯಾಗುವ ಸಾಧ್ಯತೆಯಿದೆ. ರಾಜ್ಯಾದ್ಯಂತ ಶೀತಗಾಳಿ ಬೀಸುತ್ತಿದೆ. ಮಂಜು ಮುಸುಕಿದ ವಾತಾವರಣವಿದೆ. ಇದರ ನಡುವೆ ಹವಾಮಾನ ಇಲಾಖೆ ಮಳೆಯ ಮುನ್ಸೂಚನೆ ನೀಡಿದೆ. ಇಂದಿನಿಂದ ಜನವರಿ 10ರವರೆಗೆ ದಕ್ಷಿಣ ಒಳನಾಡು, ಕರಾವಳಿ ಹಾಗೂ ಉತ್ತರ ಒಳನಾಡಿನ ಕೆಲವೇ ಕೆಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎನ್ನಲಾಗಿದೆ. ಬೆಂಗಳೂರಿನಲ್ಲಿ ಬುಧವಾರದಿಂದಲೂ ಮೋಡಕವಿದ ವಾತಾವರಣವಿದೆ.
ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಬೀದರ್, ಧಾರವಾಡ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರದಲ್ಲಿ ಮಳೆಯಾಗಲಿದೆ. ಹಾಗೆಯೇ ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ. ದಕ್ಷಿಣ ಕನ್ನಡದ ಮಾಣಿಯಲ್ಲಿ ಮಳೆಯಾಗಲಿದೆ. ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರೆಯಲಿದೆ.
ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು, ಹಗುರ ಮಳೆಯಾಗುವ ಸಾಧ್ಯತೆ ಇದೆ ವಿಜಯಪುರದಲ್ಲಿ 12.0 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ, 27 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಎಚ್ಎಎಲ್ನಲ್ಲಿ 27.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 28.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 27.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಹೊನ್ನಾವರದಲ್ಲಿ 33.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 34.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಮಂಗಳೂರಿನಲ್ಲಿ 30.4ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 30.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 15.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಮೈಸೂರಿನಲ್ಲಿ 29.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಶಿವಮೊಗ್ಗದಲ್ಲಿ 31.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.