- ಶಾಲೆ ಓಪನ್ ಮುನ್ನವೇ ಮಕ್ಕಳಿಗೆ ಕಾಟ
- ತುಮಕೂರಿನಲ್ಲಿ ದೇಗುಲ, ಪ್ರವಾಸಿ ತಾಣ ಬಂದ್
- ದ.ಕ ದಲ್ಲಿ ಸ್ವತಂತ್ರ್ಯೋತ್ಸವದಂದೂ ಕರ್ಫ್ಯೂ
ಬೆಂಗಳೂರು: ರಾಜ್ಯದಲ್ಲಿ ಆಗಸ್ಟ್ 11ರಂದು 1,826 ಜನರಿಗೆ ಕೊರೊನಾ ಸೋಂಕು ದೃಢವಾಗಿದೆ. 33 ಮಂದಿ ಸಾವನ್ನಪ್ಪಿದ್ದಾರೆ. ರಾಜಧಾನಿ ಬೆಂಗಳೂರಿನಲ್ಲಿ ಕೊರೊನಾ ಮೂರನೇ ಅಲೆ ಸದ್ದಿಲ್ಲದೇ ಕಾಲಿಟ್ಟಂತಿದೆ. ಕೊರೊನಾ ಹೊಸ ತಳಿ ಡೆಲ್ಟಾ, ಕಪ್ಪಾ ಬೆನ್ನಲ್ಲೇ ಇದೀಗ ಮಕ್ಕಳಲ್ಲಿ ಸೋಂಕು ಹೆಚ್ಚುತ್ತಿದೆ. ಕಳೆದ 10 ದಿನಗಳಲ್ಲಿ ಬೆಂಗಳೂರಿನಲ್ಲಿ 505 ಮಕ್ಕಳಲ್ಲಿ ಸೋಂಕು ಪತ್ತೆಯಾಗಿದೆ. ಆಗಸ್ಟ್ 1ರಿಂದ 10ರವರೆಗೆ ಒಟ್ಟು 246 ಹೆಣ್ಣುಮಕ್ಕಳು ಹಾಗೂ 259 ಗಂಡು ಮಕ್ಕಳಲ್ಲಿ ಸೋಂಕು ದೃಢಪಟ್ಟಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಎಲ್ಲಾ ಮಕ್ಕಳು 15 ವರ್ಷದೊಳಗಿನವರು ಎನ್ನಲಾಗಿದೆ. ರಾಜ್ಯ ಸರ್ಕಾರ ಶಾಲೆಗಳನ್ನು ಆರಂಭ ಮಾಡಲು ಮುಂದಾಗಿರುವ ಬೆನ್ನಲ್ಲೇ ಬೆಂಗಳೂರಿನಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿದ್ದು, ಅದರಲ್ಲೂ ಚಿಕ್ಕ ಮಕ್ಕಳಲ್ಲಿ ಮಹಾಮಾರಿ ಇನ್ನಿಲ್ಲದಂತೆ ಕಾಡುತ್ತಿದೆ.
ತುಮಕೂರಿನಲ್ಲಿ ನಿಷೇಧಾಜ್ಞೆ: ಜಿಲ್ಲೆಯಲ್ಲಿ ಕೊರೊನಾ ವೈರಸ್ 3 ನೇ ಅಲೆ ಭೀತಿ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಮುಂಜಾಗ್ರತ ಕ್ರಮವಾಗಿ ಪ್ರವಾಸಿ ತಾಣಗಳು, ದೇವಸ್ಥಾನಗಳಿಗೆ ಭಕ್ತರ ಪ್ರವೇಶಕ್ಕೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಸಾಲು ಸಾಲು ಹಬ್ಬಗಳ ಹಿನ್ನೆಲೆಯಲ್ಲಿ ದೇಗುಲಕ್ಕೆ ಹೆಚ್ಚಿನ ಜನ ಸೇರುವುದನ್ನು ತಡೆಯಲು ನಿಷೇಧಾಜ್ಞೆ ಹೊರಡಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಕೆಂಡ್ ಕರ್ಫ್ಯೂ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಕೇಸ್ ಹೆಚ್ಚಳವಾಗಿರುವ ಹಿನ್ನೆಲೆಯಲ್ಲಿ ಆಗಸ್ಟ್ 15ರಂದು ಕೂಡ ವಾರಾಂತ್ಯ ಕರ್ಫ್ಯೂ ಜಾರಿಯಲ್ಲಿ ಇರುತ್ತದೆ ಎಂದು ಸೂಚಿಸಲಾಗಿದೆ. ಸ್ವಾತಂತ್ರ್ಯ ದಿನ ಆಗಿದ್ದರೂ ವೀಕೆಂಡ್ ಕರ್ಫ್ಯೂ ಇರಲಿದೆ. ಹೆಚ್ಚು ಜನರನ್ನು ಸೇರಿಸದೇ ಧ್ವಜಾರೋಹಣ ಮಾಡಬೇಕು ಎಂದು ಆದೇಶ ನೀಡಲಾಗಿದೆ. ರಾಜ್ಯದ, ಮಲೆನಾಡಿನ ಎಲ್ಲಾ ಸುದ್ದಿಗಳಿಗೆ NAMMUR EXPRESS ” ಫೇಸ್ಬುಕ್ ಮತ್ತು ಯೂಟ್ಯೂಬ್ ಚಾನೆಲ್ ಲೈಕ್ ಮಾಡಿ , ಸಬ್ಸೈಬ್ ಆಗಿ , ವಾಟ್ಸಾಪ್ನಲ್ಲಿ ಎಲ್ಲಾ ನಿಮ್ಮ ಊರಿನ ಸುದ್ದಿ ಪಡೆಯಲು 9481949101ಗೆ ನಿಮ್ಮ ಹೆಸರು , ಊರು , ತಾಲೂಕು ವಾಟ್ಸಾಪ್ ಮಾಡಿರಿ. ನಿಮ್ಮ ಎಲ್ಲಾ ಸ್ನೇಹಿತರು ಹಾಗೂ ಗ್ರೂಪ್ ಗಳಿಗೆ ಶೇರ್ ಮಾಡಿರಿ. ಧನ್ಯವಾದಗಳು.